ಬೆಂಗಳೂರು: ಸಿಡಿ ವಿಚಾರದಲ್ಲಿ ನಾವು ಮೌನವಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ಸದಸ್ಯರು ವಿಧಾನಸಭೆಯಲ್ಲಿ ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಲಾಪ ಸುಗಮವಾಗಿ ನಡೆಯದ ಕಾರಣ ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಡಿ ವಿಚಾರದಲ್ಲಿ ರಾಜಕೀಯ ಪಕ್ಷಗಳ ಆನೇಕ ಅಭಿಪ್ರಾಯಗಳಿವೆ. ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ. ಆ ತಂಡ ತನಿಖೆ ಮಾಡಲಿ ಎಂದರು.
ನಿನ್ನೆಯಿಂದ ಕಾಂಗ್ರೆಸ್ ಪಕ್ಷದ ಸದಸ್ಯರು ಧರಣಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಆನೇಕ ಸಮಸ್ಯೆಗಳಿವೆ. ಅವುಗಳ ಬಗ್ಗೆ ಚರ್ಚೆ ಮಾಡಬೇಕಿದೆ. ಸದನದ ಸಮಯ ಹಾಳು ಮಾಡುವುದು ನಮ್ಮ ಉದ್ದೇಶವಲ್ಲ. ಹೀಗಾಗಿ, ಸದನದಲ್ಲಿ ನಾವು ಸುಮ್ಮನಿದ್ದೇವೆ ಎಂದು ಹೇಳಿದರು.