ಬೆಂಗಳೂರು: ಬಿಟ್‌ಕಾಯಿನ್ ಹ್ಯಾಕಿಂಗ್ ಆರೋಪ ಎದುರಿಸುತ್ತಿರುವ ಶ್ರೀಕಿ ವಿರುದ್ಧ ಮೊಕದ್ದಮೆಗಳು ನ್ಯಾಯಾಲಯಗಳಲ್ಲಿ ನಡೆಯುತ್ತಿದ್ದು, ಸರ್ಕಾರ ಸತ್ಯಾಸತ್ಯತೆ ಹೊರತರಲು ಬದ್ಧವಾಗಿದೆ. ಪ್ರತಿಪಕ್ಷಗಳ ಆರೋಪಗಳಿಗೆ ಸದನದಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸಿಎಂ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಯಾವ ರೀತಿಯಲ್ಲಿ ತನಿಖೆಯಾಗಿದೆ ಎಂಬುದು ಮುಗಿದ ಅಧ್ಯಾಯ. ನಮ್ಮ ಸರ್ಕಾರದ ಅವಧಿಯಲ್ಲಿ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಸತ್ಯಾಸತ್ಯತೆ ಹೊರಬರಲಿದೆ ಎಂದರು.
ಹ್ಯಾಕಿಂಗ್ಗೆ ಒಳಗಾಗಿ ಮೋಸ ಹೋಗಿದ್ದೇವೆ ಎಂದು ಇದುವರೆಗೂ ಯಾವ ಸಂಸ್ಥೆಯೂ ಪೊಲೀಸರಿಗೆ ದೂರು ದಾಖಲಿಸಿಲ್ಲ. ಕಾಂಗ್ರೆಸ್ ಮುಖಂಡರು ಊಹಾಪೋಹಗಳನ್ನು ಕೇಳಿ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಸದನದಲ್ಲಿ ಸಮರ್ಪಕವಾಗಿ ಉತ್ತರಿಸುವುದಾಗಿ ಹೇಳಿದರು.
ಇದನ್ನೂ ಓದಿ: Covid Report : ರಾಜ್ಯದಲ್ಲಿಂದು 254 ಮಂದಿ ಪಾಸಿಟಿವ್, ಸೋಂಕಿನಿಂದ ಮೂವರು ಸಾವು