ಬೆಂಗಳೂರು: ವಿವಿಐಪಿ ಭದ್ರತೆ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಡಿಸಿಪಿ/ ಎಸ್ಪಿಗಳಿಗೆ ತಾಕೀತು ಮಾಡಿದ್ದಾರೆ.
ಆಯಾ ಜಿಲ್ಲಾ ಎಸ್ಪಿಗಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಧ್ವನಿಯಾಗಬೇಕು. ವಿವಿಐಪಿ ಭದ್ರತೆ ಕರ್ತವ್ಯವಿದ್ದರೆ ತಿಂಗಳಿಗೊಮ್ಮೆ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಲ್ಲಿನ ಕಾರ್ಯವೈಖರಿ ಜನರ ಕಷ್ಟ ಆಲಿಸಿ ಪರಿಹರಿಸಬೇಕು. ಠಾಣಾಧಿಕಾರಿ, ಪಿಎಸ್‌ಐ, ಎಎಸ್‌ಐ, ಹೆಡ್ ಕಾನ್‌ಸ್ಟೇಬಲ್, ಕಾನ್‌ಸ್ಟೇಬಲ್‌ಗಳ ಕಷ್ಟ-ಸುಖಗಳು ಮತ್ತು ಸಲಹೆ-ಸೂಚನೆಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಆದೇಶಿಸಿದ್ದಾರೆ.
ವಾರದಲ್ಲಿ ಒಮ್ಮೆಯಾದರೂ ಡಿಸಿಪಿ/ಎಸ್ಪಿಗಳು ರಾತ್ರಿ ಪಾಳಿ ಕರ್ತವ್ಯ ಮಾಡಬೇಕು. ಕರ್ತವ್ಯನಿರತ ಸಿಬ್ಬಂದಿ ಸರಿಯಾಗಿ ಬೀಟ್ ಮಾಡುತ್ತಿದ್ದಾರಾ, ಇ-ಬೀಟ್ ಮತ್ತು ಆ್ಯಪ್ ವ್ಯವಸ್ಥೆ, ದಾಖಲಾತಿಗಳನ್ನು ಪಾಲಿಸುತ್ತಿದ್ದಾರಾ ಎಂಬುದನ್ನು ಪರಿಶೀಲನೆ ನಡೆಸಬೇಕು. ಇಲ್ಲವಾದರೆ, ಅಂಥವರಿಗೆ ಸರಿಯಾದ ಮಾರ್ಗದರ್ಶನ ಕೊಟ್ಟು ಕರ್ತವ್ಯ ನಿರ್ವಹಿಸುವಂತೆ ಮಾಡಬೇಕು. ಯಾವುದೇ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ಕೊಡುತ್ತೇನೆ ಎಂದು ಡಿಜಿ-ಐಜಿಪಿ ಡಾ.ಅಲೋಕ್ ಮೋಹನ್ ಎಚ್ಚರಿಕೆ ಕೊಟ್ಟಿದ್ದಾರೆ.
ಇದನ್ನೂ ಓದಿ : IAS Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ