ETV Bharat / state

ವಿಧಾನಸೌಧದ ಎದುರು ಬಸವಣ್ಣ ಕೆಂಪೇಗೌಡರ ಅಶ್ವಾರೋಹಿ ಪ್ರತಿಮೆ ಸ್ಥಾಪನೆ: ಸಚಿವರಿಂದ ಸ್ಥಳ ಪರಿಶೀಲನೆ

ಬೆಂಗಳೂರಿನ ವಿಧಾನಸೌಧದ ಎದುರು ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ರಾಜ್ಯ ಸರಕಾರ ಸಿದ್ಧತೆ. ಕಂದಾಯ ಸಚಿವ ಆರ್ ಅಶೋಕ್ ಹಾಗೂ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲರಿಂದ ನೀಲನಕ್ಷೆ ಪರಿಶೀಲನೆ

Minister R Ashok, Minister CC Patil place verified
ಸಚಿವ ಆರ್ ಅಶೋಕ್ , ಸಚಿವ ಸಿ ಸಿ ಪಾಟೀಲ ಸ್ಥಳ ಪರಿಶೀಲನೆ
author img

By

Published : Jan 7, 2023, 10:09 PM IST

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಎದುರು ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ನಾಡಪ್ರಭು ಕೆಂಪೇಗೌಡ ಮತ್ತು ಜಗಜ್ಯೋತಿ ಬಸವೇಶ್ವರ ಅವರ ಪ್ರತಿಮೆಗಳನ್ನು ವಿಧಾನಸೌಧದ ಎದುರು ಸ್ಥಾಪಿಸುವ ಕುರಿತಾಗಿ ಶನಿವಾರ ಕಂದಾಯ ಸಚಿವ ಆರ್ ಅಶೋಕ್ ಹಾಗೂ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀಲನಕ್ಷೆ ಪರಿಶೀಲಿಸಿದರು. ನಂತರ ವಿಧಾನಸೌಧ ಎದುರು ನಿರ್ಮಿಸಲು ಉದ್ದೇಶಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಪ್ರತಿಮೆ ಸ್ಥಾಪಿಸುವ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದರು. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಹಾಗೂ ಸಮಾಜ ಸುಧಾರಕ ಬಸವಣ್ಣನವರ ಪ್ರತಿಮೆಗಳ ಮಾದರಿ ಸಿದ್ಧಪಡಿಸಿ ವಿಧಾನಸೌಧದ ಮುಂಭಾಗದಲ್ಲಿ ಸೂಕ್ತ ಸ್ಥಳ ನಿಗದಿಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅದರಂತೆ ಅವರು ಸಿದ್ಧಪಡಿಸಿಕೊಂಡು ತಂದಿರುವ ನೀಲನಕ್ಷೆ ಮತ್ತು ಪ್ರತಿಮೆಗಳ ಮಾದರಿಗಳನ್ನು ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಪ್ರತಿಮೆಗಳನ್ನು ಆದಷ್ಟು ಶೀಘ್ರ ನಿರ್ಮಿಸಿ, ವಿಧಾನಸೌಧದ ಮುಂಭಾಗ ಶಂಕುಸ್ಥಾಪನೆ ನೆರವೇರಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ನಾಲ್ಕು ಮೀಟರ್ ಎತ್ತರದ ಈ ಎರಡು ಪುತ್ಥಳಿಗಳನ್ನು ಅಶ್ವಾರೂಢ ಭಂಗಿಗಳಲ್ಲಿ ಸ್ಥಾಪಿಸಬೇಕು ಮತ್ತು ಸುತ್ತಮುತ್ತ ಹಸಿರಿನಿಂದ ಕಂಗೊಳಿಸುವಂತೆ ಹೂವಿನ ಗಿಡಗಳನ್ನು ನೆಡಬೇಕು ಎಂದು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಡಾ. ಕೃಷ್ಣಾರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಮಹಾಪುರುಷರ ಪ್ರತಿಮೆ: ಎರಡು ಪ್ರಬಲ ಸಮುದಾಯಗಳ ಮಹಾಪುರುಷರ ಪುತ್ಥಳಿಯನ್ನು ನಿರ್ಮಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದೆ. ಇದೀಗ ಚುನಾವಣೆ ಹೊಸ್ತಿಲಲ್ಲಿ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಚುರುಕು ನೀಡಿದೆ. ವಿಧಾನಸೌಧದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣ ಸಂಬಂಧ 2021ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಬಳಿಕ ಆಗಿನ ಸಿಎಂ ಯಡಿಯೂರಪ್ಪ ಈ ಕುರಿತಾಗಿ ಸೂಕ್ತ ಪ್ರಸ್ತಾವನೆಯೊಂದಿಗೆ ಕಡತವನ್ನು ಮಂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದರು‌.

ಬಸವಣ್ಣವರ ಪ್ರತಿಮೆ:12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಬಸವಣ್ಣನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮುಕುಟಪ್ರಾಯವಾಗುತ್ತದೆ. ಸಾಮಾಜಿಕ ಸುಧಾರಕ ಬಸವಣ್ಣ ವಚನಗಳ ಮೂಲಕ ಸಮಾಜದಲ್ಲಿ ಅರಿವು ಮೂಡಿಸಿದರು. ಅಂಥ ಮಹಾನ್ ಕನ್ನಡದ ಒಬ್ಬ ತತ್ವಜ್ಞಾನಿ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿದ್ದರು. ಆದರೆ ಬಳಿಕ ಪ್ರಸ್ತಾವನೆ ಪ್ರಗತಿ ಕಂಡಿರಲಿಲ್ಲ.

ಕೆಂಪೇಗೌಡರ ಪ್ರತಿಮೆ:ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ನಗರ, ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೇ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ. ಇತ್ತೀಚೆಗೆ ಕೆಂಪೇಗೌಡ ಜಯಂತಿ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಪೇಗೌಡ ಪ್ರತಿಮೆ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದರು. ಬಳಿಕ ಎರಡೂ ಮಹಾಪುರುಷರ ಪ್ರತಿಮೆ ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿತ್ತು. ಈ ಮುಂಚೆ ಕಳೆದ ವರ್ಷ ನವೆಂಬರ್ 1 ರಂದು ಪ್ರತಿಮೆಗಳನ್ನು ಅನಾವರಣಗೊಳಿಸಲು ಉದ್ದೇಶಿಸಲಾಗಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ.

ಇದೀಗ ಪ್ರತಿಮೆ ನಿರ್ಮಾಣಕ್ಕೆ ಚುರುಕು ನೀಡಿರುವ ಸರ್ಕಾರ ಫೆಬ್ರವರಿ ಅಂತ್ಯಕ್ಕೆ ಪ್ರತಿಮೆ ಅನಾವರಣಕ್ಕೆ ಯೋಚಿಸಿದೆ. ಲೋಕೋಪಯೋಗಿ ಇಲಾಖೆಯ ಮುಖ್ಯ ವಾಸ್ತುಶಿಲ್ಪಿ ಪ್ರತಿಮೆಗಳನ್ನು ವಿನ್ಯಾಸಗೊಳಿಸುತ್ತಿದ್ದಾರೆ. ಎರಡು ಹೊಸ ಪ್ರತಿಮೆಗಳು ಒಂದೇ ಗಾತ್ರದ್ದಾಗಿರುತ್ತವೆ. ಇವುಗಳನ್ನು ಹಿತ್ತಾಳೆಯಿಂದ ಮಾಡಲಾಗುತ್ತದೆ.

ಇದನ್ನೂ ಓದಿ: ಮತ್ತೊಮ್ಮೆ ಭುಗಿಲೆದ್ದ ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ: ಗಣರಾಜ್ಯೋತ್ಸವಕ್ಕೆ ಹಿಂದೂ ಜನ ಜಾಗೃತಿ ಸಮಿತಿ ಪಟ್ಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.