ETV Bharat / state

23 ಸಾವಿರ ಮೀನುಗಾರರ ಸಾಲಮನ್ನಾ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ - Fisheries Minister Kota Srinivasa Poojary

23 ಸಾವಿರ ಜನ ಮೀನುಗಾರರ 60 ಕೋಟಿ ರೂಪಾಯಿ ಸಾಲಮನ್ನಾ ಮಾಡಿದ್ದು, ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ
: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ
author img

By

Published : Apr 24, 2020, 6:32 PM IST

ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ಮೀನುಗಾರರ ಸಾಲಮನ್ನಾ ಯೋಜನೆಯಡಿ 23 ಸಾವಿರ ಫಲಾನುಭವಿಗಳಿಗೆ, 60 ಕೋಟಿ ರೂಪಾಯಿಯನ್ನು ರಾಜ್ಯ ಹಣಕಾಸು ಇಲಾಖೆ ಅಧಿಕೃತವಾಗಿ ಇಂದು ಬಿಡುಗಡೆ ಮಾಡಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಸಾಲಮನ್ನಾದ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಪ್ರಕಟಣೆ
23 ಸಾವಿರ ಜನ ಮೀನುಗಾರರ ಸಾಲಮನ್ನಾ

ಕೊರೊನಾದ ಸಂಕಷ್ಟದ ದಿನಗಳಲ್ಲಿ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾಗೂ ಸಹಕಾರ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜ್ಯದ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತಿರುವುದಾಗಿ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.