ETV Bharat / state

BSY: ಗ್ಯಾರಂಟಿಗಳನ್ನು ಕೊಡೋವರೆಗೂ ನಾವು ಸತ್ಯಾಗ್ರಹ ಮಾಡ್ತೇವೆ: ಸರ್ಕಾರಕ್ಕೆ ಬಿ ಎಸ್​ ಯಡಿಯೂರಪ್ಪ ಎಚ್ಚರಿಕೆ

ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಲು ಅವರು ಮನೆ ಮನೆಗೆ ಹೋಗಿ ಕೊಟ್ಟ ಗ್ಯಾರಂಟಿ ಕಾರ್ಡ್ ಕಾರಣ ಎಂದು ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಹೇಳಿದರು.

Etv Bharatwe-will-do-satyagraha-till-guarantees-are-given-says-bs-yediyurappa
ಗ್ಯಾರಂಟಿಗಳನ್ನು ಕೊಡೋವರೆಗೂ ನಾವು ಸತ್ಯಾಗ್ರಹ ಮಾಡ್ತೇವೆ: ಬಿ.ಎಸ್​ ಯಡಿಯೂರಪ್ಪ
author img

By

Published : Jun 24, 2023, 4:35 PM IST

ಬೆಂಗಳೂರು: ಅಧಿವೇಶನದ ವೇಳೆ ರಾಜ್ಯಪಾಲರ ಭಾಷಣ ಮುಗಿದ ಬಳಿಕ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ನಾನು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ತಿಳಿಸಿದ್ದಾರೆ. ಜೆ ಪಿ ನಗರದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಸುಳ್ಳು ಭರವಸೆ ಕೊಟ್ಟು ದ್ರೋಹ ಮಾಡಿದ್ದಾರೆ. ಅವರು ನುಡಿದಂತೆ ಗ್ಯಾರಂಟಿಗಳನ್ನು ಕೊಡಲಿ.‌ ಉಚಿತ ಗ್ಯಾರಂಟಿ ಕೊಡೋವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ ಎಂದರು.

ರಾಜ್ಯಪಾಲರ ಭಾಷಣದ ಬಳಿಕ ಸತ್ಯಾಗ್ರಹ ಮಾಡ್ತೇವೆ -ಬಿಎಸ್​ವೈ: ವಿಧಾನಸೌಧದಲ್ಲಿ ಹೋರಾಟ ಮಾಡ್ತೀವಿ. ಗ್ಯಾರಂಟಿಗಳನ್ನು ಕೊಡೋವರೆಗೂ ನಾವು ಸತ್ಯಾಗ್ರಹ ಮಾಡ್ತೇವೆ. ಅಧಿವೇಶನದ ಒಳಗೆ ನಮ್ಮ ಶಾಸಕರಿಂದ ಹೋರಾಟ. ಗಾಂಧಿ ಪ್ರತಿಮೆ ಬಳಿ ನಾನು ನಮ್ಮ ಮುಖಂಡರ ಜತೆ ಸತ್ಯಾಗ್ರಹ ಮಾಡ್ತೇನೆ. ನಮ್ಮ ಕಾಂಗ್ರೆಸ್​ನ ಸ್ನೇಹಿತರು ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ಕೊಟ್ರು. 10 ಕೆಜಿ ಅಕ್ಕಿ, ಉಚಿತ ವಿದ್ಯುತ್ ಕೊಡ್ತೇವೆ ಅಂದ್ರು. ಆದ್ರೆ ಷರತ್ತುಗಳನ್ನು ಹಾಕ್ತಿದ್ದಾರೆ. ರಾಜ್ಯಪಾಲರ ಭಾಷಣದ ಬಳಿಕ ಸಾವಿರಾರು ಕಾರ್ಯಕರ್ತರ ಜೊತೆ ಅಧಿವೇಶನ ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ಸತ್ಯಾಗ್ರಹ ಮಾಡ್ತೇವೆ ಎಂದು ಬಿಎಸ್​ವೈ ಎಚ್ಚರಿಕೆ ರವಾನಿಸಿದರು.

ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಲು ಅವರು ಮನೆ ಮನೆಗೆ ಹೋಗಿ ಕೊಟ್ಟ ಗ್ಯಾರಂಟಿ ಕಾರ್ಡ್ ಕಾರಣ. ಜನ ಅದನ್ನು ನಂಬಿ ಬಿಟ್ಟರು, ಬಿಜೆಪಿ ಕಾರ್ಯಕರ್ತರು ಎದೆಗುಂದಬೇಕಾಗಿಲ್ಲ, ಮತ್ತೊಮ್ಮೆ ಎದ್ದೇಳಬೇಕಾಗಿದೆ. ಸುಳ್ಳು ಭರವಸೆಗಳ ವಿರುದ್ಧ ಆಂದೋಲನ ಮಾಡಬೇಕಾಗಿದೆ. ನಾನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹೋಗಬೇಕು ಅಂತಾ ತೀರ್ಮಾನ ಮಾಡಿದ್ದೇನೆ. ಕಾಂಗ್ರೆಸ್ ಬಣ್ಣ ಬಯಲು ಮಾಡಬೇಕಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದು ಸತ್ಯ: ನಾವು ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಬೇಕಾಗಿತ್ತು, ಅದು ಆಗಲಿಲ್ಲ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬರಬೇಕಿದೆ. ನಾವು ಎಲ್ಲರೂ ಆ ದಿಕ್ಕಿನಲ್ಲಿ ಪ್ರಯತ್ನ ಮಾಡಬೇಕು. ನಿನ್ನೆ ಪಾಟ್ನಾದಲ್ಲಿ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಏನೇನು ಮಾಡಬಹುದು ಅಂತಾ ಚರ್ಚೆ ಮಾಡಿದ್ದಾರೆ. ನೀವು ಮುಂದಿನ ಚುನಾವಣೆಯಲ್ಲಿ ಮೋದಿಯವರನ್ನು ಅವಿರೋಧವಾಗಿ ಆಯ್ಕೆ ಮಾಡೋಣ ಅಂತಾ ಹೇಳಬೇಕಾಗಿತ್ತು. ನಿಮ್ಮ ಯೋಗ್ಯತೆಗೆ ಅದು ಆಗಲಿಲ್ಲ. ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದು ಅಷ್ಟೇ ಸತ್ಯ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆಲ್ಲುವ ಮೂಲಕ ನರೇಂದ್ರ ಮೋದಿಗೆ ಕೊಡುಗೆ ನೀಡಬೇಕಿದೆ. ಸಾಮಾನ್ಯ ಜನ ಬಿಲ್ ಕಟ್ಟೋಕೆ ಆಗದ ರೀತಿ ಬಿಲ್ ಜಾಸ್ತಿ ಮಾಡಿದ್ದಾರೆ. ಕೈಗಾರಿಕಾ ಉದ್ಯಮಗಳು ಮುಚ್ಚುವ ರೀತಿಗೆ ಬಂದಿದೆ. ಗೋಹತ್ಯೆ ನಿಷೇದ ಕಾಯ್ದೆ ರದ್ದು ಮಾಡ್ತೇವೆ ಎಂದು ಹೇಳ್ತಾ ಇದ್ದಾರೆ. ಅದಕ್ಕೆ ನಾವು ಅವಕಾಶ ನೀಡಬಾರದು ಎಂದು ಗುಡುಗಿದರು.

ಇದನ್ನೂ ಓದಿ: Gruha Lakshmi scheme: ಗೃಹಲಕ್ಷ್ಮಿ ಯೋಜನೆಗೆ ಜೂನ್ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.