ETV Bharat / state

'ವಕ್ಫ್​ ಆಸ್ತಿ ಸಂರಕ್ಷಣೆ ವಿಚಾರದಲ್ಲಿ ಅಸಡ್ಡೆ ತೋರುವುದನ್ನು ಸಹಿಸುವುದಿಲ್ಲ': ಸಚಿವ ಜಮೀರ್ ಅಹ್ಮದ್​​ ಖಾನ್

ವಕ್ಫ್​ ಆಸ್ತಿ ಸಂರಕ್ಷಣೆ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್​​ ಖಾನ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಸೂಚನೆ ಕೊಟ್ಟಿದ್ದಾರೆ.

Waqf Department Minister Zameer meeting with officials
ಸಚಿವ ಜಮೀರ್ ನೇತೃತ್ವದಲ್ಲಿ ಸಭೆ
author img

By ETV Bharat Karnataka Team

Published : Oct 1, 2023, 9:19 AM IST

ಬೆಂಗಳೂರು: ವಕ್ಫ್​ ಆಸ್ತಿ ಸಂರಕ್ಷಣೆ ವಿಚಾರದಲ್ಲಿ ಅಸಡ್ಡೆ ತೋರುವುದನ್ನು ಸಹಿಸುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್​ ಇಲಾಖೆ ಸಚಿವ ಜಮೀರ್ ಅಹ್ಮದ್​​ ಖಾನ್ ತಿಳಿಸಿದ್ದಾರೆ.

ವಕ್ಫ್​ ಆಸ್ತಿ ಸಂರಕ್ಷಣೆಗೆ ಸಂಬಂಧಿಸಿದ ಸಭೆ: ವಕ್ಫ್​ ಬೋರ್ಡ್ ನಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಅಸ್ತಿಗಳ ಸಂರಕ್ಷಣೆ ಹಾಗೂ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಜಮೀರ್ ಅಹ್ಮದ್​​ ಖಾನ್, ವಕ್ಫ್​ ಆಸ್ತಿ ಸಂರಕ್ಷಣೆ ವಿಚಾರದಲ್ಲಿ ಅಸಡ್ಡೆ ತೋರುವುದನ್ನು ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು. ವಕ್ಫ್​ ಆಸ್ತಿಗಳ ಮಾಹಿತಿ, ನ್ಯಾಯಾಲಯದಲ್ಲಿರುವ ಪ್ರಕರಣ, ಲೀಸ್ ಆಧಾರದಲ್ಲಿ ನೀಡಿರುವ ಅಸ್ತಿಗಳ ಬಗ್ಗೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ನೀವೆಲ್ಲ ಏನು ಮಾಡುತ್ತಿದ್ದೀರಿ. ಹತ್ತಾರು ವರ್ಷಗಳಿಂದ ಇದ್ದರೂ ನಿಮ್ಮ ಬಳಿ ಮಾಹಿತಿ ಇಲ್ಲ ಎಂದರೆ ಹೇಗೆ ಎಂದು ತರಾಟೆಗೆ ತೆಗೆದುಕೊಂಡರು.

ಅಧಿಕಾರಿಗಳ ವಿರುದ್ಧ ಕ್ರಮ: 15 ದಿನಗಳಲ್ಲಿ ಸಮಗ್ರ ಮಾಹಿತಿ ಸಿದ್ಧಪಡಿಸಬೇಕು. ಆಗಲೂ ಸೂಕ್ತ ಮಾಹಿತಿ ನೀಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ವಕ್ಫ್​ ಬೋರ್ಡ್ ನಲ್ಲಿ ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿರುವವರನ್ನು ವರ್ಗಾವಣೆ ಮಾಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಲ್ಲಿ ತಿಳಿಸಿದರು.

ಇದನ್ನೂ ಓದಿ: ಯಲ್ಲಮ್ಮದೇವಿ ಹುಂಡಿ ಎಣಿಕೆ ಕಾರ್ಯ: 40 ದಿನಗಳಲ್ಲಿ 1.03 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹ

ಒಟ್ಟಾರೆ ವಕ್ಫ್​ ಆಸ್ತಿಗಳ ಪೈಕಿ 1,500 ಪ್ರಕರಣ ನ್ಯಾಯಾಲಯದಲ್ಲಿದ್ದು, ಎಸಿ ಹಾಗೂ ಡಿಸಿ ನ್ಯಾಯಾಲಯದಲ್ಲಿ ಸೆಕ್ಷನ್ 52 ಮತ್ತು 54 ಅಡಿ ಇರುವ 675 ಪ್ರಕರಣಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆಯೂ ನಿರ್ದೇಶನ ನೀಡಿದರು. ಇದೇ ಸಂದರ್ಭ ವಕ್ಫ್​ ಬೋರ್ಡ್​​​ಗೆ ಆಸ್ತಿ ದಾನ ಮಾಡಿರುವವರ ಹೆಸರು, ಉದ್ದೇಶ ಹಾಗೂ ಪ್ರಸ್ತುತ ಸ್ಥಿತಿಗತಿ ಕುರಿತ ಸಂಪುಟಗಳನ್ನು ಸಚಿವರು ಬಿಡುಗಡೆ ಮಾಡಿದರು. ವಕ್ಫ್​ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಖಾನ್ ಫರ್ವೇಜ್ ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ: ಮೈಸೂರು: ಅಜ್ಜಿಯ ತಿಥಿಗೆ ಬಂದಿದ್ದ ಕುಟುಂಬಸ್ಥರು.. ನಾಲೆಯಲ್ಲಿ ಮುಳುಗಿ ಅಪ್ಪ, ಅಮ್ಮ, ಮಗಳು ಸಾವು

ಇತ್ತೀಚೆಗಷ್ಟೇ ಸಚಿವ ಜಮೀರ್ ಅವರು ಬಳ್ಳಾರಿಯ ಸಂಡೂರು ಸೇರಿ ವಿವಿಧ ಗಣಿ ಬಾಧಿತ ಹಳ್ಳಿಗಳು ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿದ್ದರು. ಅಲ್ಲಿನ ಪರಿಸ್ಥಿತಿಗಳನ್ನು ಪರಿಶೀಲಿಸಿ ಜೊತೆಗೆ ಸ್ಥಳೀಯರನ್ನು ಹಾಗೂ ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿ ಅಗತ್ಯ ಮಾಹಿತಿಗಳನ್ನು ಪಡೆದಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.