ETV Bharat / state

ವಿವೇಕಾನಂದ ಜಯಂತಿಯಂದು ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್: ಡಿಸಿಎಂ ಅಶ್ವತ್ಥ್ ನಾರಾಯಣ್

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಸಿಎಂ ಅಶ್ವತ್ಥ್ ನಾರಾಯಣ್ , ಇದೆ ಜ.12 ರಂದು ವಿವೇಕಾನಂದ ಜಯಂತಿ ಏರ್ಪಡಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ‌ ದರ್ಜೆ ಕಾಲೇಜುಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ವಿತರಿಸಲಾಗುವುದು ಎಂದು ತಿಳಿಸಿದರು.

DCM Ashwath Narayan
ಡಿಸಿಎಂ ಅಶ್ವತ್ಥ್ ನಾರಾಯಣ್
author img

By

Published : Jan 10, 2020, 6:18 PM IST

ಬೆಂಗಳೂರು : ಜ.12ರಂದು ರಾಜ್ಯಾದ್ಯಂತ ವಿವೇಕಾನಂದ ಜಯಂತಿ ಏರ್ಪಡಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ‌ ದರ್ಜೆ ಕಾಲೇಜುಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ ಟಾಪ್​ ವಿತರಿಸಲಾಗುತ್ತದೆ‌ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದರು.

ಡಿಸಿಎಂ ಅಶ್ವತ್ಥ್ ನಾರಾಯಣ್

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಒಂದು ಲಕ್ಷ ವಿದ್ಯಾರ್ಥಿಗಳಿಗೆ 300 ಕೋಟಿ ರೂ.ವೆಚ್ಚದಲ್ಲಿ ಹೆಚ್​ಪಿ ಮತ್ತು ಏಸರ್ ಕಂಪನಿಯ ಲ್ಯಾಪ್ ಟಾಪ್​ಗಳನ್ನು ವಿತರಿಸಲಾಗುತ್ತದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಯಂತಿ ಕೈಗೊಳ್ಳಲಾಗುವುದು. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಧಾನ ಕಾರ್ಯಕ್ರಮವಿರಲಿದೆ ಎಂದು ವಿವರಿಸಿದರು.

ಯುವ ಸಬಲೀಕರಣ ಕೇಂದ್ರಗಳ ಉದ್ಘಾಟನೆ:
ಅಲ್ಲದೆ 21 ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳನ್ನು ಒಳಗೊಂಡ ಸಮಿತಿಯ ಮಾರ್ಗದರ್ಶನದಲ್ಲಿ ಯುವ ಸಬಲೀಕರಣ ಕೇಂದ್ರಗಳನ್ನು ಉದ್ಘಾಟಿಸಲಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ ಯುವ ಸಬಲೀಕರಣ ಕೇಂದ್ರಗಳನ್ನು ಉದ್ಘಾಟಿಸಲಾಗುತ್ತದೆ. ನಂತರ ಅದನ್ನು ಪ್ರೌಢಶಾಲೆ, ಪಿಯು ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಗೂ ವಿಸ್ತರಿಸಲಾಗುತ್ತದೆ ಎಂದರು.

ಪ್ರತಿ ವರ್ಷ ಕಾಲೇಜುಗಳಿಂದ ಪಾಸ್​ ಔಟ್​ ಆಗುತ್ತಿರುವ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳಿವೆ. ಡಿಮಾಂಡ್​ಗಿಂತ ಸಪ್ಲೈ ಕಡಿಮೆ ಇದೆ. ಕಮ್ಯುನಿಕೇಷನ್ ಕೊರತೆಯಿಂದಾಗಿ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ಸಿಗುತ್ತಿಲ್ಲ. ಈ ಬಗ್ಗೆ ಮಾಹಿತಿ ಕೊಟ್ಟು ಅವರನ್ನು ಸಿದ್ಧಪಡಿಸುವ ಕೆಲಸವನ್ನು ಯುವ ಸಬಲೀಕರಣ ಕೇಂದ್ರಗಳ ಮೂಲಕ ಮಾಡಲಾಗುತ್ತದೆ ಎಂದು ತಿಳಿಸಿದರು.

ಕಾನೂನು ಕ್ರಮ ಕೈಗೊಳ್ಳುತ್ತೇವೆ:
ಮೈಸೂರು ವಿ ವಿ ಆವರಣದಲ್ಲಿ ವಿದ್ಯಾರ್ಥಿಗಳು ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿದ ಘಟನೆ ಸಂಬಂಧ ಈಗಾಗಲೇ ಕಾನೂನು ಕ್ರಮ ಜರುಗಿಸಲಾಗಿದೆ. ಕಾರ್ಯಕ್ರಮ ಆಯೋಜಿಸಿದ್ದ ನಾಲ್ಕಾರು ಸಂಘಟನೆಗಳು ಹಾಗೂ ಒಬ್ಬ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ‌. ಕ್ಯಾಂಪಸ್ ಒಳಗೆ, ಹೊರಗೆ ಪ್ರತಿಭಟನೆ ನಡೆಸಬೇಕಾದರೆ ಪೂರ್ವಾನುಮತಿ ಪಡೆಯಲೇಬೇಕು. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ನಿಶ್ಚಿತ ಎಂದು ಸ್ಪಷ್ಟಪಡಿಸಿದರು.

ಸಿಡಿ‌ ಪರಿಶೀಲಿಸುತ್ತಾರೆ:
ಕುಮಾರಸ್ವಾಮಿ ಹತ್ರ ಏನ್ ಸಿಡಿ ಇದ್ದರೂ ಅದರ ವಿಚಾರಣೆಯೂ ನಡೆಯಲಿದೆ. ಆಯೋಗದ ಮುಂದೆ ಕುಮಾರಸ್ವಾಮಿ ಸಿಡಿ ತೆಗೆದುಕೊಂಡು ಹೋಗಿ ಕೊಡಲಿ ಎಂದರು. ಅದರ ಬಗ್ಗೆನೂ ವಿಚಾರಣೆ ನಡೆಯಲಿದೆ, ಆ ಸಿಡಿ ಪರಿಶೀಲಿಸುತ್ತಾರೆ ಎಂದು ತಿಳಿಸಿದರು.

Intro:Body:KN_BNG_04_ASHWATHNARAYAN_LIVE_SCRIPT_7201951

ವಿವೇಕಾನಂದ ಜಯಂತಿ: ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ: ಡಿಸಿಎಂ ಅಶ್ವತ್ಥ್ ನಾರಾಯಣ್

ಬೆಂಗಳೂರು: ಜನವರಿ 12ರಂದು ರಾಜ್ಯಾದ್ಯಂತ ವಿವೇಕಾನಂದ ಜಯಂತಿ ಏರ್ಪಡಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ‌ದರ್ಜೆ ಕಾಲೇಜುಗಳ ಒಂದು ಲಕ್ಷ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ವಿತರಿಸಲಾಗುತ್ತದೆ‌ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಒಂದು ಲಕ್ಷ ವಿದ್ಯಾರ್ಥಿಗಳಿಗೆ 300 ಕೋಟಿ ರೂ.ವೆಚ್ಚದಲ್ಲಿ ಹೆಚ್ ಪಿ ಮತ್ತು ಏಸರ್ ಕಂಪನಿಯ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುತ್ತದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಯಂತಿ ಕೈಗೊಳ್ಳಲಾಗುವುದು. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಧಾನ ಕಾರ್ಯಕ್ರಮವಿರಲಿದೆ ಎಂದು ವಿವರಿಸಿದರು.

ಯುವ ಸಬಲೀಕರಣ ಕೇಂದ್ರಗಳ ಉದ್ಘಾಟನೆ:

ಅಲ್ಲದೆ 21 ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳನ್ನು ಒಳಗೊಂಡ ಸಮಿತಿಯ ಮಾರ್ಗದರ್ಶನದಲ್ಲಿ ಯುವ ಸಬಲೀಕರಣ ಕೇಂದ್ರಗಳನ್ನು ಉದ್ಘಾಟಿಸಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಲೀಡ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ ಯುವ ಸಬಲೀಕರಣ ಕೇಂದ್ರಗಳನ್ನು ಉದ್ಘಾಟಿಸಲಾಗುತ್ತದೆ. ನಂತರ ಅದನ್ನು ಪ್ರೌಢಶಾಲೆ, ಪಿಯು ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಗೂ ವಿಸ್ತರಿಸಲಾಗುತ್ತದೆ ಎಂದರು.

ಪ್ರತಿ ವರ್ಷ ಕಾಲೇಜುಗಳಿಂದ ಪಾಸೌಟ್ ಆಗುತ್ತಿರುವ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳಿವೆ. ಡಿಮಾಂಡ್ ಗಿಂತ ಸಪ್ಲೈ ಕಡಿಮೆ ಇದೆ. ಕಮ್ಯುನಿಕೇಷನ್ ಕೊರತೆಯಿಂದಾಗಿ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ಸಿಗುತ್ತಿಲ್ಲ. ಈ ಬಗ್ಗೆ ಮಾಹಿತಿ ಕೊಟ್ಟು ಅವರನ್ನು ಸಿದ್ಧಪಡಿಸುವ ಕೆಲಸವನ್ನು ಯುವ ಸಬಲೀಕರಣ ಕೇಂದ್ರಗಳ ಮೂಲಕ ಮಾಡಲಾಗುತ್ತದೆ ಎಂದು ತಿಳಿಸಿದರು.

ಕಾನೂನು ಕ್ರಮ ಕೈಗೊಳ್ಳುತ್ತೇವೆ:

ಮೈಸೂರು ವಿ ವಿ ಆವರಣದಲ್ಲಿ ವಿದ್ಯಾರ್ಥಿಗಳು ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿದ ಘಟನೆಗೆ ಈಗಾಗಲೇ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದರು.

ಕಾರ್ಯಕ್ರಮ ಆಯೋಜಿಸಿದ್ದ ನಾಲ್ಕಾರು ಸಂಘಟನೆಗಳು ಹಾಗೂ ಒಬ್ಬ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ‌. ಕ್ಯಾಂಪಸ್ ಒಳಗೆ ಇರಬಹುದು ಹೊರಗೆ ಇರಬಹುದು ಪ್ರತಿಭಟನೆ ನಡೆಸಬೇಕಾದರೆ ಪೂರ್ವಾನುಮತಿ ಪಡೆಯಲೇಬೇಕು. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ನಿಶ್ಚಿತ ಎಂದು ಸ್ಪಷ್ಟಪಡಿಸಿದರು.

ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿರಬಹುದು. ಅಲ್ಲಿ ಕ್ಯಾಂಪಸ್ ಒಳಭಾಗದಲ್ಲಿ ಘಟನೆ ನಡೆದಿಲ್ಲ. ಯಾಕೆ ರಜೆ ಕೊಟ್ಟಿದ್ದಾರೋ ಗೊತ್ತಿಲ್ಲ ವಿಚಾರಿಸುತ್ತೇನೆ ಎಂದು ಇದೇ ವೇಳೆ ತಿಳಿಸಿದರು.

ಸಿಡಿ‌ ಪರಿಶೀಲಿಸುತ್ತಾರೆ:

ಕುಮಾರಸ್ವಾಮಿ ಹತ್ರ ಏನ್ ಸಿಡಿ ಇದ್ದರೂ ಅದರ ವಿಚಾರಣೆಯೂ ನಡೆಯಲಿದೆ. ಆಯೋಗದ ಮುಂದೆ ಕುಮಾರಸ್ವಾಮಿ ಸಿಡಿ ತೆಗೆದುಕೊಂಡು ಹೋಗಿ ಕೊಡಲಿ ಎಂದರು.

ಅದರ ಬಗ್ಗೆನೂ ವಿಚಾರಣೆ ನಡೆಯಲಿದೆ, ಆ ಸಿಡಿ ಪರಿಶೀಲಿಸುತ್ತಾರೆ ಎಂದು ತಿಳಿಸಿದರು.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.