ETV Bharat / state

ಕೆಲವು ಬದಲಾವಣೆಗಳೊಂದಿಗೆ 'ವಿದ್ಯಾಗಮ' ಯೋಜನೆ ಮತ್ತೆ ಜಾರಿ: ಸಚಿವ ಸುರೇಶ್ ಕುಮಾರ್ - ವಿದ್ಯಾಗಮ ಯೋಜನೆ ರಾಜ್ಯದಲ್ಲಿ ಮತ್ತೆ ಜಾರಿ

ಕೋವಿಡ್ ಹಿನ್ನೆಲೆ ಶಾಲೆ ಆರಂಭವಾಗದೇ ಇದ್ದುದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯದಂತೆ ನೋಡಿಕೊಳ್ಳಲು ವಿದ್ಯಾಗಮ ಯೋಜನೆಯನ್ನು ಜಾರಿಗೆ ತರಲಾಗಿತ್ತು‌. ಆದರೆ ಹಲವು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದ ಕಾರಣ ತಾತ್ಕಾಲಿಕವಾಗಿ ರದ್ದು ಮಾಡಲಾಗಿತ್ತು. ಇದೀಗ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೀತಿಯಲ್ಲಿ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

Suresh Kumar
ಸುರೇಶ್ ಕುಮಾರ್
author img

By

Published : Dec 15, 2020, 9:54 PM IST

ಬೆಂಗಳೂರು: ಉಚ್ಚ ನ್ಯಾಯಾಲಯದ ಆದೇಶದಂತೆ ಕೆಲವು ಬದಲಾವಣೆಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ಆಗಸ್ಟ್ 8ರಿಂದ ಆರಂಭಿಸಲಾಗಿದ್ದ ವಿದ್ಯಾಗಮವನ್ನು ಅಕ್ಟೋಬರ್ 10ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿದ್ಯಾಗಮ ಆರಂಭಿಸಿದ್ದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು, ಗ್ರಾಮೀಣ ಪ್ರದೇಶದಲ್ಲಿ ಪೋಷಕರೊಂದಿಗೆ ಶಾಲಾ ಸಮಯದಲ್ಲಿ ಕೆಲಸಗಳಿಗೆ ತೆರಳುವುದು, ಬಾಲ್ಯ ವಿವಾಹ, ಬಾಲ್ಯ ಕಾರ್ಮಿಕ ಪದ್ಧತಿಯಂತಹ ಪಿಡುಗುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಅನುಕೂಲವಾಗಿತ್ತು ಎಂದು ಅವರು ತಿಳಿಸಿದ್ದಾರೆ.

'Vidyagama' project with some changes re-implemented in the state
ಕರ್ನಾಟಕ ಸರ್ಕಾರದ ನಡಾವಳಿಗಳು

ಓದಿ: ಬಿಸಿಯೂಟ ಸ್ಥಗಿತ ವಿಚಾರ: ಪಡಿತರ ವಿತರಣೆ ಬಗ್ಗೆ ಹೈಕೋರ್ಟ್​ಗೆ ಮಾಹಿತಿ ನೀಡಿದ ಸರ್ಕಾರ

ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿ ವಿದ್ಯಾಗಮ ಕಾರ್ಯಕ್ರಮ ನಡೆಯಲು ಅನುವು ಮಾಡಿಕೊಡಲಾಗಿದೆ. ಪ್ರಸ್ತುತ ಇರುವ ಆನ್​ಲೈನ್​, ಚಂದನ ವಾಹಿನಿಯ ಪಾಠಗಳು ಮುಂದುವರೆಯಲಿವೆ. ಅರ್ಧ ದಿನ ಮಕ್ಕಳು ಮಾಸ್ಕ್ ಧರಿಸಿ ಶಾಲಾವರಣಕ್ಕೆ ಬಂದು ಸಾಮಾಜಿಕ ಅಂತರದೊಂದಿಗೆ ಕುಳಿತು ಪಾಠ ಕಲಿಯಬಹುದಾಗಿದೆ. ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಪ್ರತಿ ಶಾಲೆಯಲ್ಲಿ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುತ್ತದೆ. ಜ್ವರ, ಕೆಮ್ಮು, ನೆಗಡಿ ಲಕ್ಷಣಗಳು ಮತ್ತು ಕೋವಿಡ್-19ರ ಲಕ್ಷಣಗಳಿರುವ ವಿದ್ಯಾರ್ಥಿಗಳು ಬರುವಂತಿಲ್ಲ. ಸ್ಯಾನಿಟೈಸರ್, ಸೋಪ್ ಇತರೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದಿದ್ದಾರೆ.

ಪರಿಷ್ಕರಣೆಗಳು: ಮಕ್ಕಳನ್ನು ಲಭ್ಯ ಶಿಕ್ಷಕರ ಸಂಖ್ಯೆ, ಲಭ್ಯ ಕೊಠಡಿಗಳ ಅನುಸಾರವಾಗಿ 15-20 ವಿದ್ಯಾರ್ಥಿಗಳ ತಂಡ ರಚಿಸುವುದು. ಆಯಾ ಸ್ತರದ ಸ್ಥಳೀಯ ಸಂಸ್ಥೆಗಳು ಸ್ಯಾನಿಟೈಸೇಷನ್ ಜವಾಬ್ದಾರಿ ತೆಗೆದುಕೊಳ್ಳಲಿದ್ದು, ಮಕ್ಕಳು ಕುಡಿಯಲು ನೀರನ್ನು ತಮ್ಮೊಂದಿಗೆ ಮನೆಯಿಂದಲೇ ತರಲು ಸಲಹೆ ನೀಡಬಹುದು.
ಅಗತ್ಯ ಬಿದ್ದಾಗ ಸ್ಥಳೀಯ ಆರೋಗ್ಯ ಇಲಾಖೆಯ ಸಹಕಾರ ಪಡೆಯಲು ಅವಕಾಶವಿದೆ. ಇದೇ ರೀತಿಯ ಹತ್ತು ಹಲವು ಕಟ್ಟುನಿಟ್ಟಿನ ಕ್ರಮಗಳೊಂದಿಗೆ ವಿದ್ಯಾಗಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆ ಆಯಾ ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ವಿದ್ಯಾಗಮದ ಅನುಷ್ಠಾನಾಧಿಕಾರಿಗಳಾಗಿದ್ದಾರೆ. ವಿದ್ಯಾಗಮ ತರಗತಿಗಳು ಪಾಳಿಗಳಲ್ಲಿ ಅಂದರೆ ಬೆಳಗ್ಗೆ 45 ನಿಮಿಷದ 3 ತರಗತಿಗಳು ಮತ್ತು ಮಧ್ಯಾಹ್ನದ ಪಾಳಿಯಲ್ಲಿ 3 ತರಗತಿಗಳನ್ನು ನಡೆಸಲಾಗುತ್ತದೆ. ಒಂದು ದಿನಕ್ಕೆ 7ರಿಂದ 8 ತಂಡಗಳಲ್ಲಿ ವಿದ್ಯಾರ್ಥಿಗಳಿಗೆ ಬರಲು ಸೂಚಿಸಲಾಗುತ್ತಿದೆ.

ವಿದ್ಯಾಗಮ ಯೋಜನೆ ಅನುಷ್ಠಾನಕ್ಕೆ ಚಿಂತನೆ

ಇದು ಶಾಲೆಯ ಆರಂಭವಲ್ಲ. ವಿದ್ಯಾಗಮವು ಶಾಲೆಯ ಆರಂಭವಲ್ಲ. ಒಮ್ಮೆಗೆ ಅತಿ ಕಡಿಮೆ ಸಂಖ್ಯೆಯ ಮಕ್ಕಳ ತಂಡದೊಂದಿಗೆ ಶಾಲಾವರಣದಲ್ಲಿ ಲಭ್ಯವಿರುವ ಸ್ಥಳದಲ್ಲಿ ಅನುಕೂಲಕ್ಕೆ ತಕ್ಕಂತೆ ಪಾಠಗಳು ನಡೆಯುತ್ತವೆ. ತಜ್ಞರ ಸಮಿತಿಯ ಶಿಫಾರಸಿನ ಅನ್ವಯ ವೈಜ್ಞಾನಿಕವಾಗಿ ತರಗತಿಗಳು ನಡೆಯುತ್ತಿದ್ದು, ಎಲ್ಲ ರೀತಿಯ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳು-ಎಸ್ಒಪಿ ಆಧಾರದಲ್ಲಿ ಕೈಗೊಳ್ಳಲಾಗುತ್ತದೆ. ಮಕ್ಕಳು ತರಗತಿ ಪಾಠಗಳಿಗೆ ಹಾಜರಾದಂತೆ ಎಲ್ಲರೂ ಒಂದೇ ಬಾರಿಗೆ ಬರುತ್ತಿಲ್ಲ. ಆಯಾ ಪ್ರದೇಶದ ಮಾರ್ಗದರ್ಶಿ ಶಿಕ್ಷಕರು ತಮಗೆ ಸನಿಹದ ನೆರೆಹೊರೆಯ ಕೆಲವೇ ಮಕ್ಕಳನ್ನು ತಂಡದಲ್ಲಿ ಪಟ್ಟಿ ಮಾಡುತ್ತಾರೆ. ಇದು ಶಾಲಾರಂಭವಲ್ಲ ಎಂಬುದನ್ನು ಪೋಷಕರು ಮನಗಾಣಬೇಕು ಎಂದು ಸಚಿವರು ಹೇಳಿದ್ದಾರೆ.

ಹತ್ತನೇ ತರಗತಿ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಎದುರಿಸಬೇಕಾಗಿರುವುದರಿಂದ ಪ್ರತಿದಿನ ಮಾರ್ಗದರ್ಶನವನ್ನು ಮೊದಲನೇ ಪಾಳಿಯಲ್ಲಿ ನಡೆಸುವುದು.
ಎಂಟು ಮತ್ತು ಒಂಭತ್ತನೇ ತರಗತಿ ಮಕ್ಕಳನ್ನು ದಿನ ಬಿಟ್ಟು ದಿನ ಮಧ್ಯಾಹ್ನ 2ರಿಂದ 4-30ರವರೆಗೆ 2ನೇ ಪಾಳಿಯಲ್ಲಿ ಮಾರ್ಗದರ್ಶನ ನಡೆಸುವುದು ಎಂದು ತಿಳಿಸಿದ್ದಾರೆ.

ಪ್ರಾಥಮಿಕ ಶಾಲಾ ವೇಳಾಪಟ್ಟಿ
1ರಿಂದ 3 ನೇ ತರಗತಿ ಮಕ್ಕಳನ್ನು ಹಾಗೂ 4 ಮತ್ತು 5ನೇ ತರಗತಿ ಮಕ್ಕಳನ್ನು ಪರ್ಯಾಯ ದಿನಗಳಂದು ಕರೆಸುವುದು.
1ರಿಂದ 5ನೇ ತರಗತಿ ಮಕ್ಕಳನ್ನು ಮತ್ತು 6ರಿಂದ 8 ಮೇ ತರಗತಿ ಮಕ್ಕಳನ್ನು ಪರ್ಯಾಯ ದಿನಗಳಂದು ಕರೆಸಿ ವಿದ್ಯಾಗಮ ನಡೆಸುವುದು. ಪ್ರತೀ ತಂಡಕ್ಕೆ 15-20 ಮಕ್ಕಳ ತಂಡಗಳನ್ನು ರಚಿಸುವುದು, ಪ್ರತಿಯೊಬ್ಬ ಶಿಕ್ಷಕರು ಒಂದು ತಂಡದ ಮಕ್ಕಳಿಗೆ ಪ್ರತೀ ಅವಧಿಯಲ್ಲಿ ಬೋಧನೆ ಮಾಡುವುದು. ಈ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಂಡು ವಿದ್ಯಾಗಮ ಯೋಜನೆಯನ್ನು ಜಾರಿಮಾಡಲು ಸಿದ್ಧತೆ ನಡೆಸುವಂತೆ ಮಾರ್ಗಸೂಚಿ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.