ಬೆಂಗಳೂರು: ಮಾಜಿ ಸಚಿವ ರೇಣುಕಾಚಾರ್ಯಗೆ ಬಂಧನ ಭೀತಿ ಶುರುವಾಗಿದೆ. ಚುನಾವಣೆ ನೀತಿ ಸಂಹಿಂತೆ ಉಲ್ಲಂಘನೆ ಆರೋಪ ಸಂಬಂಧ ವಿಚಾರಣೆಗೆ ಹಲವು ಬಾರಿ ಗೈರು ಹಾಜರಾಗಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿ ಆದೇಶಿಸಿದೆ.
ಚುನಾವಣೆ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರೂ ಮಾಜಿ ಸಚಿವ ರೇಣುಕಾಚಾರ್ಯ ಗೈರಾಗಿದ್ದರು. ಇದರಿಂದ ನ್ಯಾ.ರಾಮಚಂದ್ರ ಡಿ.ಹುದ್ದರ್ 2 ನೇ ಬಾರಿ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಬಂಧನದ ಭೀತಿ ಶುರುವಾಗಿದೆ.