ETV Bharat / state

ಜನವರಿ 1ರಿಂದ ಪರಿಷ್ಕೃತ ರೂಪದಲ್ಲಿ ವಿದ್ಯಾಗಮ ಯೋಜನೆ ಪುನಾರಂಭ - Vidyagama

ಉಚ್ಚ ನ್ಯಾಯಾಲಯದ ಅಪೇಕ್ಷೆಯನುಸಾರ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ಜನವರಿ 1ರಿಂದ ಪರಿಷ್ಕೃತ ರೂಪದಲ್ಲಿ ಮತ್ತೆ ವಿದ್ಯಾಗಮ ಯೋಜನೆ ಆರಂಭವಾಗಲಿದೆ.

Vidyagama project
ವಿದ್ಯಾಗಮ ಯೋಜನೆ
author img

By

Published : Dec 16, 2020, 6:26 PM IST

ಬೆಂಗಳೂರು: ಕೋವಿಡ್ ಕಾರಣಕ್ಕೆ ರಾಜ್ಯದಲ್ಲಿ ಶಾಲಾರಂಭ ಸಾಧ್ಯವಾಗ್ತಿಲ್ಲ. ಈ ಕಾರಣಕ್ಕೆ ಸರ್ಕಾರಿ‌ ಶಾಲಾ ಮಕ್ಕಳಿಗಾಗಿ ವಿದ್ಯಾಗಮ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿ ಮಾಡಿತ್ತು. ಆದರೆ ವಿದ್ಯಾಗಮ ಯೋಜನೆಯಲ್ಲಿ ಆದ ಲೋಪದೋಷದಿಂದಾಗಿ ಸ್ಥಗಿತವಾಗಿತ್ತು. ಇದೀಗ ಮತ್ತೆ ಹೊಸ ರೂಪದಲ್ಲಿ ವಿದ್ಯಾಗಮ ಯೋಜನೆ ಪುನಾರಂಭವಾಗಲಿದೆ.

letter
ಆದೇಶ ಪ್ರತಿ

ಕೋವಿಡ್​​ನಿಂದ ಶಾಲಾರಂಭ ತಡವಾಗುವ ಹಿನ್ನೆಲೆ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಮತ್ತೆ ವಿದ್ಯಾಗಮ ಯೋಜನೆಯನ್ನು ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೀತಿಯಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಕಳೆದ ಆಗಸ್ಟ್ 8ರಿಂದ ಆರಂಭಿಸಲಾಗಿದ್ದ ವಿದ್ಯಾಗಮ ಯೋಜನೆಯನ್ನು ಅಕ್ಟೋಬರ್ 10ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಮಕ್ಕಳು ಶಾಲೆಯಿಂದ ದೂರ ಉಳಿಯುವುದು, ಗ್ರಾಮೀಣ ಪ್ರದೇಶದಲ್ಲಿ ಪೋಷಕರೊಂದಿಗೆ ಶಾಲಾ ಸಮಯದಲ್ಲಿ ಕೆಲಸಗಳಿಗೆ ತೆರಳುವುದು. ಬಾಲ್ಯ ವಿವಾಹ, ಬಾಲ್ಯ ಕಾರ್ಮಿಕ ಪಿಡುಗುಗಳನ್ನ ತಪ್ಪಿಸಲು ವಿದ್ಯಾಗಮ ಸಹಕಾರಿಯಾಗಿತ್ತು. ಉಚ್ಚ ನ್ಯಾಯಾಲಯದ ಅಪೇಕ್ಷೆಯನುಸಾರ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ಯೋಜನೆ ಅನುಷ್ಠಾನವಾಗಲಿದ್ದು, 2021ನೇ ಜನವರಿ 1ರಿಂದಲೇ ಆರಂಭವಾಗಲಿದೆ.

ಶಿಕ್ಷಣ ಇಲಾಖೆಯಿಂದ ಹಲವು ಸುಧಾರಣಾ ಕ್ರಮ ಕೈಗೊಂಡಿದ್ದು, ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿ ವಿದ್ಯಾಗಮ ಪಾಠ ನಡೆಯಲಿದೆ. ಆನ್​ಲೈನ್​, ಚಂದನ ವಾಹಿನಿಯ ಪಾಠಗಳು ಎಂದಿನಂತೆ ಮುಂದುವರೆಯಲಿದ್ದು, ಅರ್ಧ ದಿನ ಮಕ್ಕಳು ಮಾಸ್ಕ್ ಧರಿಸಿ ಶಾಲಾವರಣಕ್ಕೆ ಬರಬೇಕು. ಸಾಮಾಜಿಕ ಅಂತರದೊಂದಿಗೆ ಕುಳಿತು ಪಾಠ ಕಲಿಯಬೇಕು. ಹಾಗೇ ವಿದ್ಯಾಗಮಕ್ಕೆ ಪೋಷಕರ ಅನುಮತಿ ಪತ್ರ ಕಡ್ಡಾಯ ಮಾಡಲಾಗಿದೆ.

ಇನ್ನು ಪ್ರತಿ ಶಾಲೆಯಲ್ಲಿ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷೆ ಮಾಡಬೇಕು. ಜ್ವರ, ಕೆಮ್ಮು, ನೆಗಡಿ ಮತ್ತು ಕೋವಿಡ್ ಲಕ್ಷಣಗಳಿರುವ ವಿದ್ಯಾರ್ಥಿಗಳು ಬರುವಂತಿಲ್ಲ. ಸ್ಯಾನಿಟೈಸರ್, ಸೋಪ್ ಇತರೆ ವ್ಯವಸ್ಥೆ ಮಾಡಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ.

ಮಕ್ಕಳನ್ನು ಲಭ್ಯ ಶಿಕ್ಷಕರ ಸಂಖ್ಯೆ, ಲಭ್ಯ ಕೊಠಡಿಗಳ ಅನುಸಾರವಾಗಿ 15-20 ವಿದ್ಯಾರ್ಥಿಗಳ ತಂಡ ರಚನೆ ಮಾಡಬೇಕು. ಆಯಾ ಸ್ತರದ ಸ್ಥಳೀಯ ಸಂಸ್ಥೆಗಳು ಸ್ಯಾನಿಟೈಸೇಷನ್ ಜವಾಬ್ದಾರಿ ತೆಗೆದುಕೊಳ್ಳಲಿದೆ. ಮಕ್ಕಳು ಕುಡಿಯಲು ನೀರನ್ನು ತಮ್ಮೊಂದಿಗೆ ಮನೆಯಿಂದಲೇ ತರಲು ಸಲಹೆ ನೀಡಲಾಗಿದೆ. ಅಗತ್ಯ ಬಿದ್ದಾಗ ಸ್ಥಳೀಯ ಆರೋಗ್ಯ ಇಲಾಖೆಯ ಸಹಕಾರ ಪಡೆಯಲು ಅವಕಾಶವಿದೆ. ಕೋವಿಡ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ಹೊರಲಿದ್ದಾರೆ.

ಶಿಕ್ಷಣ ಇಲಾಖೆ ಉಪ ನಿರ್ದೇಶಕರು ವಿದ್ಯಾಗಮದ ಅನುಷ್ಠಾನಾಧಿಕಾರಿಗಳಾಗಿದ್ದಾರೆ. ವಿದ್ಯಾಗಮ ತರಗತಿಗಳು ಪಾಳಿಗಳಲ್ಲಿ ಅಂದರೆ ಬೆಳಗ್ಗೆ 45 ನಿಮಿಷದ 3 ತರಗತಿಗಳು ಮತ್ತು ಮಧ್ಯಾಹ್ನದ ಪಾಳಿಯಲ್ಲಿ 3 ತರಗತಿಗಳನ್ನು ನಡೆಸಲಾಗುತ್ತೆ. ಒಂದು ದಿನಕ್ಕೆ 7ರಿಂದ 8 ತಂಡಗಳಲ್ಲಿ ವಿದ್ಯಾರ್ಥಿಗಳಿಗೆ ಬರಲು ಸೂಚನೆ ನೀಡಲಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಓದಿ...ಸರ್ಕಾರದ ಚಿತ್ತ ವಿದ್ಯಾಗಮ ಯೋಜನೆಯತ್ತ: ಮತ್ತೆ ಆರಂಭವಾಗಲಿದೆಯಾ ತರಗತಿ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.