ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮುಂಗಾರು ಮಳೆ ಹೆಚ್ಚಾದ ಕಾರಣ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಿಂದಾಗಿ ಪ್ರವಾಹ ಭೀತಿ ಎದುರಾಗಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ.
ಅಲ್ಲದೆ ಮಲೆನಾಡು, ಕರಾವಳಿ ಭಾಗದಲ್ಲಿರುವ ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ರಾಜ್ಯದ ಪ್ರಮುಖ ಅಣೆಕಟ್ಟೆಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದ್ದು, ಯಾವ ಯಾವ ಅಣೆಕಟ್ಟುಗಳಲ್ಲಿ ಎಷ್ಟು ಪ್ರಮಾಣದ ನೀರಿದೆ ಎಂಬುದರ ಕುರಿತ ವಿಸ್ತೃತ ಮಾಹಿತಿ ಇಂತಿದೆ.