ಬೆಂಗಳೂರು: ಪ್ರಜಾಪ್ರಭುತ್ವ ಉಳಿವಿಗಾಗಿ ಸಂವಿಧಾನ ಬಚಾವ್ ಸಂಘಟನೆ ಅ. 30ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಜಾಥಾ ಹಮ್ಮಿಕೊಂಡಿದೆ.
ಸಂಸ್ಥೆಯ ಪ್ರಕಟಣೆಯಲ್ಲಿ ಈ ವಿವರ ನೀಡಲಾಗಿದ್ದು, ಪ್ರಗತಿಪರರು, ಲೇಖಕರು, ಸಾಹಿತಿಗಳು, ಚಿಂತಕರು, ಪ್ರಗತಿಪರ ಹೋರಾಟಗಾರು, ರೈತ ಹೋರಾಟಗಾರರು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದರಾಮಯ್ಯ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಮರಳು ಸಿದ್ದಪ್ಪ, ಲಲಿತಾ ನಾಯಕ, ವಸುಂಧರಾ ಭೂಪತಿ, ಅಲ್ಪಸಂಖ್ಯಾತ ಸಹಿತಿಯಾದ ಶರೀಫಾ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಈ ವೇಳೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಡೆಸಿರುವ ಅಕ್ರಮಗಳ ಕುರಿತು ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಈ ಉಪಚುನಾವಣೆಯಲ್ಲಿ ರಾಜರಾಜೇಶ್ವರಿನಗರದ ಮತದಾರರು ಈಗ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಅವರನ್ನು ಸೋಲಿಸುವ ಮುಖಾಂತರ ಪ್ರಜೆಗಳೇ ನಿಜವಾದ ಪ್ರಭುಗಳು ಎಂಬುವುದನ್ನು ಸಾಬೀತುಪಡಿಸಿ ಎಂದು ಪ್ರಜಾಪ್ರಭುತ್ವ ಉಳಿವಿಗಾಗಿ ಸಂವಿಧಾನ ಬಚಾವ್ ಸಂಘಟನೆ ಪ್ರಧಾನ ಕಾರ್ಯದರ್ಶಿ ಜಗನ್ ಹಾಗೂ ಸಾಹಿತಿ ಬಂಜಗೆರೆ ಪ್ರಕಾಶ್ ಹೊರಡಿಸಿರುವ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.