ETV Bharat / state

'ಉತ್ತಮ ಸಮಾಜ, ಉತ್ತಮ ಬದುಕು ಕಟ್ಟಿಕೊಳ್ಳಲು ಗುಣಮಟ್ಟದ ಶಿಕ್ಷಣವೊಂದೇ ಮಾರ್ಗ' - dcm ashwath narayana

ರಾಷ್ಟ್ರವನ್ನು ಕಟ್ಟುವ ವಿಶಾಲ ತಳಹದಿಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಗುಣಮಟ್ಟದ ಕಲಿಕೆ-ಬೋಧನೆಯ ಪರಿಕಲ್ಪನೆ ಅಡಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಅನೇಕ ಹೆಜ್ಜೆಗಳನ್ನು ಇಟ್ಟಿದೆ. ರಾಜ್ಯದ ಶೈಕ್ಷಣಿಕ ವಲಯದಲ್ಲಿ ದೊಡ್ಡ ಸುಧಾರಣಾ ಪರ್ವವೇ ಆರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದ್ರು.

we need good education system to good society dcm ashwath narayana
'ಉತ್ತಮ ಸಮಾಜ, ಉತ್ತಮ ಬದುಕು ಕಟ್ಟಿಕೊಳ್ಳಲು ಗುಣಮಟ್ಟದ ಶಿಕ್ಷಣವೊಂದೇ ಮಾರ್ಗ'
author img

By

Published : Feb 28, 2021, 5:12 PM IST

ಬೆಂಗಳೂರು: ಉತ್ತಮ ಸಮಾಜ ನಿರ್ಮಾಣ ಹಾಗೂ ಉತ್ತಮ ಬದುಕು ಕಟ್ಟಿಕೊಳ್ಳಲು ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಪ್ರತಿಪಾದಿಸಿದರು.

ವಿಜಯನಗರದಲ್ಲಿ ವಿ. ಸೋಮಣ್ಣ ಪ್ರತಿಷ್ಠಾನ ಆಯೋಜಿಸಿದ್ದ ವರಕವಿ, ಜ್ಞಾನಪೀಠ ಪುರಸ್ಕೃತ, ಪದ್ಮಶ್ರೀ ಡಾ. ದ.ರಾ. ಬೇಂದ್ರೆ ಅವರ 125ನೇ ಜಯಂತೋತ್ಸವದ ಪ್ರಯುಕ್ತ 2019-20ನೇ ಸಾಲಿನ ಎಸ್​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ/ಬಿಬಿಎಂಪಿ ಪ್ರೌಢಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಉತ್ತಮ ಶಿಕ್ಷಣದಿಂದ ಮಾತ್ರ ಸರ್ವ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂದರು.

ರಾಷ್ಟ್ರವನ್ನು ಕಟ್ಟುವ ವಿಶಾಲ ತಳಹದಿಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಗುಣಮಟ್ಟದ ಕಲಿಕೆ-ಬೋಧನೆಯ ಪರಿಕಲ್ಪನೆ ಅಡಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಅನೇಕ ಹೆಜ್ಜೆಗಳನ್ನು ಇಟ್ಟಿದೆ. ರಾಜ್ಯದ ಶೈಕ್ಷಣಿಕ ವಲಯದಲ್ಲಿ ದೊಡ್ಡ ಸುಧಾರಣಾ ಪರ್ವವೇ ಆರಂಭವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ರು.

ಓದಿ: ಬೈಕ್​​ ಗಲಾಟೆಗೆ ಹೊತ್ತಿ ಉರಿದ ದೇವರಸನಹಳ್ಳಿ : ಗ್ರಾಮದಲ್ಲಿ ಪೊಲೀಸ್​ ಬಂದೋಬಸ್ತ್​​​​​​

ಶಿಕ್ಷಣವನ್ನು ಕೇವಲ ಅಕಾಡೆಮಿಕ್‌ ದೃಷ್ಟಿಯಿಂದ ಕಲಿಯುವುದಲ್ಲ, ಅದು ಎಲ್ಲ ಹಂತಗಳಲ್ಲೂ ದೇಶಕ್ಕೆ ಪೂರಕವಾಗಿರಬೇಕು. ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಇನ್ನಾವುದೇ ಉದ್ದೇಶವಿದ್ದರೂ ಅಂತಿಮವಾಗಿ ನಮ್ಮ ಕಲಿಕೆಯು ಸಮಾಜಕ್ಕೆ ಅರ್ಪಣೆಯಾಗಬೇಕು. ಈ ನಿಟ್ಟಿನಲ್ಲಿ ಶೈಕ್ಷಣಿಕ ಕ್ಷೇತ್ರವನ್ನು ಮರು ನಿರ್ಮಾಣ ಮಾಡಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.