ದೇವನಹಳ್ಳಿ: ಕರ್ನಾಟಕದಿಂದ ಆಯ್ಕೆಯಾದ ನಾಲ್ವರು ನೂತನ ಕೇಂದ್ರ ಸಚಿವರಿಗೆ ಅಭಿನಂದನೆ ಕೋರಲು ದೆಹಲಿಗೆ ಹೋಗಿದ್ದೆವು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ತಿಳಿಸಿದರು.
ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಜೊತೆ ಅವರು ಆಗಮಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ನೂತನವಾಗಿ ಕೇಂದ್ರ ಸಚಿವರಾದವರಿಗೆ ಶುಭ ಕೋರಿ ಬಂದಿದ್ದೀವಿ ಎಂದರು.
ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ನೂತನ ಸಚಿವರಾಗಿರುವುದಕ್ಕೆ ಚಿಕ್ಕಮಗಳೂರು ಶಾಸಕರು ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿ ಬಂದಿದ್ದೇವೆ. ರಾಜ್ಯ ರಾಜಕಾರಣದ ಬಗ್ಗೆ ನನಗೆ ಮಾಹಿತಿಯಿಲ್ಲ. ಈ ಬಗ್ಗೆ ನಾನು ಏನೂ ಮಾತನಾಡಲ್ಲ ಎಂದು ತಿಳಿಸಿದರು.
ಓದಿ: ಕಲಬುರಗಿ ; ಜನಪ್ರತಿನಿಧಿಗಳ ತರಬೇತಿಗಾಗಿ ಬೃಹತ್ ಕಟ್ಟಡ ನಿರ್ಮಾಣ : 3 ವರ್ಷವಾದ್ರೂ ಇಲ್ಲ ಉದ್ಘಾಟನೆ ಭಾಗ್ಯ