ಬೆಂಗಳೂರು: ನಗರದಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾದ ಬೆನ್ನಲ್ಲೇ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ವಿವಿಧ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರರ ಕುರಿತಂತೆ ಬಿಬಿಎಂಪಿ ಸಹ ಕಾಂಟ್ಯಾಕ್ಟ್ ಟ್ರೇಸಿಂಗ್ ಮಾಡುತ್ತಿರುವ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ವಲಯದಿಂದ ಬರುವ ಪ್ರಯಾಣಿಕರ ವ್ಯಾಕ್ಸಿನೇಷನ್ ಸ್ಟೇಟಸ್, ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಪಡೆಯಲಾಗುತ್ತಿದೆ. ಎರಡು ಡೋಸ್ ವ್ಯಾಕ್ಸಿನೇಷನ್ ಇದ್ದರಷ್ಟೇ ವಿಮಾನ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಹೈರಿಸ್ಕ್ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಪುನಃ ಇಲ್ಲೂ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ. ಒಂದು ವೇಳೆ ಪಾಸಿಟಿವ್ ಬಂದರೆ ಅಂತಹವರನ್ನು ಕ್ವಾರಂಟೈನ್ ಮಾಡಲಾಗುತ್ತದೆ. ಅವಶ್ಯಕತೆ ಇದ್ದರೆ ಅವರನ್ನು ಟ್ರೇಸಿಂಗ್ ಮಾಡಿ ಮತ್ತೊಮ್ಮೆ ಟೆಸ್ಟ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕೋವಿಡ್ ಹಿನ್ನೆಲೆಯಲ್ಲಿ ನಾಳೆ ನಡೆಯುವ ಸಭೆಗೆ ಮಾಹಿತಿ ಕೊಡಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಜಿಲ್ಲಾವಾರು ಫಲಿತಾಂಶ, ಒಮಿಕ್ರಾನ್ ತಳಿ ಕುರಿತು ಯಾವೆಲ್ಲ ಕ್ರಮಕೈಗೊಳ್ಳಬೇಕು ಎಂಬುದರ ಕುರಿತು ಸಮಾಲೋಚನೆ ಮಾಡಲಾಗಿದೆ. ಬೇರೆ ಬೇರೆ ದೇಶಗಳಲ್ಲಿ ಯಾವೆಲ್ಲ ಚಿಕಿತ್ಸೆ ಇದೆ ಎಂಬುದರ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ಕೆಳ ಹಂತದಿಂದಲೇ ಸೋಂಕು ತಡೆಗೆ ಯಾವೆಲ್ಲ ಕ್ರಮವಹಿಸಬೇಕು. ಕ್ವಾರಂಟೈನ್, ಕ್ಲಸ್ಟರ್, ಕಾಂಟ್ಯಾಕ್ಟ್ ಟ್ರೇಸಿಂಗ್ ಮುಂದುವರೆಸಲಾಗುವುದು ಎಂದರು.
ನಗರದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳ ಮಾಡಲಾಗಿದ್ದು, ನಿತ್ಯ 40 ರಿಂದ 50 ಸಾವಿರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಹೊಸ ವರ್ಷಚರಣೆಗೆ ಹೊಸ ಮಾರ್ಗಸೂಚಿ ಬಗ್ಗೆ ನಾಳೆ ಸಿಎಂ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಸರ್ಕಾರ ಕೈಗೊಳ್ಳಲಾಗುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ: ಖಾಸಗಿ ಆಸ್ಪತ್ರೆ, ಲ್ಯಾಬ್ಗಳಿಗೆ ಕೊರೊನಾ ಬಾಕಿ ಶುಲ್ಕ ಬಿಡುಗಡೆಗೆ ಸಿಎಂ ಬೊಮ್ಮಾಯಿ ಸೂಚನೆ