ETV Bharat / state

ಸಂವಿಧಾನ ಬದಲಿಸಲು ಬಂದವರನ್ನೇ ಬದಲಾಯಿಸಿದ್ದೇವೆ, 2024ರ ಲೋಕಸಭೆ ಚುನಾವಣೆಯಲ್ಲೂ ಇದು ಮರುಕಳಿಸಲಿ: ಸಿಎಂ ಸಿದ್ದರಾಮಯ್ಯ - ಗ್ಯಾರಂಟಿಗಳನ್ನು ವಿಫಲಗೊಳಿಸಲು ಬಿಜೆಪಿ ಯತ್ನಿಸುತ್ತಿದೆ

ಬೆಂಗಳೂರಿನಲ್ಲಿ ನಡೆದ ಭೀಮ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

CM Siddaramaiah inaugurated the Bhima Sankalpa Conference.
ಭೀಮ ಸಂಕಲ್ಪ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
author img

By

Published : Jun 9, 2023, 8:09 PM IST

Updated : Jun 9, 2023, 8:17 PM IST

ಬೆಂಗಳೂರು: ವಿಗ್ರಹ ಇಟ್ಟುಕೊಂಡು ವಿಚಾರಗಳನ್ನು ಕೊಲ್ಲುವುದು ಬಿಜೆಪಿ ಪರಿವಾರದ ಚಾಳಿ. ಸಂವಿಧಾನ ವಿರೋಧಿಸುವ ಬಿಜೆಪಿ, ಚುನಾವಣೆಗಾಗಿ ಅಂಬೇಡ್ಕರ್ ಪ್ರತಿಮೆ ಇಟ್ಟುಕೊಂಡು ಡ್ರಾಮಾ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ರಾಜ್ಯದ ದಲಿತ ಸಂಘಟನೆಗಳು ಟೌನ್ ಹಾಲ್‌ನಲ್ಲಿ ಇಂದು ಹಮ್ಮಿಕೊಂಡಿದ್ದ ಭೀಮ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ, ಆರ್ಥಿಕ ಅಸಮಾನತೆಯನ್ನು ತೊಡೆದು ಹಾಕದಿದ್ದರೆ ಈ ಸ್ವಾತಂತ್ರ್ಯ ಸೌಧವನ್ನು ದೇಶದ ಜನರೇ ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್‌ ಎಚ್ಚರಿಸಿದರು. ಜಾತಿ ಸಮಾಜಕ್ಕೆ ಚಲನೆ ಇರುವುದಿಲ್ಲ. ಚಾಲನೆ ಬರಬೇಕಾದರೆ ಸಂವಿಧಾನಬದ್ದವಾದ ಜಾತ್ಯತೀತ ಮೌಲ್ಯಗಳು ಜಾರಿಯಾಗಿ ಶೋಷಿತ ಸಮುದಾಯಗಳಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ಈ ಅವಕಾಶಗಳನ್ನು ಕಲ್ಪಿಸುವುದೇ ನನ್ನ ರಾಜಕೀಯ ಬದ್ಧತೆ ಎಂದು ತಿಳಿಸಿದರು.

ಆರ್​​ಎಸ್ಎಸ್​ ಸಂವಿಧಾನ ವಿರೋಧಿ: ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್‌ಎಸ್ಎಸ್ ನವರು ಸಂವಿಧಾನ ವಿರೋಧಿಗಳು. ಅಧಿಕಾರಕ್ಕಾಗಿ ಅಲ್ಲಿಗೆ ಹೋದ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಮನುಸ್ಮೃತಿಯ ಆರಾಧಕರಾಗಿ ಸಂವಿಧಾನ ವಿರೋಧಿಗಳಾಗುತ್ತಿದ್ದಾರೆ. ಸಂವಿಧಾನ ಬದಲಾಯಿಸ್ತೀವಿ ಎಂದು ಅಹಂಕಾರ ಮೆರೆದವರನ್ನೇ ನೀವು ಬದಲಾಯಿಸಿದ್ದೀರಿ ಎಂದರು.

ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳಿಕೆ ನೀಡಿದ್ದ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರಾಗಲಿ, ಪ್ರಧಾನಿ ಮೋದಿ ಅವರಾಗಲಿ ಕ್ರಮ ಕೈಗೊಳ್ಳದೇ ಸುಮ್ಮನೆ ಕುಳಿತರು. ಆದರೆ, ನಾವು-ನೀವು ಸುಮ್ಮನೆ ಕೂರಲಿಲ್ಲ. ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ. ಇದು 2024 ರಲ್ಲೂ ಪ್ರತಿಧ್ವನಿಸಬೇಕು, ಮರುಕಳಿಸಬೇಕು ಎಂದು ಕರೆ ಕೊಟ್ಟರು.

ಗ್ಯಾರಂಟಿಗಳನ್ನು ವಿಫಲಗೊಳಿಸಲು ಬಿಜೆಪಿ ಹುನ್ನಾರ: ದೇಶದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸದೆ ವಂಚಿಸಿದ ಬಿಜೆಪಿ, ನುಡಿದಂತೆ ನಡೆದ ನಮ್ಮನ್ನು ಟೀಕಿಸುತ್ತಿದ್ದಾರೆ ಎಂದು ಗುಡುಗಿದರು. ಬಡವರ- ಮಧ್ಯಮ ವರ್ಗದವರ ಕಲ್ಯಾಣಕ್ಕೆ ನಾವು ನೀಡಿರುವ ಗ್ಯಾರಂಟಿಗಳನ್ನು ವಿಫಲಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕಾಗಿ ಸುಳ್ಳುಗಳನ್ನು ಹೊಸೆದು, ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ನಾಡಿನ ಶೇ.85 ಕ್ಕೂ ಹೆಚ್ಚು ಜನರಿಗೆ ತಲುಪುತ್ತದೆ. ಉಳಿದವು ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ತಲುಪುತ್ತದೆ ಎಂದು ತಿಳಿಸಿದರು.

13 ಬೇಡಿಕೆಗಳಿಗೆ ಸ್ಪಂದನೆ: ಐಕ್ಯ ಹೋರಾಟ ಚಾಲನಾ ಸಮಿತಿ ಸಲ್ಲಿಸಿದ 13 ಬೇಡಿಕೆಗಳ ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಇವುಗಳಲ್ಲಿ ಹಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಉಳಿದವುಗಳನ್ನೂ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ದಲಿತ ಮುಖಂಡರುಗಳಾದ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ಇಂದೂದರ ಹೊನ್ನಾಪುರ, ಜಿಗಣಿ ಶಂಕರ್, ವಿ.ನಾಗರಾಜ್, ಎನ್.ವೆಂಕಟೇಶ್ ಸೇರಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ 50 ಕ್ಕೂ ಹೆಚ್ಚು ಮುಖಂಡರು ಉಪಸ್ಥಿತರಿದ್ದರು.

ಇದನ್ನೂಓದಿ:ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಾಸಕ​ ಪೂಂಜಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Last Updated : Jun 9, 2023, 8:17 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.