ETV Bharat / state

ಮಾ.25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ.. ಪ್ರಧಾನಿ ಮೋದಿ ಭಾಗಿ: ರವಿಕುಮಾರ್ - ಈಟಿವಿ ಭಾರತ ಕನ್ನಡ

ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ - ಮಾರ್ಚ್​ 25ರಂದು ದಾವಣಗೆರೆಯಲ್ಲಿ ಸಮಾರೋಪ - ಸಮಾವೇಶದಲ್ಲಿ ಮೋದಿ ಭಾಗಿ

vijayasankalpa-rath-yatra-concludes-at-davangere-says-ravikumar
ಮಾ.25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ..ಪ್ರಧಾನಿ ಮೋದಿ ಭಾಗಿ:ರವಿಕುಮಾರ್
author img

By

Published : Mar 16, 2023, 3:43 PM IST

ಮಾ.25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ..ಪ್ರಧಾನಿ ಮೋದಿ ಭಾಗಿ:ರವಿಕುಮಾರ್

ಬೆಂಗಳೂರು : ರಾಜ್ಯದಲ್ಲಿ ನಾಲ್ಕು ದಿಕ್ಕಿನಿಂದ ಆರಂಭಗೊಂಡಿರುವ ರಥಯಾತ್ರೆ ಅಂತಿಮ ಹಂತ ತಲುಪಿದ್ದು, ಮಾರ್ಚ್ 25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಮಾರೋಪ ಭಾಷಣ ಮಾಡಲಿದ್ದು, ಕಾರ್ಯಕ್ರಮಕ್ಕೆ 10 ಲಕ್ಷ ಜನರನ್ನು ಸೇರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ವಿಜಯಸಂಕಲ್ಪ ಯಾತ್ರೆ ಆರಂಭವಾಗಿ 15 ದಿನ ಕಳೆದಿದೆ. ನಾಲ್ಕು ತಂಡಗಳಲ್ಲಿ ನಡೆಯುತ್ತಿರುವ ಯಾತ್ರೆಗಳು ಯಾವುದೇ ತೊಂದರೆಯಾಗದೆ ಯಶಸ್ವಿಯಾಗಿ ನಡೆಯುತ್ತಿದೆ. 4 ಯಾತ್ರೆಗಳು 151 ವಿಧಾನಸಭಾ ಕ್ಷೇತ್ರ ತಲುಪಿದೆ. 60 ಲಕ್ಷ ಜನ ಕಾರ್ಯಕರ್ತರು ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ರಥಯಾತ್ರೆಯಲ್ಲಿ ನಮ್ಮೆಲ್ಲಾ ಶಾಸಕರು, ಸಂಸದರು ಭಾಗಿಯಾಗಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯದ ನಾಯಕರು, ರಥದ ಉಸ್ತುವಾರಿಗಳು ಸೇರಿ 45 ಜನ ಭಾಗಿಯಾಗಿದ್ದಾರೆ. 110 ರೋಡ್ ಶೋ, 41 ಬಹಿರಂಗ ಸಭೆ ಮಾಡಲಾಗಿದೆ. ವಿಜಯಸಂಕಲ್ಪ ಯಶಸ್ವಿ ಯಾತ್ರೆಗೆ ಕಾರಣರಾಗಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜನರು ರಥಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಕೋಲಾರ, ಶಿಡ್ಲಘಟ್ಟ, ಗೌರಿಬಿದನೂರು ಕಡೆ 10-15 ಸಾವಿರ ಜನ ಭಾಗಿಯಾಗಿದ್ದಾರೆ. ಬಸವಕಲ್ಯಾಣ ಕಾರ್ಯಕ್ರಮದಲ್ಲಿ 45 ಸಾವಿರ ಜನರು ಭಾಗಿಯಾಗಿದ್ದರೆ ಎಂದು ಹೇಳಿದರು.

ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ : ಮಂಡ್ಯ ಜಿಲ್ಲೆಯಲ್ಲಿ ನಮ್ಮ ಪಕ್ಷದ ಸಾಮರ್ಥ್ಯ ಕಡಿಮೆ ಇದೆ ಎಂದು ಜನ ಭಾವಿಸಿದ್ದರು. ಆದರೆ ಅಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ನಡೆದು, ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಲ್ಯಾಣ ಕರ್ನಾಟಕದಲ್ಲಿ 40 ಸಾವಿರ ಜನ ಮೇಲ್ಪಟ್ಟು ಭಾಗಿಯಾಗಿದ್ದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅದ್ದೂರಿಯಾಗಿ ವಿಜಯಸಂಕಲ್ಪ ಯಾತ್ರೆ ನಡೆದಿದೆ. ಕಲ್ಯಾಣ ಕರ್ನಾಟಕ, ಹಳೆ ಮೈಸೂರು ಕರ್ನಾಟಕದಲ್ಲಿ ಯಾತ್ರೆ ಆರಂಭಿಸಿದ್ದು, ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಮಾರ್ಚ್ 21ರವರೆಗೂ ಯಾತ್ರೆ ನಡೆಯಲಿದೆ. ಸಂಪೂರ್ಣ ಬಹುಮತ ಬರಲು ವಿಜಯದ ತಳಹದಿ ಹಾಕಿಕೊಟ್ಟಿದ್ದು ವಿಜಯಸಂಕಲ್ಪ ರಥಯಾತ್ರೆ ಎಂದರು.

ದಾವಣಗೆರೆಯಲ್ಲಿ ವಿಜಯಸಂಕಲ್ಪ ರಥಯಾತ್ರೆ ಸಮಾರೋಪ : ದಾವಣಗೆರೆಯಲ್ಲಿ ಮಾ.25ರಂದು ಬೃಹತ್ ಸಮಾವೇಶ ನಡೆಯಲಿದೆ. ಮಾರ್ಚ್ 24ರಂದು ದಾವಣಗೆರೆ ಸುತ್ತಮುತ್ತಲಿನ ನಾಲ್ಕು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಯಲಿದೆ. 25ರಂದು ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಭಾಷಣ ಮಾಡಲಿದ್ದಾರೆ. ಇದುವರೆಗೂ ಸೇರಿರದಷ್ಟು ಜನರನ್ನು ಸೇರಿಸುವ ಗುರಿ ಇದೆ. ಅಂದಾಜು ಹತ್ತು ಲಕ್ಷ ಜನರನ್ನು ಸೇರಿಸುವ ಗುರಿ ಇದೆ. ಅದರ ಬಗ್ಗೆ ಒಂದು ಸಭೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ದಾವಣಗೆರೆಯಲ್ಲಿ ಜನ ಸೇರಿಸುವ ವಿಚಾರ ಸಿದ್ದರಾಮೋತ್ಸವಕ್ಕೆ ಟಾಂಗ್ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವು ಯಾರಿಗೂ ಟಾಂಗ್ ನೀಡಲ್ಲ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಧ್ವನಿಯೇ ಇಲ್ಲದಂತಾಗಿದೆ. ಬಸ್​ ಪಂಕ್ಚರ್​ ಆಗಿ ಕಾಂಗ್ರೆಸ್ ಯಾತ್ರೆ ಕೆಟ್ಟು ನಿಂತಿದೆ ಎಂದು ವ್ಯಂಗ್ಯವಾಡಿದರು.

ಅಸಮಾಧಾನ ಹಿರಿಯ ನಾಯಕರು ಪರಿಹರಿಸಲಿದ್ದಾರೆ : ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಸಚಿವ ವಿ ಸೋಮಣ್ಣ, ಅವರ ಪುತ್ರ ಅರುಣ್ ಸೋಮಣ್ಣ ಹೇಳಿಕೆಗಳ ವಿಚಾರದ ಕುರಿತು ಪ್ರತಿಕ್ರಿಯಿಸಿದ ರವಿಕುಮಾರ್, ಇದೆಲ್ಲವನ್ನು ನಮ್ಮ ಪ್ರಮುಖ ನಾಯಕರು ಬಗೆಹರಿಸಲಿದ್ದಾರೆ. ಇದರ ಬಗ್ಗೆ ಮಾಧ್ಯಮದಲ್ಲಿ ಬಂದಿದೆ. ನಮ್ಮ ಕಾರ್ಯಕರ್ತರು, ಪ್ರಮುಖರು ಸಮಸ್ಯೆ ಬಗೆಹರಿಸಿಕೊಳ್ಳುತ್ತಾರೆ. ಈಗಾಗಲೇ ಯಡಿಯೂರಪ್ಪ ಅವರು, ಸಿ.ಟಿ ರವಿ ಅವರು ಹೇಳಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಬಗ್ಗೆ ಪಾರ್ಲಿಮೆಂಟರಿ ಸಮಿತಿ ನಿರ್ಧಾರ ಮಾಡಲಿದೆ. ಯಡಿಯೂರಪ್ಪ ಅವರ ಶಕ್ತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಇದರ ಬಗ್ಗೆ ಯಾವುದೇ ಚರ್ಚೆ ಮಾಡಲ್ಲ. ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ. ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಎಲ್ಲರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಭದ್ರಾ ಮೇಲ್ಡಂಡೆ, ಕಳಸ ಬಂಡೂರಿ, ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇ, ಮೀಸಲಾತಿ ಎಲ್ಲಾ ಹಲವು ವರ್ಷದ ಸಮಸ್ಯೆ ಬಗೆಹರಿಸಿದ್ದೇವೆ. ಎಲ್ಲರೂ ಒಟ್ಟಾಗಿ ವಿಜಯದ ತೇರನ್ನು ಎಳೆಯುತ್ತೇವೆ. ನಮ್ಮದು ಡಬಲ್ ಇಂಜಿನ್ ಸರ್ಕಾರ ಎಂದರು.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಜಗಳ ಇರೋದು ಬಹಿರಂಗ ಸತ್ಯ. ಸೋಮಣ್ಣ, ಯಡಿಯೂರಪ್ಪ ನಮ್ಮ ನಾಯಕರು. ಎಲ್ಲರೂ ವಿಜಯದ ರಥ ಎಳೆಯುತ್ತೇವೆ. ಕಾಂಗ್ರೆಸ್‌ಗೂ ನಮಗೂ ತುಲನೆ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಯಾತ್ರೆಗೂ, ನಮ್ಮ ರಥಯಾತ್ರೆಗೂ ಅಜಗಜಾಂತರ ವ್ಯತ್ಯಾಸ ಇದೆ ಎಂದು ಹೇಳಿದರು.

ಇದನ್ನೂ ಓದಿ : ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಿಕೊಂಡಂತೆ ನಾವು ಸಮಾವೇಶ ಮಾಡುವುದಿಲ್ಲ: ಕಟೀಲ್ ವ್ಯಂಗ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.