ETV Bharat / state

ಕೋರ್ಟ್ ಕ್ಲರ್ಕ್‍ಗಳಿಗೆ ಕಲ್ಯಾಣ ನಿಧಿ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್​

ಲಾಕ್‍ಡೌನ್ ಬಳಿಕ ಸಂಕಷ್ಟದಲ್ಲಿರುವ ವಕೀಲರ ಕ್ಲರ್ಕ್​ಗಳಿಗೆ ಆರ್ಥಿಕ ನೆರವು ಒದಗಿಸಲು 5 ಕೋಟಿ ರೂ. ಮೊತ್ತದ ಕಾರ್ಪಸ್ ನಿಧಿ ಸ್ಥಾಪಿಸುವಂತೆ ಕೋರಿ ಕರ್ನಾಟಕ ರಾಜ್ಯ ವಕೀಲರ ಕ್ಲರ್ಕ್ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾ. ವಿ.ಶ್ರೀಶಾನಂದ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

Welfare Fund for Court Clerks: High Court Hearing
ಕೋರ್ಟ್ ಕ್ಲರ್ಕ್‍ಗಳಿಗೆ ಕಲ್ಯಾಣ ನಿಧಿ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್​
author img

By

Published : May 16, 2020, 2:39 PM IST

ಬೆಂಗಳೂರು: ವಕೀಲರೊಂದಿಗೆ ಕೆಲಸ ಮಾಡುವ 'ನೋಂದಾಯಿತ ಗುಮಾಸ್ತರ ಕ್ಷೇಮಾಭಿವೃದ್ಧಿ ನಿಧಿ' ಸ್ಥಾಪಿಸುವಂತೆ 2008ರಲ್ಲಿ ನ್ಯಾಯಾಲಯ ನೀಡಿರುವ ಆದೇಶ ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ ಹಾಗೂ ರಾಜ್ಯ ವಕೀಲರ ಪರಿಷತ್​ಗೆ ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಲಾಕ್‍ಡೌನ್ ಬಳಿಕ ಸಂಕಷ್ಟದಲ್ಲಿರುವ ವಕೀಲರ ಕ್ಲರ್ಕ್​ಗಳಿಗೆ ಆರ್ಥಿಕ ನೆರವು ಒದಗಿಸಲು 5 ಕೋಟಿ ರೂ. ಮೊತ್ತದ ಕಾರ್ಪಸ್ ನಿಧಿ ಸ್ಥಾಪಿಸುವಂತೆ ಕೋರಿ ಕರ್ನಾಟಕ ರಾಜ್ಯ ವಕೀಲರ ಕ್ಲರ್ಕ್ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾ. ವಿ.ಶ್ರೀಶಾನಂದ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಈ ವೇಳೆ ರಾಜ್ಯ ವಕೀಲರ ಪರಿಷತ್ ಪರ ವಕೀಲರು ಅರ್ಜಿಗೆ ಸಂಬಂಧಿಸಿದಂತೆ ಉತ್ತರಿಸಲು ಕಾಲಾವಕಾಶ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನೋಂದಾಯಿತ ಕ್ಲರ್ಕ್‍ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವಂತೆ 2008ರಲ್ಲಿ ಹೈಕೋರ್ಟ್ ಆದೇಶ ನೀಡಿದೆ. ಈ ಆದೇಶ ಜಾರಿ ಬಗ್ಗೆ ಮೇ 21ರೊಳಗೆ ರಾಜ್ಯ ಸರ್ಕಾರ ಮತ್ತು ರಾಜ್ಯ ವಕೀಲರ ಪರಿಷತ್​ ತಮ್ಮ ನಿಲುವು ತಿಳಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಮೇ 22ಕ್ಕೆ ಮುಂದೂಡಿತು.

ಅರ್ಜಿಯಲ್ಲಿ, ಲಾಕ್‍ಡೌನ್ ಘೋಷಿಸಿದ ಬಳಿಕ ಕ್ಲರ್ಕ್​ಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕುಟುಂಬ ನಿರ್ವಹಣೆ, ಮನೆ ಬಾಡಿಗೆ, ಮಕ್ಕಳ ಶೈಕ್ಷಣಿಕ ವೆಚ್ಚ ಭರಿಸಲು ಕಷ್ಟವಾಗಿದೆ. ಆದ್ದರಿಂದ ಕ್ಲರ್ಕ್‍ಗಳಿಗೆ ಆರ್ಥಿಕ ನೆರವು ಒದಗಿಸಲು 5 ಕೋಟಿ ರೂ. ಮೊತ್ತದ ಕಾರ್ಪಸ್ ನಿಧಿ ಸ್ಥಾಪಿಸಿ ಈ ಹಣದಿಂದ ಕ್ಲರ್ಕ್​ಗಳಿಗೆ ತಲಾ 20 ಸಾವಿರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ 2008ರಲ್ಲಿ ಹೈಕೋರ್ಟ್ ನೀಡಿರುವ ಆದೇಶದಂತೆ ನೋಂದಾಯಿತ ಕ್ಲರ್ಕ್‍ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ ನೆರವು ನೀಡುವಂತೆ ರಾಜ್ಯ ಸರ್ಕಾರ ಮತ್ತು ವಕೀಲರ ಪರಿಷತ್‍ಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.