ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಇನ್ನೊಂದು ವಾರ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿದ್ದಪುರದಲ್ಲಿ 11 ಸೆಂ.ಮೀ, ಕುಂದಾಪುರ 10 ಸೆಂ.ಮೀ ಸೇರಿದಂತೆ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಇಂದಿನಿಂದ ಸೆಪ್ಟೆಂಬರ್ 17 ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
14 ರಿಂದ 17ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ 17 ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.