ETV Bharat / state

ಶಿಕ್ಷಕರು, ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿ ಇದ್ದಾರೆ, ನಮ್ಮನ್ನು ಬೆಂಬಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ - legislative council elections 2023

ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಅನುಕೂಲಕರ ವಾತಾವರಣವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Sep 8, 2023, 7:23 PM IST

ಬೆಂಗಳೂರು: ಶಿಕ್ಷಕರು ಮತ್ತು ನಾಡಿನ ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿ ಇದ್ದಾರೆ. ಹೀಗಾಗಿ ಅವರೆಲ್ಲಾ ನಮ್ಮ ಪರವಾಗಿರುವುದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಅನುಕೂಲಕರ ವಾತಾವರಣವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನಡೆದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನವರಿಯಿಂದ ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಕಾರ್ಯಕ್ರಮ ಆರಂಭವಾಗಲಿದೆ. ನಾವು ವಿದ್ಯಾವಂತ ಯುವಕ ಯುವತಿಯರಿಗೆ 24 ತಿಂಗಳ ಕಾಲ ಯುವನಿಧಿ ಕೊಡುವ ಜತೆಗೆ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ರೂಪಿಸುತ್ತಿದ್ದೇವೆ ಎಂದರು.

ಟಿಕೆಟ್ ಆಕಾಂಕ್ಷಿಗಳು ಶಿಕ್ಷಕ ಸದಸ್ಯರು ಮತ್ತು ಪದವೀಧರ ಸದಸ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು, ಅವರ ಮಾತು ಮತ್ತು ಬೇಡಿಕೆಗಳನ್ನು ಕೇಳಿಸಿಕೊಂಡು ನಮಗೆ ತಿಳಿಸಿ. ನಾಡಿನ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದಕ್ಕಾಗಿ ಪಕ್ಷ ಮತ್ತು ಸರ್ಕಾರ ಶ್ರಮಿಸಲಿದೆ. ಇದನ್ನು ಮತದಾರರಿಗೆ ಸರಿಯಾಗಿ ಅರ್ಥ ಮಾಡಿಸಿ ಚುನಾವಣೆಯಲ್ಲಿ ಗೆದ್ದು ಬನ್ನಿ ಎಂದು ಹಾರೈಸಿದರು. ಟಿಕೆಟ್ ಆಕಾಂಕ್ಷಿಗಳು ಮತ್ತು ಎಲ್ಲ ಶಾಸಕರು ಮತ್ತು ಜಿಲ್ಲಾ ಪದಾಧಿಕಾರಿಗಳ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಹೆಸರನ್ನು ಘೋಷಿಸುತ್ತೇವೆ. ಟಿಕೆಟ್ ಯಾರಿಗೇ ಸಿಕ್ಕರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಹೇಳಿದಾರು.

ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದರು. ಸಚಿವರಾದ ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಚಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

ವಿಧಾನ ಪರಿಷತ್‌ಗೆ ನಡೆಯುವ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೇಂದ್ರ ಚುನಾವಣಾ ಆಯೋಗ ಆಗಸ್ಟ್​ 12ರಂದು ಸೂಚಿಸಿತ್ತು. ಸೆಪ್ಟೆಂಬರ್ 30 ರಿಂದ ಮತದಾರರ ನೋಂದಣಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ನವೆಂಬರ್ 6 ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದೆ. ಒಟ್ಟು ಏಳು ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. 2024ರ ಜೂನ್ ತಿಂಗಳಲ್ಲಿ ಆರು ಮಂದಿಯ ಸದಸ್ಯತ್ವ ಮುಕ್ತಾಯವಾಗಲಿದೆ. ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರಿರುವ ಪುಟ್ಟಣ್ಣ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

ಈಶಾನ್ಯ ಪದವೀಧರ ಕ್ಷೇತ್ರದ ಡಾ.ಚಂದ್ರಶೇಖರ್ ಬಿ. ಪಾಟೀಲ್, ನೈರುತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರದ ಎ.ದೇವೇಗೌಡ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಡಾ.ವೈ.ಎ ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಎಸ್.ಎಲ್ ಭೋಜೇಗೌಡ, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ಅವರ ಅವಧಿ 2024ರ ಜೂನ್ ತಿಂಗಳಿಗೆ ಮುಕ್ತಾಯವಾಗಲಿದೆ.

ಇದನ್ನೂ ಓದಿ: G20 Summit: ರಾಷ್ಟ್ರಪತಿಗಳ ಔತಣಕೂಟದಲ್ಲಿ ಭಾಗಿಯಾಗದಿರಲು ಸಿಎಂ ಸಿದ್ದರಾಮಯ್ಯ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.