ETV Bharat / state

ಕೊರೊನಾ ಅಂಕಿ-ಅಂಶ ಮುಚ್ಚಿಡುವ ಅವಶ್ಯಕತೆ ಇಲ್ಲ: ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಸುಧಾಕರ್ ಟಾಂಗ್!‌ - ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಸುಧಾಕರ್ ಟಾಂಗ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರತಿ ದಿನ ಬಿಡುಗಡೆ ಮಾಡುವ ಬುಲೆಟಿನ್​ನಲ್ಲಿ ಪರೀಕ್ಷೆ, ಹೊಸ ಪ್ರಕರಣಗಳು, ಗುಣಮುಖ ಹೊಂದಿರುವವರ ಸಂಖ್ಯೆ, ಮೃತಪಟ್ಟವರ ಸಂಖ್ಯೆ ಎಲ್ಲವನ್ನು ಜಿಲ್ಲಾ ಮಟ್ಟದಿಂದ ತರಿಸಿಕೊಂಡು ಕ್ರೂಢೀಕರಿಸಲಾಗುತ್ತದೆ..

ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಸುಧಾಕರ್ ಟಾಂಗ್
ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಸುಧಾಕರ್ ಟಾಂಗ್
author img

By

Published : Mar 27, 2021, 5:25 PM IST

ಬೆಂಗಳೂರು : ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವಿಲ್ಲ. ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

  • ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನ ಮುಚ್ಚಿಡುವ ಉದ್ದೇಶವೂ ಇಲ್ಲ ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ.

    ಇದು ಕಳೆದ 1 ವರ್ಷದಿಂದ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ಯೋಧರಿಗೆ ಎಸಗಿರುವ ಅಪಮಾನ.

    1/2https://t.co/16yOTGsX6N

    — Dr Sudhakar K (@mla_sudhakar) March 27, 2021 " class="align-text-top noRightClick twitterSection" data=" ">

ಪ್ರತಿಪಕ್ಷ‌ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಮಾಡಿರುವ ಮಾಡಿರುವ ಆಪಾದನೆಗಳು ಸುಳ್ಳು ಎಂದು ಆರೋಪಿಸಿರುವ ಸುಧಾಕರ್, ಟ್ವೀಟ್‌ ಮೂಲಕವೇ ಪ್ರತಿಕ್ರಿಯಿಸಿದ್ದಾರೆ. ಈ ರೀತಿ ಆಪಾದನೆಗಳನ್ನು ಮಾಡುವುದು ಕೊರೊನಾ ಯೋಧರಿಗೆ ಮಾಡುವ ಅಪಮಾನ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನು ಮುಚ್ಚಿಡುವ ಉದ್ದೇಶ ಇಲ್ಲ. ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆ ಮಾಡುವುದು ಸರಿಯಲ್ಲ. ಇದು ಕಳೆದ 1 ವರ್ಷದಿಂದ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ಯೋಧರಿಗೆ ಎಸಗಿರುವ ಅಪಮಾನ ಎಂದು ಸುಧಾಕರ್ ಹೇಳಿದ್ದಾರೆ.

  • ಈ ಅಂಕಿ-ಅಂಶಗಳು ಇ-ಜನ್ಮ ತಂತ್ರಾಂಶದಲ್ಲಿ ತಾತ್ಕಾಲಿಕವಾಗಿ ದಾಖಲಿಸಲಾಗಿರುವ ದತ್ತಾಂಶವಾಗಿದ್ದು, ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಅವರು ಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ಪರಿಷ್ಕರಣೆ ನಡೆಯಬೇಕಿದೆ. ಈ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು ಅಂತಿಮ ಅಂಕಿ-ಅಂಶಗಳ ಪ್ರಕಟಣೆ ಇನ್ನೂ ಬಾಕಿಯಿದೆ.

    2/2

ಈ ಅಂಕಿ-ಅಂಶಗಳು ಇ-ಜನ್ಮ ತಂತ್ರಾಂಶದಲ್ಲಿ ತಾತ್ಕಾಲಿಕವಾಗಿ ದಾಖಲಿಸಲಾಗಿರುವ ದತ್ತಾಂಶವಾಗಿದೆ. ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಅವರು ಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ಪರಿಷ್ಕರಣೆ ನಡೆಯಬೇಕಿದೆ. ಈ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು ಅಂತಿಮ ಅಂಕಿ-ಅಂಶಗಳ ಪ್ರಕಟಣೆ ಇನ್ನೂ ಬಾಕಿಯಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರತಿ ದಿನ ಬಿಡುಗಡೆ ಮಾಡುವ ಬುಲೆಟಿನ್​ನಲ್ಲಿ ಪರೀಕ್ಷೆ, ಹೊಸ ಪ್ರಕರಣಗಳು, ಗುಣಮುಖ ಹೊಂದಿರುವವರ ಸಂಖ್ಯೆ, ಮೃತಪಟ್ಟವರ ಸಂಖ್ಯೆ ಎಲ್ಲವನ್ನು ಜಿಲ್ಲಾ ಮಟ್ಟದಿಂದ ತರಿಸಿಕೊಂಡು ಕ್ರೂಢೀಕರಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಪ್ರತಿಪಕ್ಷ‌ ನಾಯಕ ಸಿದ್ದರಾಮಯ್ಯ ಅವರು ತಮಗೆ ಬೇಕಿದ್ದಲ್ಲಿ ಎಲ್ಲಾ ಜಿಲ್ಲಾಡಳಿತಗಳಿಂದ ಅಂಕಿ-ಅಂಶಗಳನ್ನು ತರಿಸಿಕೊಂಡು ತಾಳೆ ಮಾಡಿ ನೋಡಬಹುದು. ಆದರೆ, ಇನ್ನೂ ಅಂತಿಮವಾಗಿಲ್ಲದ ದತ್ತಾಂಶ, ಇನ್ನೂ ಪರಿಷ್ಕರಿಸಬೇಕಾದ ಅಂಕಿ-ಅಂಶಗಳನ್ನು ಇಟ್ಟುಕೊಂಡು ರಾಜಕೀಯ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಡಾ.ಕೆ.ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.