ಬೆಂಗಳೂರು: ಮಂಗಳವಾರದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ವಿಧಾನಸಭಾಧ್ಯಕ್ಷರಿಗೆ ಆದೇಶ ನೀಡಿದೆ. ಅತೃಪ್ತರ ಬಗ್ಗೆ ಸ್ಪೀಕರ್ ನಿರ್ಧಾರ ಆಧರಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಕುಮಾರಕೃಪಾ ಗೆಸ್ಟ್ ಹೌಸ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅತೃಪ್ತರು ನ್ಯಾಚುರಲ್ ಡಿಸ್ಕ್ವಾಲಿಫಿಕೇಷನ್ ಆಗಲಿ, ರಾಜೀನಾಮೆ ಅಂಗೀಕಾರ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಆದ್ರೆ, ಈಗಾಗಲೇ ಸಿಎಂ ಸದನದಲ್ಲೇ ವಿಶ್ವಾಸ ಮತಯಾಚಿಸುವುದಾಗಿ ಹೇಳಿದ್ದಾರೆ. ಈ ಕುರಿತು ಸ್ಪೀಕರ್ಗೂ ಸಮಯ ನಿಗದಿ ಮಾಡುವಂತೆಯೂ ಮನವಿ ಮಾಡಿದ್ದಾರೆ. ಈ ಬಗ್ಗೆ ಸ್ಪೀಕರ್ ನಿರ್ಣಯ ತೆಗೆದುಕೊಂಡ ಬಳಿಕ ಮುಂದೇನು ಮಾಡಬೇಕೆಂಬುದು ಗೊತ್ತಾಗಲಿದೆ ಎಂದು ತಿಳಿಸಿದರು.