ETV Bharat / state

ಬಿಜೆಪಿ ಕಾರ್ಯಕರ್ತರ ಅಸಮಾಧಾನದ ಲಾಭ ಪಡೆಯುವ ಉದ್ದೇಶ ನಮಗಿಲ್ಲ: ಸಿದ್ದರಾಮಯ್ಯ - undefined

ಮಂಡ್ಯದಲ್ಲಿ ನಡೆಸುವ ಸಾರ್ವಜನಿಕ ಸಭೆಯಲ್ಲಿ ಮೈತ್ರಿ ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ
author img

By

Published : Mar 26, 2019, 7:34 PM IST

ಬೆಂಗಳೂರು: ಮಂಡ್ಯದಲ್ಲಿ ಸಾರ್ವಜನಿಕ ಸಭೆ ನಡೆಸಲು ನಾನು ಹೇಳಿದ್ದು, ಆ ಸಭೆಯಲ್ಲಿ ಮೈತ್ರಿ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂ.ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷ್ಣ ಭೈರೇಗೌಡರು ನಾಮಪತ್ರ ಸಲ್ಲಿಸಿದ ಬಳಿಕ‌ ಮಾತನಾಡಿದ ಸಿದ್ದರಾಮಯ್ಯ, ಮಂಡ್ಯಗೆ ಹೋಗಲ್ವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಮಂಡ್ಯದಲ್ಲಿ ಸಾರ್ವಜನಿಕ ಸಭೆ ನಡೆಸಲು ಹೇಳಿದ್ದೇನೆ. ಆ ಸಭೆಯಲ್ಲಿ ನಾನು, ದೇವೇಗೌಡರು, ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಎಲ್ಲರೂ ಭಾಗವಹಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ

ಇನ್ನು ಪ್ರಜ್ವಲ್ ರೇವಣ್ಣ ನನ್ನ ಆಶೀರ್ವಾದ ಕೋರಲು ಬಂದಿದ್ದರು. ಅವರೂ ಕೂಡ ಹಾಸನದಲ್ಲಿ ಗೆಲ್ಲುತ್ತಾರೆ ಎಂದು ತಿಳಿಸಿದರು.

ಮುದ್ದಹನುಮೇಗೌಡ ಮನವೊಲಿಕೆ ಯತ್ನ:ಕಾಂಗ್ರೆಸ್ ಟಿಕೆಟ್ ವಂಚಿತ ಮುದ್ದಹನುಮೇಗೌಡರ ಮನವೊಲಿಸುವ ಪ್ರಯತ್ನವನ್ನು ಮಾಡುತ್ತೇವೆ. ಮಾಜಿ ಶಾಸಕ ರಾಜಣ್ಣರ ಮನವೊಲಿಸುವ ಯತ್ನಗಳನ್ನೂ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.

ಮುದ್ದ ಹನುಮೇಗೌಡರು ತುಮಕೂರಿನ ಹಾಲಿ ಸಂಸದರಾಗಿದ್ದಾರೆ. ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರಿಗೆ ಬೇಸರವಾಗಿದೆ. ಅವರು ಕ್ಷೇತ್ರದಲ್ಲಿ ಸಕ್ರಿಯವಾಗಿ ಇದ್ದರು. ಉತ್ತಮ ಕೆಲಸ ಮಾಡಿದ್ದಾರೆ. ಅವರ ಮನವೊಲಿಸುವ ಕೆಲಸ ಮಾಡುತ್ತೇವೆ. ನಾಮಪತ್ರ ವಾಪಸ್​​ ಪಡೆಯುವಂತೆ ಮನವೊಲಿಕೆ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ತೇಜಸ್ವಿನಿಗೆ ಟಿಕೆಟ್ ಕೈ ತಪ್ಪಿದ್ದು, ಪರಿಣಾಮ ಬೀರುತ್ತದೆ:

ತೇಜಸ್ವಿನಿ ಅನಂತಕುಮಾರ್​​​ಗೆ ಟಿಕೆಟ್ ಕೈ ತಪ್ಪಿದ್ದರಿಂದ ಸ್ವಾಭಾವಿಕವಾಗಿ ಅನಂತಕುಮಾರ್ ಅಭಿಮಾನಿಗಳಿಗೆ ಬೇಸರವಾಗಿರುತ್ತದೆ. ಇದರ ಪರಿಣಾಮ ಚುನಾವಣೆಯಲ್ಲಿ ಕಾಣಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಅನಂತಕುಮಾರ್ ನಿಧನರಾಗುತ್ತಿದ್ದ ಹಾಗೆ ಬಿಜೆಪಿಯವರು ಅವರ ಪತ್ನಿ ತೇಜಸ್ವಿನಿ ಅನಂತ‌ಕುಮಾರ್ ಅಭ್ಯರ್ಥಿ ಎಂದು ಬಿಂಬಿಸಿದ್ದರು. ಈಗ ಇದ್ದಕ್ಕಿದ್ದಂತೆ ತೇಜಸ್ವಿ ಸೂರ್ಯ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ವಿವರಿಸಿದರು. ಬಿಜೆಪಿ ಕಾರ್ಯಕರ್ತರ ಅಸಮಾಧಾನದ ಲಾಭ ಪಡೆಯುವ ಉದ್ದೇಶ ನಮಗೆ ಇಲ್ಲ. ಆದರೆ, ಚುನಾವಣೆಯಲ್ಲಿ ಅದರ ಪರಿಣಾಮ ಬೀರುತ್ತದೆ. ಒಟ್ಟಿನಲ್ಲಿ ಬೆಂಗಳೂರಿನ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ತಿಳಿಸಿದರು.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.