ಬೆಂಗಳೂರು: ಕೊರೊನಾ ಸೋಂಕು ಹಾಗೂ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದ ಉದ್ಯಮಿಗಳು ಹಾಗೂ ಜನಸಾಮಾನ್ಯರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಹೊರಡಿಸಿರುವ 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಅನ್ನು ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸ್ವಾಗತಿಸಿದ್ದಾರೆ.
ಭಾರತದ ಆರ್ಥಿಕ ವ್ಯವಸ್ಥೆಯ ಅಭಿವೃದ್ಧಿಗೆ ಸಣ್ಣ ಕೈಗಾರಿಕೆಗಳು, ಕೃಷಿ ವಲಯಗಳು ಮಹತ್ವದ ಕೊಡುಗೆ ನೀಡುತ್ತಿವೆ. ಇಂತಹ ವಲಯಗಳಿಗೆ ಹಣಕಾಸಿನ ಭದ್ರತೆ ನೀಡಲು ಈ ಪ್ಯಾಕೇಜ್ ಅಗತ್ಯವಾಗಿದೆ ಎಂದು ಹೇಳಿದ್ದಾರೆ.
ತೆರಿಗೆ ಪಾವತಿಸುವ ವೇತನದಾರರೂ ಸಹ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಈ ಸಂದರ್ಭದಲ್ಲಿ ಆರ್ಥಿಕ ಪ್ಯಾಕೇಜ್ ನೀಡುತ್ತಿರುವುದರಿಂದ ಸಾಮಾನ್ಯ ವರ್ಗದ ಜನರಿಗೂ ಅನುಕೂಲವಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.