ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಚಿವರ ಖಾತೆ ಹಂಚಿಕೆ ಮಾಹಿತಿ ನಕಲಿ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟ ಕಾಂಗ್ರೆಸ್, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ.
-
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ.
— Karnataka Congress (@INCKarnataka) May 27, 2023 " class="align-text-top noRightClick twitterSection" data="
ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ.
ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
">ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ.
— Karnataka Congress (@INCKarnataka) May 27, 2023
ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ.
ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ.
— Karnataka Congress (@INCKarnataka) May 27, 2023
ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ.
ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
ಇಂದು ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆಯಾದ ಕೆಲವೇ ಗಂಟೆಯ ಬಳಿಕ ಸಚಿವರ ಖಾತೆ ಹಂಚಿಕೆ ಪಟ್ಟಿ ಹೊರಬಿದ್ದಿತ್ತು. ಸಾಕಷ್ಟು ಕಡೆ ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಸಹಿ ಇಲ್ಲದ ಪಟ್ಟಿಯೇ ಅಂತಿಮ ಎಂದು ಬಿಂಬಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದ ಪಟ್ಟಿಯಲ್ಲಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರಿಗೂ ಖಾತೆ ಹಂಚಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ.
-
ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.
— Siddaramaiah (@siddaramaiah) May 27, 2023 " class="align-text-top noRightClick twitterSection" data="
ಇದನ್ನು… pic.twitter.com/Y3hz7EVTVi
">ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.
— Siddaramaiah (@siddaramaiah) May 27, 2023
ಇದನ್ನು… pic.twitter.com/Y3hz7EVTViಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.
— Siddaramaiah (@siddaramaiah) May 27, 2023
ಇದನ್ನು… pic.twitter.com/Y3hz7EVTVi
ಅದೇ ಹುದ್ದೆಗೆ ಪ್ರವೀಣ್ ನೆಟ್ಟಾರು ಪತ್ನಿ ಮರುನೇಮಕ: ಸಿದ್ದರಾಮಯ್ಯ ಟ್ವೀಟ್ - ಪ್ರವೀಣ್ ನೆಟ್ಟಾರು ಪತ್ನಿ ಕುಮಾರಿಯನ್ನು ಅದೇ ಹುದ್ದೆಗೆ ಮರು ನೇಮಕ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಟ್ವೀಟ್ ಮಾಡಿ ಈ ಮಾಹಿತಿ ನೀಡಿರುವ ಸಿದ್ದರಾಮಯ್ಯ, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕುಮಾರಿಗೆ ಉದ್ಯೋಗ: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಿಂದ ಅನುಕಂಪದ ಆಧಾರದಲ್ಲಿ ದ ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀಡಲಾಗಿತ್ತು. ನೂತನ ಕುಮಾರಿ ಕಳೆದ ಏಳು ತಿಂಗಳುಗಳಿಂದ ಮಂಗಳೂರಿನಲ್ಲಿರುವ ದ. ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಹಿಂದಿನ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ಹೇಳಿತ್ತು. ಅದರಂತೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು.
ಈಗ ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ. ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶದ ವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು. ಇದೀಗ ನೂತನ ಕುಮಾರಿಗೆ ಮರಳಿ ಉದ್ಯೋಗ ನೀಡುವ ಭರವಸೆಯನ್ನು ಸಿಎಂ ನೀಡಿದ್ದಾರೆ.
ಇದನ್ನೂಓದಿ:ಪ್ರವೀಣ್ ನೆಟ್ಟಾರು ಪತ್ನಿಗೆ ಖಾಯಂ ಉದ್ಯೋಗ ನೀಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆಯುವೆ: ನಳಿನ್ ಕುಮಾರ್ ಕಟೀಲ್