ETV Bharat / state

ಶಾಲಾ-ಕಾಲೇಜುಗಳ ಸಮಯಕ್ಕೆ ಬಸ್ ಸಂಚಾರ : ಶಿಕ್ಷಣ ಸಚಿವ ನಾಗೇಶ್ - ಶಾಲಾ ವಿದ್ಯಾರ್ಥಿಗಳಿಗೆ ಬಸ್​ ವ್ಯವಸ್ಥೆ

ಆ.23ರಿಂದ 9,10 ಮತ್ತು ಪಿಯು ತರಗತಿಗಳು ಪುನಾರಂಭವಾಗಿವೆ. ಈ ಸಂಬಂಧ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಅವರಿಗೆ ಅನುಕೂಲವಾಗುವಂತೆ ಕೆಎಸ್ಆರ್​​ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದೆಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

Education Minister Nagesh
ಶಿಕ್ಷಣ ಸಚಿವ ನಾಗೇಶ್
author img

By

Published : Aug 25, 2021, 3:13 PM IST

ಬೆಂಗಳೂರು: ದೂರದೂರುಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ಶಾಲೆ ತಲುಪಲು ಅನುಕೂಲವಾಗುವಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿ ಕೆಎಸ್ಆರ್​​ಟಿಸಿ ಬಸ್‌ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 9,10 ಹಾಗೂ ಪಿಯು ತರಗತಿಗಳು ಪುನಾರಂಭವಾಗಿದ್ದು, ಶಾಲೆಗಳಿಗೆ ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಹೀಗಾಗಿ ರಾಜ್ಯದ ಹಲವು ಭಾಗಗಳಲ್ಲಿ ಶಾಲಾ ಸಮಯಕ್ಕೆ ಬಸ್‌ಗಳು ಸಂಚರಿಸುವುದು ಅತ್ಯಗತ್ಯವಾಗಿದೆ ಎಂದರು.

ಕೋವಿಡ್ ಲಾಕ್‌ಡೌನ್ ಪೂರ್ವದಲ್ಲಿ ಶಾಲಾ ಅವಧಿಗೆ ಸರಿಯಾಗಿ ಮಕ್ಕಳು ತಲುಪುವಂತೆ ಬಸ್ ಸಂಚರಿಸುತ್ತಿದ್ದವು. ಈಗ ಅದೇ ರೀತಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಸಂಚರಿಸಬೇಕು. ಈ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

ತರಗತಿಗಳ ಆರಂಭವಾಗುವ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಮಾಡಿದರೆ ಮಕ್ಕಳ ಹಾಜರಾತಿ ಇನ್ನಷ್ಟು ಹೆಚ್ಚಳವಾಗುತ್ತದೆ. ಬಸ್‌ಗಳಲ್ಲಿ ಸಂಚರಿಸುವ ಮಕ್ಕಳು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಮಕ್ಕಳು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸಲಹೆ, ಸೂಚನೆಗಳನ್ನು ನಿರ್ವಾಹಕರು ನೀಡುತ್ತಿರಬೇಕು ಎಂದರು.

ಓದಿ: ಮೈಸೂರು: ಸ್ನೇಹಿತನ ಜೊತೆ ಲಲಿತಾದ್ರಿಪುರ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ Gangrape

ETV Bharat Logo

Copyright © 2025 Ushodaya Enterprises Pvt. Ltd., All Rights Reserved.