ETV Bharat / state

ಡಿಸಿಎಂ ನಿವಾಸಕ್ಕೆ ವಿವಿಧ ನಾಯಕರ ಭೇಟಿ: ಅಪೆಕ್ಸ್​ ಬ್ಯಾಂಕ್​ ಅಧ್ಯಕ್ಷರಾಗಿ ಮುಂದುವರಿಯುತ್ತಾರಾ ಮಂಜುನಾಥ್​! - ಡಿ ಕೆ ಶಿವಕುಮಾರ್​ ಡಿಸಿಎಂ

ಡಿ ಕೆ ಶಿವಕುಮಾರ್​ ಡಿಸಿಎಂ ಆದ ಬಳಿಕ ಅವರ ನಿವಾಸಕ್ಕೆ ವಿವಿಧ ಮುಖಂಡರು ಭೇಟಿ ನೀಡಿ, ಶುಭಾಶಯಗಳನ್ನು ತಿಳಿಸುವ ಜೊತೆಗೆ ಕೆಲವು ಬೇಡಿಕೆಗಳ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನುವುದು ತಿಳಿದು ಬಂದಿದೆ.

Visit of various leaders to DCM residence and discussion
ಡಿಸಿಎಂ ನಿವಾಸಕ್ಕೆ ವಿವಿಧ ನಾಯಕರ ಭೇಟಿ ಚರ್ಚೆ
author img

By

Published : Jun 6, 2023, 2:02 PM IST

ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ತಮ್ಮ ನಿವಾಸದಲ್ಲಿ ವಿವಿಧ ಮುಖಂಡರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ವಿವಿಧ ಪಕ್ಷಗಳ ನಾಯಕರು ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚಿಸಿದ್ದು, ನಗರದ ವಿವಿಧ ಕಡೆ ತಾವು ಪಾಲ್ಗೊಳ್ಳಲಿರುವ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಸದಾಶಿವನಗರ ನಿವಾಸದಲ್ಲಿ ಮುಖಂಡರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಸಂದರ್ಭ ಬಲವಾಗಿ ಸಿದ್ದರಾಮಯ್ಯರನ್ನು ಸಿಎಂ ಎಂದು ಪ್ರತಿಪಾದಿಸಿದ ಹಾಗೂ ನಂತರ ರಚನೆಯಾದ ಸರ್ಕಾರದಲ್ಲಿ ಸಹಕಾರ ಸಚಿವರಾಗಿರುವ ಕೆ ಎನ್ ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

Visit of various leaders to DCM residence and discussion
ಡಿಸಿಎಂ ನಿವಾಸಕ್ಕೆ ವಿವಿಧ ನಾಯಕರ ಭೇಟಿ ಚರ್ಚೆ

ಸಹಕಾರ ಇಲಾಖೆಯ ಅಡಿ ಕೈಗೊಳ್ಳಬೇಕಾಗಿರುವ ಹಲವು ವಿಚಾರಗಳ ಕುರಿತು ಇದೇ ಸಂದರ್ಭ ಅವರು ಚರ್ಚಿಸಿದ್ದಾರೆ. ರಾಜಕೀಯವಾಗಿ ಕೈಗೊಳ್ಳಬಹುದಾದ ಕೆಲ ನಿಲುವುಗಳ ಕುರಿತು ಸಹ ಉಭಯ ನಾಯಕರು ಇದೇ ಸಂದರ್ಭ ಸಮಾಲೋಚಿಸಿದ್ದಾರೆ. ತುಮಕೂರು ಜಿಲ್ಲೆ ಬಹುದೊಡ್ಡ ಜಿಲ್ಲೆಯಾಗಿದ್ದು, ಈ ಬಾರಿ ಅತಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್​ಗೆ ಗಳಿಸಿಕೊಟ್ಟಿದೆ. ಈ ಹಿನ್ನೆಲೆ ಮುಂಬರುವ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು. ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸುವ ಸಂದರ್ಭ ಹೆಚ್ಚಿನ ಅವಕಾಶವನ್ನು ತುಮಕೂರು ಜಿಲ್ಲೆಯ ಕಾಂಗ್ರೆಸ್ ನಾಯಕರಿಗೆ ನೀಡಬೇಕು ಎಂದು ರಾಜಣ್ಣ ಇದೇ ಸಂದರ್ಭ ಉಪಮುಖ್ಯಮಂತ್ರಿಗಳನ್ನು ಕೋರಿದ್ದಾರೆ.

ಕಡೂರು ಮಾಜಿ ಶಾಸಕ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಮಂಗಳವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಕಟ್ಟಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಸಫಲತೆ ಸಾಧಿಸಿದ್ದಕ್ಕೆ ಶುಭಾಶಯ ಸಲ್ಲಿಸಿದ ಬೆಳ್ಳಿ ಪ್ರಕಾಶ್, ಮುಂಬರುವ ದಿನಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ರಾಜ್ಯದಲ್ಲಿ ಆಗುವಂತೆ ನೋಡಿಕೊಳ್ಳಿ ಎಂದು ಕೋರಿದ್ದಾರೆ.

ಎಲ್ಲಕ್ಕಿಂತ ಪ್ರಮುಖವಾಗಿ ಡಿ ಕೆ ಶಿವಕುಮಾರ್ ಆಪ್ತ ಹಾಗೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅವರಿಗೆ ಅಧಿಕಾರ ಕಲ್ಪಿಸುವ ಭರವಸೆಯನ್ನು ಡಿಕೆಶಿ ನೀಡಿದ್ದಾರೆ ಎಂಬ ಮಾಹಿತಿ ಇದೆ. ಅಪೆಕ್ಸ್ ಬ್ಯಾಂಕಿನಲ್ಲಿ ಇನ್ನಷ್ಟು ಸಮಯ ಮುಂದುವರಿಯುವ ಅಭಿಲಾಷೆ ಹೊಂದಿರುವ ಬೆಳ್ಳಿ ಪ್ರಕಾಶ್ ಇದೇ ವಿಚಾರವಾಗಿ ಡಿಕೆ ಶಿವಕುಮಾರ್ ಬಳಿ ಸಮಾಲೋಚಿಸಿದ್ದಾರೆ ಎಂಬ ಮಾಹಿತಿ ಇದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ತಾವು ಸಾಕಷ್ಟು ಉತ್ತಮ ಕಾರ್ಯಗಳನ್ನು ಕೈಗೊಂಡಿದ್ದು, ಇನ್ನಷ್ಟು ಸಮಯ ತಮಗೆ ಮುಂದುವರಿಯಲು ಕಾಂಗ್ರೆಸ್ ಅಡ್ಡಗಾಲು ಹಾಕಬಾರದು. ಮಂಜುನಾಥ್ ಗೌಡಗೆ ಮುಂಬರುವ ದಿನಗಳಲ್ಲಿ ಅವಕಾಶ ಕಲ್ಪಿಸುವಂತೆ ಕೋರಿದ್ದಾರೆ ಎಂಬ ಮಾಹಿತಿ ಇದೆ.

ಡಿ ಕೆ ಶಿವಕುಮಾರ್ ಅವರ ಕುಟುಂಬ ವೈದ್ಯೆ ಡಾ. ಆಲಮ್ಮ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಮುನ್ನ ಮೂರು ವರ್ಷ ಸುದೀರ್ಘ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಡಿಕೆ ಶಿವಕುಮಾರ್ ಬೆನ್ನು ನೋವಿನಿಂದ ಬಳಲುತ್ತಿದ್ದು ಈ ಸಂದರ್ಭ ಅವರಿಗೆ ಕಾಲಕಾಲಕ್ಕೆ ಚಿಕಿತ್ಸೆ ಹಾಗೂ ಆರೋಗ್ಯ ಸಲಹೆಯನ್ನು ನೀಡುತ್ತಾ ಬಂದಿರುವ ವೈದ್ಯರು ಇದೀಗ ಪಕ್ಷ ಅಧಿಕಾರಕ್ಕೆ ಬಂದಿರುವ ಸಂದರ್ಭದಲ್ಲಿ ಡಿಸಿಎಂ ನಿವಾಸಕ್ಕೆ ಆಗಮಿಸಿ ಶುಭಾಶಯ ಸಲ್ಲಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಕೊಲ್ಲೂರು ಮುಕಾಂಬಿಕೆ ದೇವಸ್ಥಾನದ ಪ್ರಧಾನ ಅರ್ಚಕರಾದ ನರಸಿಂಹ ಅಡಿಗ ಅವರು ಮಂಗಳವಾರ ಭೇಟಿ ಮಾಡಿ, ಪ್ರಸಾದ ನೀಡಿ ಆಶೀರ್ವದಿಸಿದರು. ಇದಲ್ಲದೇ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಪ್ರಧಾನ ಕಾರ್ಯದರ್ಶಿ ಜಿ ಎಂ ರವೀಂದ್ರ ಮತ್ತಿತರರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ: ಬಾಡಿಗೆದಾರರಿಗೂ 200 ಯೂನಿಟ್​ ವಿದ್ಯುತ್​ ಉಚಿತ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.