ಬೆಂಗಳೂರು: ಮಂಡಿ ನೋವಿನಿಂದಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು, ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ಭೇಟಿ ಮಾಡಿದರು. ಅಲ್ಲದೇ ಅವರ ಯೋಗಕ್ಷೇಮ ವಿಚಾರಿಸಿದರು.
ಪದ್ಮನಾಭನಗರದ ಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ ವೀರೇಂದ್ರ ಹೆಗ್ಗಡೆ, ಗೌಡರ ಯೋಗಕ್ಷೇಮ ವಿಚಾರಿಸಿ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಹೆಗ್ಗಡೆ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದರ ಕುರಿತು ದೇವೇಗೌಡರು ಕೆಲ ಸಮಯ ಚರ್ಚೆ ಮಾಡಿದರು.
![ದೇವೇಗೌಡರ ಯೋಗಕ್ಷೇಮ ವಿಚಾರಿಸಿದ ವೀರೇಂದ್ರ ಹೆಗ್ಗಡೆ](https://etvbharatimages.akamaized.net/etvbharat/prod-images/kn-bng-01-virendra-heggade-visits-hdd-house-script-7208083_12102022123600_1210f_1665558360_115.jpg)
ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಿದ ಗೌಡರು, ರಾಜ್ಯಸಭೆಗೆ ಆಯ್ಕೆಯಾದ ವೀರೇಂದ್ರ ಹೆಗ್ಗಡೆ ಅವರಿಗೆ ಶುಭಕೋರಿದರು. ಈ ವೇಳೆ ದೇವೇಗೌಡರ ಪತ್ನಿ ಚನ್ನಮ್ಮ, ಧರ್ಮಸ್ಥಳದ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಾ. ಸುರೇಂದ್ರ ಕುಮಾರ್ ಅವರು ಹಾಜರಿದ್ದರು.
ಇದನ್ನೂ ಓದಿ: ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ