ETV Bharat / state

ಚುನಾವಣೆ ನಂತರ ಮೈತ್ರಿ ಸರ್ಕಾರ ಬಿದ್ದರೆ ಅದಕ್ಕೆ ಸಿದ್ದರಾಮಯ್ಯನವರೇ ಕಾರಣ: ಅಶೋಕ್​​​

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವುದರಿಂದ ಆಡಳಿತಾರೂಢ ಪಕ್ಷ ಹಾಗೂ ಪ್ರತಿಪಕ್ಷಗಳು ರಾಜಕೀಯ ಕೆಸರೆರಚಾಟದಲ್ಲಿ ತೊಡಗಿವೆ. ಇನ್ನು ರಾಜ್ಯದ ರಾಜಕೀಯದ ಬಗ್ಗೆ ವಾಗ್ದಾಳಿ ನಡೆಸಿರುವ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಆರ್.ಅಶೋಕ್,​ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬದಲಾದರೆ ಅದಕ್ಕೆ ಕಾರಣ ಆಪರೇಷನ್ ಕಮಲ ಅಲ್ಲ ಎಂದಿದ್ದಾರೆ.

ಬೆಂಗಳೂರಿನ ಪ್ರೆಸ್​ ಕ್ಲಬ್​ನಲ್ಲಿ ಇಂದು ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ಪಕ್ಷದ ಮುಖಂಡರು
author img

By

Published : Apr 8, 2019, 4:33 PM IST

ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬದಲಾದರೆ ಅದಕ್ಕೆ ಸಿದ್ದರಾಮಯ್ಯನವರ ಆಪರೇಷನ್ ಕಾರಣವಾಗಲಿದೆಯೇ ಹೊರತು ಆಪರೇಷನ್ ಕಮಲ ಅಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನ ಪ್ರೆಸ್​ ಕ್ಲಬ್​ನಲ್ಲಿ ಇಂದು ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನಂತರ ಕುಮಾರಸ್ವಾಮಿ ನೇತೃತ್ವದ ಸರ್ಕಾರವನ್ನು ಬೀಳಿಸಲು ನಾವು ಯತ್ನಿಸುವುದಿಲ್ಲ. ಒಂದು ವೇಳೆ ಬಿದ್ದರೆ ಅದಕ್ಕೆ ಸಿದ್ದರಾಮಯ್ಯ ಅವರಲ್ಲದೆ ಬೇರಾರೂ ಕಾರಣರಾಗುವುದಿಲ್ಲ ಎಂದರು.

ಈ ಹಿಂದೆ ನಾವೇನೂ ಆಪರೇಷನ್ ಕಮಲ ಕಾರ್ಯಾಚರಣೆ ಮಾಡಿರಲಿಲ್ಲ. ಯಾರು ಸಿದ್ದರಾಮಯ್ಯನವರ ಬೆಂಬಲಿಗರು ಎಂದು ಹೇಳಿಕೊಂಡಿದ್ದರೋ? ಅವರು ಬಂದು ಬಿಜೆಪಿಯ ಜತೆ ಗುರುತಿಸಿಕೊಂಡಿದ್ದರು ಅಂತ ವಿವರಿಸಿದರು.

ರಾಜ್ಯದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ ಅವರು, ಮೈತ್ರಿಕೂಟದ ಅಂಗಪಕ್ಷಗಳ ನಡುವೆ ಹೊಂದಾಣಿಕೆಯ ಕೊರತೆ ಇರುವುದು ಬಿಜೆಪಿಯ ಪಾಲಿಗೆ ಲಾಭದಾಯಕವಾಗಲಿದೆ ಎಂದರು. ದೇಶಕ್ಕೆ ಸುಭದ್ರ ಸರ್ಕಾರ ಬೇಕು, ಸ್ಥಿರ ಸರ್ಕಾರ ಬೇಕು ಎಂಬ ಬಾವನೆ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.

ಬೆಂಗಳೂರಿನ ಪ್ರೆಸ್​ ಕ್ಲಬ್​ನಲ್ಲಿ ಇಂದು ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ಪಕ್ಷದ ಮುಖಂಡರು

ಲೋಕಸಭಾ ಚುನಾವಣೆಯ ನಂತರ ರಾಜ್ಯಾಧ್ಯಕ್ಷರ ಹುದ್ದೆಗೆ ಹೊಸಬರು ಬರಬಹುದು ಎಂದು ಪರೋಕ್ಷವಾಗಿ ಹೇಳಿದ ಅವರು, ಒಂದು ವೇಳೆ ತಮಗೆ ಅಧ್ಯಕ್ಷ ಸ್ಥಾನ ಸಿಕ್ಕರೆ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವಕಾಶ ಸಿಕ್ಕರೆ ನಿಶ್ಚಿತವಾಗಿ ಎಂತಹ ಜವಾಬ್ದಾರಿಯನ್ನಾದರೂ ನಿರ್ವಹಿಸುತ್ತೇನೆ. ನಾನೇನೂ ಸನ್ಯಾಸಿಯಲ್ಲ. ರಾಷ್ಟ್ರಾಧ್ಯಕ್ಷರಿಂದ ಹಿಡಿದು ಪಂಚಾಯತ್​ಗಳ ತನಕ ದೇಶಾದ್ಯಂತ ಪಕ್ಷದ ಪುನರ್​ರಚನೆ ಕಾರ್ಯ ನಡೆಯಲಿದೆ. ಕರ್ನಾಟಕದಲ್ಲೂ ಕೂಡಾ ಬದಲಾವಣೆಯ ಪರ್ವ ಆರಂಭವಾಗಲಿದೆ ಎಂದರು.

ವಾಸ್ತವವಾಗಿ ಇದು ಕಳೆದ ಡಿಸೆಂಬರ್​ ತಿಂಗಳಲ್ಲೇ ನಡೆಯಬೇಕಿತ್ತು. ಆದರೆ, ಕಾರಣಾಂತರಗಳಿಂದ ಮುಂದಕ್ಕೆ ಹೋಯಿತು ಎಂದು ಇದೇ ಸಂದರ್ಭದಲ್ಲಿ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಬಿಜೆಪಿ ಕಟ್ಟಿದವರು ಯಡಿಯೂರಪ್ಪ, ಅಶೋಕ್​ನಂತವರು. ಆದರೆ ಈಗ ಹೆಲಿಕಾಪ್ಟರ್​ನಲ್ಲಿ ಬಂದವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾದ ಕುರಿತು ಪ್ರಸ್ತಾಪಿಸಿದಾಗ ಬಿಜೆಪಿ ಯುವಕರನ್ನು ಬೆಳೆಸಲು ಮುಂದಾಗಿದೆ ಎಂದರು.

ನಳೀನ್ ಕುಮಾರ್ ಕಟೀಲು ಈ ಪ್ರಯೋಗದ ಮೊದಲ ವ್ಯಕ್ತಿ. ನಂತರ ಪ್ರತಾಪ್‍ಸಿಂಹ. ಈಗ ತೇಜಸ್ವಿ ಸೂರ್ಯ. ಅವರು ನಿಶ್ಚಿತವಾಗಿ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ. ಅವರನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ನಾನೇ ಹೊತ್ತಿದ್ದೇನೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಏಳು ಜಾಥಾಗಳಲ್ಲಿ ಪಾಲ್ಗೊಳ್ಳಬೇಕೆಂದು ಮೊದಲು ನಿರ್ಧರಿಸಲಾಗಿತ್ತು. ಆದರೆ ಈಗ ಇನ್ನೂ ಒಂದೆರಡು ಕಡೆ ಹೆಚ್ಚಾಗಿ ಭಾಗವಹಿಸಬಹುದು ಎಂದು ಹೇಳಿದರು. ಲೋಕಸಭಾ ಚುನಾವಣೆಯಲ್ಲಿನ ಸೀಟು ಹಂಚಿಕೆಗೂ, ಆರ್​ಎಸ್​ಎಸ್​ಗೂ ಯಾವ ಸಂಬಂಧವೂ ಇಲ್ಲ. ಪಕ್ಷ ತಯಾರಿಸಿದ ಪಟ್ಟಿಯಲ್ಲಿ ಇಪ್ಪತ್ತಾರು ಮಂದಿಗೆ ಟಿಕೆಟ್ ನೀಡಲಾಗಿದೆ. ಎರಡು ಸೀಟುಗಳ ಹಂಚಿಕೆ ವಿಷಯ ಬಂದಾದ ಹೈಕಮಾಂಡ್ ತನ್ನ ವಿವೇಚನೆಯನ್ನು ಬಳಸಿದೆ ಎಂದರು. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ. ಅದು ಹೇಳಿದಂತೆ ಕೆಲಸ ಮಾಡಲು ಸಿದ್ಧ ಎಂದು ಪುನರುಚ್ಚರಿಸಿದ ಅವರು, ಪಕ್ಷದಲ್ಲೀಗ ಯಾವ ಅಸಮಾಧಾನಗಳೂ ಇಲ್ಲ ಎಂದು ಹೇಳಿದರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.