ETV Bharat / state

ಮಹದಾಯಿ ವಿಚಾರವಾಗಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತೇವೆ: ಡಿಕೆಶಿ

author img

By

Published : Feb 15, 2022, 5:26 AM IST

ಮಹದಾಯಿ ವಿಚಾರವಾಗಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿದ್ದಾರೆ.

DK Shivakumar protest against mahadayi issue, Mahadayi issue, KPCC president DK Shivakumar news, ಮಹಾದಾಯಿ ಹೋರಾಟ ಕುರಿತು ಡಿಕೆ ಶಿವಕುಮಾರ್​ ಪ್ರತಿಭಟನೆ, ಮಹಾದಾಯಿ ವಿವಾದ, ಕೆಪೆಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸುದ್ದಿ,
ಡಿಕೆಶಿ

ಬೆಂಗಳೂರು: ನಮಗೆ ನಮ್ಮ ರಾಜ್ಯದ ಹಿತ ಮುಖ್ಯ. ಮಹದಾಯಿ ವಿಚಾರವಾಗಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ನಮ್ಮ ಧ್ವನಿ ರಾಜ್ಯದ ಪರವಾಗಿ ಹಾಗೂ ರಾಜ್ಯದ ಹಿತಕ್ಕಾಗಿ ಇದೆ. ನಮ್ಮ ರಾಜಕಾರಣಕ್ಕಾಗಿ ಈ ನೆಲ, ಜಲದ ಗೌರವ ಕಳೆದುಕೊಳ್ಳಲು ನಾವು ಸಿದ್ಧರಿಲ್ಲ. ಇದು ನಮ್ಮ ಕಾಂಗ್ರೆಸ್ ಪಕ್ಷದ ಮೂಲ ತತ್ವ, ಸಿದ್ಧಾಂತ, ಬದ್ಧತೆ. ಇನ್ನು ಮಹದಾಯಿ ವಿಚಾರವಾಗಿ ಪಾದಯಾತ್ರೆ ಮಾಡುವ ಬಗ್ಗೆ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.

ಓದಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭ: ವಿವಿಧ ಮಹತ್ವದ ವಿಚಾರಗಳ ಚರ್ಚೆ

ಜಮೀರ್ ಅಹ್ಮದ್ ತಮ್ಮ ಹೇಳಿಕೆಗೆ ಕ್ಷಮೆ ಕೋರುವುದಿಲ್ಲ ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅವರು ಏನಾದರೂ ಹೇಳಲಿ. ಕಾಂಗ್ರೆಸ್ ಪಕ್ಷಕ್ಕೆ ಯಾರನ್ನು ಯಾವ ರೀತಿ ನಡೆಸಿಕೊಳ್ಳಬೇಕು ಎಂಬುದು ಗೊತ್ತಿದೆ. ಯಾರೂ ಕಾಂಗ್ರೆಸ್ ಪಕ್ಷಕ್ಕಿಂತ ದೊಡ್ಡವರಲ್ಲ. ಇದು ಕಾಂಗ್ರೆಸ್ ಪಕ್ಷದ ನೇರ ಸೂಚನೆ ಎಂದು ಉತ್ತರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.