ಬೆಂಗಳೂರು: ವೀಕೆಂಡ್ ಕರ್ಫ್ಯೂ ವೇಳೆ ನಗರದಲ್ಲಿ ಒಟ್ಟು 2,227 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
1,984 ದ್ವಿಚಕ್ರ ವಾಹನಗಳು, 99 ತ್ರಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 144 ನಾಲ್ಕು ಚಕ್ರದ ವಾಹನಗಳನ್ನು ಸೀಜ್ ಮಾಡಿದ್ದು, 23 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸರು ಹೇಳಿದ್ದಾರೆ.
ನಾಳೆಯಿಂದ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾಗಲಿದ್ದು, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದೆ ಎಂದು ಈಗಾಗಲೇ ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.