ಬೆಂಗಳೂರು: ಜೇಮ್ಸ್ ಚಿತ್ರದ ಬಗ್ಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಟ ಶಿವರಾಜ್ ಕುಮಾರ್ ದಂಪತಿ ಇಂದು ಭೇಟಿಯಾಗಿ ಏಪ್ರಿಲ್ ಎರಡನೇ ವಾರದಲ್ಲಿ ಶಕ್ತಿಧಾಮ ಕಟ್ಟಡಗಳ ಉದ್ಘಾಟನೆಗೆ ಆಹ್ವಾನ ನೀಡಿದ್ದಾರೆ. ಈ ವೇಳೆ ಜೇಮ್ಸ್ ಚಿತ್ರದ ಬಗ್ಗೆ ವಿಶೇಷವಾದ ಚರ್ಚೆ ನಡೆದಿಲ್ಲ ಎಂದರು.
ಸಿನಿಮಾಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ತೊಂದರೆ ಇದ್ದರೆ ಚಲನಚಿತ್ರ ವಾಣಿಜ್ಯ ಮಂಡಳಿ ಸಂಪರ್ಕಿಸಿ ಎಂದು ಹೇಳಿದ್ದೇನೆ. ಈ ಬಗ್ಗೆ ಜೇಮ್ಸ್ ನಿರ್ಮಾಪಕರಿಗೆ ತಿಳಿಸಿದ್ದೇನೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಆ ವ್ಯವಸ್ಥೆ ಇದ್ದು, ಅಲ್ಲಿ ಚರ್ಚೆ ನಡೆಸಲಾಗುತ್ತದೆ. ಈ ಬಗ್ಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸಲಾಗುವುದು. ಈಗಾಗಲೇ ಚೇಂಬರ್ ಜೊತೆ ನಾನೂ ಮಾತನಾಡಿದ್ದೇನೆ. ಇನ್ನೊಮ್ಮೆ ಬೇಕಾದರೆ ಮಾತನಾಡುತ್ತೇನೆ. ಏನೇ ಸಮಸ್ಯೆ ಇದ್ದರೂ ಬಗೆಹರಿಸಲಾಗುತ್ತದೆ ಎಂದರು.