ETV Bharat / state

ನೆರೆ ರಾಷ್ಟ್ರಗಳ ಸಂಬಂಧದ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು.. ಡಿ ಕೆ ಶಿವಕುಮಾರ್ - Border conflict between China

ಚೀನಾ ನಡುವಿನ ಗಡಿ ಸಂಘರ್ಷದ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ದೇಶದ ಭದ್ರತೆಗೆ ಸಂಬಂಧಿಸಿದ್ದರಿಂದ ನಾವು ಹುಷಾರಾಗಿ ಇರಬೇಕು ಎಂದಿದ್ದಾರೆ.

We need to pay more attention now: DK Shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
author img

By

Published : Jun 17, 2020, 10:24 PM IST

Updated : Jun 17, 2020, 11:41 PM IST

ಬೆಂಗಳೂರು: 'ಗಡಿ ವಿಚಾರ ಹಾಗೂ ನೆರೆ ರಾಷ್ಟ್ರಗಳ ಜತೆಗಿನ ಸಂಬಂಧದ ವಿಚಾರದಲ್ಲಿ ನಾವು ಎಚ್ಚರಿಕೆ ವಹಿಸಬೇಕಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 'ದೇಶದ ಸಮಗ್ರತೆ, ಐಕ್ಯತೆ ಹಾಗೂ ಶಾಂತಿ ವಿಚಾರದಲ್ಲಿ ನಾವು ಈಗ ಹೆಚ್ಚಿನ ಗಮನ ಹರಿಸಬೇಕು. ಚೀನಾ ಗಡಿ ವಿಚಾರದಲ್ಲಿ ನಾವು ಮೊದಲಿಂದಲೂ ಎಚ್ಚರಿಕೆ ವಹಿಸಬೇಕಿತ್ತು' ಎಂದರು.

'ಈ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಬಹಳ ದಿನಗಳಿಂದ ಗಡಿಯಲ್ಲಿ ಹಲವು ವಿದ್ಯಮಾನಗಳು ನಡೆಯುತ್ತಿದ್ದು, ಇದು ದೇಶದ ಭದ್ರತೆಗೆ ಸಂಬಂಧಿಸಿದ್ದರಿಂದ ನಾವು ಹುಷಾರಾಗಿ ಇರಬೇಕು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ನಾವು ಕಾಶ್ಮೀರ ವಿಚಾರದಲ್ಲಿ ಸಾಕಷ್ಟು ಅನುಭವಿಸಿದ್ದೇವೆ. ಈಗಾಗಲೇ ದೇಶದ ಆರ್ಥಿಕತೆಗೆ ದೊಡ್ಡ ಹೊಡೆತ ಬಿದ್ದಿದ್ದು, ಈ ಬೆಳವಣಿಗೆಗಳು ಇನ್ನಷ್ಟು ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಈ ವಿಚಾರವನ್ನು ಇಡೀ ದೇಶ ಸೂಕ್ಷ್ಮವಾಗಿ ನಿಭಾಯಿಸಬೇಕು' ಎಂದರು.

Last Updated : Jun 17, 2020, 11:41 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.