ETV Bharat / state

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ: ಎನ್ಐಎ ತನಿಖೆಗೆ ವಿಶ್ವ ಹಿಂದೂ ಪರಿಷತ್​ ಆಗ್ರಹ - ಹರ್ಷ ಕೊಲೆ ಎನ್ಐಎ ತನಿಖೆಗೆ ವಿಶ್ವ ಹಿಂದೂ ಪರಿಷತ್​ ಆಗ್ರಹ

ಶಿವಮೊಗ್ಗದ ಕೋಟೆ ಪ್ರಖಂಡ ಬಜರಂಗದಳದ ಸಹ ಸಂಯೋಜಕ ಹರ್ಷ ಅವರನ್ನು ಮತಾಂಧ, ದೇಶದ್ರೋಹಿ ಎಸ್​ಡಿಪಿಐ ಮತ್ತು ಪಿಎಫ್ಐ ದುಷ್ಕರ್ಮಿಗಳು ನಿನ್ನೆ ರಾತ್ರಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ಸಂಗತಿ. ಕಳೆದ ಹಲವಾರು ವರ್ಷಗಳಿಂದ ವ್ಯವಸ್ಥಿತವಾಗಿ ಹಿಂದೂಗಳ ಮಾರಣ ಹೋಮ ಮಾಡುತ್ತಿದ್ದಾರೆ ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜ್ ಆರೋಪಿಸಿದ್ದಾರೆ.

vishwa-hindu-parishad-demands-nia-probe-into-shivamogga-harsha-murder-case
ಶಿವಮೊಗ್ಗ ಹರ್ಷ ಕೊಲೆ ಪ್ರಕರಣ: ಎನ್ಐಎ ತನಿಖೆಗೆ ವಿಶ್ವ ಹಿಂದೂ ಪರಿಷತ್​ ಆಗ್ರಹ
author img

By

Published : Feb 21, 2022, 4:59 PM IST

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದಿರುವ ಹಿಂದೂಪರ ಸಂಘಟನೆಯ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ವಿಶ್ವ ಹಿಂದೂ ಪರಿಷತ್​ ಆಗ್ರಹಿಸಿದೆ.

ಶಿವಮೊಗ್ಗದ ಕೋಟೆ ಪ್ರಖಂಡ ಬಜರಂಗದಳದ ಸಹ ಸಂಯೋಜಕ ಹರ್ಷ ಅವರನ್ನು ಮತಾಂಧ, ದೇಶದ್ರೋಹಿ ಎಸ್​ಡಿಪಿಐ ಮತ್ತು ಪಿಎಫ್ಐ ದುಷ್ಕರ್ಮಿಗಳು ನಿನ್ನೆ ರಾತ್ರಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ಸಂಗತಿ. ಕಳೆದ ಹಲವಾರು ವರ್ಷಗಳಿಂದ ವ್ಯವಸ್ಥಿತವಾಗಿ ಹಿಂದೂಗಳ ಮಾರಣ ಹೋಮ ಮಾಡುತ್ತಿದ್ದಾರೆ ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜ್ ಆರೋಪಿಸಿದ್ದಾರೆ.

vishwa-hindu-parishad-demands-nia-probe-into-shivamogga-harsha-murder-case
ವಿಶ್ವ ಹಿಂದೂ ಪರಿಷತ್​ ಮನವಿ

ಎರಡು ತಿಂಗಳ ಹಿಂದೆ ತುಮಕೂರು ಜಿಲ್ಲಾ ಬಜರಂಗದಳ ಸಂಯೋಜಕ ಮಂಜು ಭಾರ್ಗವ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಶಿವಮೊಗ್ಗದ ನಾಗೇಶ್ ಎನ್ನುವವರ ಮೇಲೆ ಹಲ್ಲೆ ಮಾಡಿದ್ದರು. ಪ್ರಶಾಂತ ಪೂಜಾರಿ, ಮಡಿಕೇರಿಯ ವಿಹಿಂಪ ಮುಖಂಡರಾದ ಕುಟ್ಟಪ್ಪ, ಬೆಂಗಳೂರಿನ ರುದ್ರೇಶ್ ಹೀಗೆ ಹಲವಾರು ಮುಗ್ಧ ಹಿಂದೂಗಳ ಹತ್ಯೆ ಮಾಡಿದ್ದಾರೆ. ಕೇರಳದಿಂದ ಬಂದು ಇಲ್ಲಿ ಹತ್ಯೆ ಮಾಡುತ್ತಿದ್ದಾರೆ ಎಂದು ಪತ್ರಿಕಾ ಹೇಳಿಕೆ ಮೂಲಕ ವಿಶ್ವ ಹಿಂದೂ ಪರಿಷದ್ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ: ಹರ್ಷನ ಅಂತಿಮಯಾತ್ರೆ ವೇಳೆ ಕಲ್ಲು ತೂರಾಟ.. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರಿಂದ ಟಿಯರ್ ಗ್ಯಾಸ್ ಪ್ರಯೋಗ

ಹಿಂದೂ ಸಮಾಜದಲ್ಲಿ ಸಾಮರಸ್ಯ ಕೆಡಿಸುತ್ತಾ, ದೇಶದ್ರೋಹ, ಭಯೋತ್ಪಾದನೆ ಕೆಲಸ ಮಾಡುತ್ತಿರುವ ಎಸ್​ಡಿಪಿಐ ಮತ್ತು ಪಿಎಫ್ಐನ್ನು ನಿಷೇಧಿಸಬೇಕು. ಈ ಪ್ರಕರಣವನ್ನು ಸರ್ಕಾರ ಕೂಡಲೇ ಎನ್ಐಎ ತನಿಖೆಗೆ ಒಪ್ಪಿಸಬೇಕು. ಆದಷ್ಟು ಬೇಗ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.