ಬೆಂಗಳೂರು: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಕೆ.ಎಸ್.ಆರ್.ಟಿಸಿ ನೌಕರರಿಂದ ಡಿಸೆಂಬರ್ 10 ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಸರ್ಕಾರಿ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬ ಕೂಗು ಬಹುದಿನಗಳಿಂದ ಕೇಳಿ ಬರುತ್ತಿದೆ. ಆದ್ರೂ ಸರ್ಕಾರ ಸಾರಿಗೆ ನೌಕರರ ಪ್ರತಿಭಟನೆಗೆ ಕಿವಿಗೊಡುತ್ತಿಲ್ಲ. ಈ ನಿಟ್ಟಿನಲ್ಲಿ ಕರ್ನಾಟಕದ ರಸ್ತೆ ಸಾರಿಗೆ ಸಂಸ್ಥೆ ಹಾಗೂ ನಾಲ್ಕು ನಿಗಮಗಳ ನೌಕರರು ಸೇರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಡಿಸೆಂಬರ್ 10 ರಂದು ವಿಧಾನಸೌಧ ಚಲೋವನ್ನು ಆಯೋಜಿಸಲಾಗಿದೆ ಎಂದು ಅವರು ಗಾಂಧಿ ಭವನದಲ್ಲಿ ತಿಳಿಸಿದರು.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು, ಸಾರಿಗೆ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ, ಸರಕಾರಿ ಸವಲತ್ತುಗಳನ್ನು ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.