ETV Bharat / state

ಮತದಾರರ ಗುರುತಿನ ಚೀಟಿ ನಾಪತ್ತೆ ಪ್ರಕರಣ: ಹೈಕೋರ್ಟ್ ಸಿಜೆಗೆ ಪತ್ರ, ತನಿಖೆಗೆ ಮನವಿ - ವೋಟರ್ಸ್ ಐಡಿ ಕಳವು ಹಗರಣ

ಮತದಾರರ ಗುರುತಿನ ಚೀಟಿ ನಾಪತ್ತೆ ಪ್ರಕರಣ ಸಂಬಂಧ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳಿಗೆ ಸಿಆರ್​ಎಫ್​ ಪತ್ರ ಬರೆದು, ತನಿಖೆಗೆ ಮನವಿ ಮಾಡಿದೆ.

ಮತದಾರರ ಗುರುತಿ ಚೀಟಿ ಪ್ರಕರಣ
ಮತದಾರರ ಗುರುತಿ ಚೀಟಿ ಪ್ರಕರಣ
author img

By

Published : Dec 5, 2022, 9:11 PM IST

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಮತದಾರರ ಗುರುತಿನ ಚೀಟಿ ನಾಪತ್ತೆ ಆರೋಪದ ಕುರಿತು ವಿಶೇಷ ತನಿಖಾ ದಳ ರಚಿಸಿ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಸಿಟಿಜನ್ಸ್ ರೈಟ್ಸ್ ಫೌಂಡೇಶನ್ (ಸಿಆರ್ಎಫ್) ಪತ್ರ ಬರೆದಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಹಗರಣದ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ಅದರ ಮೇಲ್ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳು ವಹಿಸಬೇಕು. ಆ ಮೂಲಕ ಹಗರಣದಲ್ಲಿ ನೇರ ಮತ್ತು ಪರೋಕ್ಷವಾಗಿ ಭಾಗಿಯಾಗಿರುವ ರಾಜಕಾರಣಿಗಳು, ಅಧಿಕಾರಿಗಳನ್ನು ಬಯಲಿಗೆ ಎಳೆಯಬೇಕು. ಬೆಂಗಳೂರು ವ್ಯಾಪ್ತಿಯಲ್ಲಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಸುವ ಜವಾಬ್ದಾರಿ ಹೊಂದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಮತ್ತು ಜಿಲ್ಲಾ ಚುನಾವಣಾಧಿಕಾರಿಯು (ಡಿಇಒ) ಸರ್ಕಾರೇತರ ಸಂಸ್ಥೆಯಾದ ʼಚಿಲುಮೆʼ ಜೊತೆ ಕೈಜೋಡಿಸಿ, ಕ್ರಿಮಿನಲ್ ಪಿತೂರಿ ನಡೆಸುವ ಮೂಲಕ ಮತದಾರರ ಪಟ್ಟಿಯನ್ನು ತಿರುಚುವ ಕೃತ್ಯ ಎಸಗಿದ್ದು, ಈ ಮೂಲಕ ನೇರವಾಗಿ ಚುನಾವಣಾ ಫಲಿತಾಂಶದಲ್ಲಿ ಹಸ್ತಕ್ಷೇಪ ಮಾಡಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಉಸ್ತುವಾರಿಯಾಗಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರು ಚುನಾವಣಾಧಿಕಾರಿಯಾಗಿದ್ದಾರೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಅಭಿಯಾನದ ಬೃಹತ್ ಜವಾಬ್ದಾರಿಯನ್ನು ಚಿಲುಮೆ ಉಚಿತವಾಗಿ ನಡೆಸುವುದಾಗಿ ತಿಳಿಸಿದ್ದು, ಇದಕ್ಕೆ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿಯಾನ ನಡೆಸಲು ಚಿಲುವೆಗೆ ಬಿಬಿಎಂಪಿ ಅನುಮತಿಸಿದೆ. ಆ ನಂತರ ಅದನ್ನು 28 ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಿಸಿ, ಆಗಸ್ಟ್ 20ರಂದು ಸರ್ಕಾರಿ ಆದೇಶ ಮಾಡಲಾಗಿದೆ. ಚಿಲುಮೆ ಸಂಸ್ಥೆಯ ಹಿನ್ನೆಲೆ ಪರಿಶೀಲಿಸದೇ ಬಿಬಿಎಂಪಿಯು ತಕ್ಷಣ ಮತದಾರರಲ್ಲಿ ಜಾಗೃತಿ ಮೂಡಿಸುವ ಅಭಿಯಾನದ ಹೊಣೆಗಾರಿಕೆ ಚಿಲುಮೆ‌ ಸಂಸ್ಥೆಗೆ ನೀಡಲಾಗಿದೆ.

ಸರ್ಕಾರಿ ಅಧಿಕಾರಿಗಳ ವೇಷದಲ್ಲಿ ಮತದಾರರ ದತ್ತಾಂಶ ಸಂಗ್ರಹಿಸುವ ಮೂಲಕ ಚಿಲುಮೆ ಸಂಸ್ಥೆಯು ಮಹಾನ್ ವಂಚನೆ ಕೃತ್ಯದಲ್ಲಿ ಭಾಗಿಯಾಗಿದ್ದು, ತನ್ನ ಸಿಬ್ಬಂದಿಗೆ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ಕಾರ್ಡ್​ಗಳನ್ನೂ ನೀಡಿದೆ. ಹಗರಣ ಸಂಬಂಧದ ಚಿಲುಮೆ ಮತ್ತು ಲೋಕೇಶ್ ಎಂಬಾತನ ವಿರುದ್ಧ ಹಲಸೂರು ಠಾಣೆಯಲ್ಲಿ ನವೆಂಬರ್ 11ರಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಕರಣ ದಾಖಲಿಸಿದ್ದಾರೆ.

ಜೊತೆಗೆ, ಕಾಡುಗೋಡಿ ಠಾಣೆಯಲ್ಲಿ ಪ್ರತ್ಯೇಕವಾಗಿ ಲೋಕೇಶ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ಚುನಾವಣಾ ಆಯೋಗಕ್ಕೂ ದೂರು ನೀಡಿದ್ದು, ಎಐಸಿಸಿಯು ಮುಖ್ಯ ಚುನಾವಣಾ ಆಯುಕ್ತರಿಗೂ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹಗರಣ ಗಂಭೀರ ಆರೋಪದ್ದಾಗಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾಗಿದೆ. ಹೀಗಾಗಿ ಪ್ರಕರಣವನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ‌ನೇತೃತ್ವದಲ್ಲಿ ನಡೆಸಬೇಕು ಎಂದು ಪತ್ರದಲ್ಲಿ ಕೋರಲಾಗಿದೆ.

(ಓದಿ: ಮತದಾರರ ಮಾಹಿತಿ ಕಳವು ಪ್ರಕರಣ: ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.