ಬೆಂಗಳೂರು: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಜೋರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಬೆಂಗಳೂರಿಗೆ ಯೆಲ್ಲೋ ಅಲರ್ಟ್: ಕಳೆದ ಕೆಲವು ದಿನಗಳಿಂದ ಸುರಿದ ಮಹಾಮಳೆಗೆ ಬೆಂಗಳೂರು ತತ್ತರಿಸಿದೆ. ಇದೀಗ ಮತ್ತೆ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
-
Telangana, Coastal & North Interior Karnataka and Kerala & Mahe during next 5 days. Isolated very heavy rainfall also likely over Kerala & Mahe on 07th & 08th; Coastal Karnataka during 07th-09th; South Interior Karnataka on 08th;
— India Meteorological Department (@Indiametdept) September 7, 2022 " class="align-text-top noRightClick twitterSection" data="
">Telangana, Coastal & North Interior Karnataka and Kerala & Mahe during next 5 days. Isolated very heavy rainfall also likely over Kerala & Mahe on 07th & 08th; Coastal Karnataka during 07th-09th; South Interior Karnataka on 08th;
— India Meteorological Department (@Indiametdept) September 7, 2022Telangana, Coastal & North Interior Karnataka and Kerala & Mahe during next 5 days. Isolated very heavy rainfall also likely over Kerala & Mahe on 07th & 08th; Coastal Karnataka during 07th-09th; South Interior Karnataka on 08th;
— India Meteorological Department (@Indiametdept) September 7, 2022
ಇದನ್ನೂ ಓದಿ: ರಾಜಧಾನಿಯಲ್ಲಿ ರಣ ಮಳೆ: ಕೆರೆಗಳು ಫುಲ್; ಮುಂದುವರಿದ ಜನರ ಪರದಾಟ
ಇನ್ನುಳಿದಂತೆ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು ಹಾಗು ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 11ರವರೆಗೆ ಭಾರಿ ಮಳೆಯಾಗಲಿದೆ.