ಬೆಂಗಳೂರು: ಕಲ್ಯಾಣ ಕರ್ನಾಟಕ ಆಚರಣೆ ಈ ತಿಂಗಳ 17 ರಂದು ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಲ್ಲಿ ನಡೆಯಲಿದೆ. ಅಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಇತರ ಸಚಿವರು ಹೈದರಾಬಾದ್ ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ ಕಲ್ಯಾಣ ಕರ್ನಾಟಕದ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಸಿಎಂ ಯಡಿಯೂರಪ್ಪನವರು ಕಲ್ಬುರ್ಗಿಯಲ್ಲಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ರಾಯಚೂರು, ಮತ್ತೋರ್ವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಳ್ಳಾರಿ, ಆರೋಗ್ಯ ಸಚಿವ ಶ್ರೀರಾಮುಲು ಯಾದಗಿರಿ, ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಬೀದರ್ ಹಾಗೂ ಗಣಿ ಸಚಿವ ಸಿಸಿ ಪಾಟೀಲ್ ಅವರು ಕೊಪ್ಪಳದಲ್ಲಿ ಕಲ್ಯಾಣ ಕರ್ನಾಟಕದ ಧ್ವಜಾರೋಹಣ ನೆರವೇರಿಸಲಿದ್ದಾರೆ.