ಬೆಂಗಳೂರು: ಸಿಲಿಕಾನ್ ಸಿಟಿಯ ಆರ್‌ಟಿನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ರೌಡಿಗಳಿಗೆ ಇವತ್ತು ಹಿರಿಯ ಖಾಕಿ ಅಧಿಕಾರಿಗಳು ಖಡಕ್ ವಾರ್ನಿಂಗ್ ನೀಡಿದ್ದಾರೆ.
12 ಜನ ರೌಡಿಗಳು, 20 ಜನ ಎಂಓಗಳು, ಇತರೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಸುಮಾರು 234 ಜನರನ್ನು ಕರೆಯಿಸಿದ ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್, ಅವರಿಗೆಲ್ಲ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಂತರ ವಿಚಾರಣೆ ನಡೆಸಿ, ಪ್ರತಿಯೊಬ್ಬರ ಮಾಹಿತಿ ಪಡೆದು ವಾಪಸ್ ಕಳುಹಿಸಿದ್ದಾರೆ.
ಇತ್ತಿಚೇಗೆ ಸಿಲಿಕಾನ್ ಸಿಟಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಕೆಲವರು ಸಂಚುರೂಪಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಉಗ್ರರು ನುಸುಳಿದ್ದಾರೆ ಎನ್ನುವ ಊಹಾಪೋಹ ಹರಿದಾಡಿದೆ. ಹಾಗಾಗಿ ಉತ್ತರ ವಲಯ ಡಿಸಿಪಿ ಕಳೆದ ವಾರ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದರು. ಇದೀಗ ಮತ್ತೆ ರೌಡಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.