ETV Bharat / state

Job Alert: ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯಿಂದ ನೇಮಕಾತಿ.. ಕಲ್ಯಾಣ ಸಂಘಟಕರ ಹುದ್ದೆಗೆ ಅರ್ಜಿ ಆಹ್ವಾನ

ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Welfare Organizer Job recruitment by  Sainik Welfare Department Karnataka

author img

By

Published : Jul 29, 2023, 12:26 PM IST

ರಾಜ್ಯ ಸರ್ಕಾರದಿಂದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿ ವೃಂದದ ಕಲ್ಯಾಣ ಸಂಘಟಕರ ಹುದ್ದೆ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 2 ಆಗಸ್ಟ್​​ ಆಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ: ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14 ಕಲ್ಯಾಣ ಸಂಘಟಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಅದಕ್ಕೆ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಥವಾ 10ನೇ ತರಗತಿ ಉತ್ತೀರ್ಣರಾಗಿ ಸಶಸ್ತ್ರ ಪಡೆಯಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ, ಸಶಸ್ತ್ರ ಪಡೆಗಳಲ್ಲಿ ಭಾರತೀಯ ಸೇನೆ, ನೌಕಾ ಪಡೆ, ವಾಯು ಸೇನೆಯಿಂದ ಸ್ಪೆಷನ್​ ಸರ್ಟಿಫಿಕೆಟ್​ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ಪದವಿ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳು ಮೀರಿರಬಾರದು

ನೇಮಕಾತಿ ವಿಧಾನ: ಕನ್ನಡ ಭಾಷೆ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸ್ಮರ್ಧಾತ್ಮಕ ಪರೀಕ್ಷೆಯಲ್ಲಿ ಎರಡು ಪತ್ರಿಕೆ ಇರಲಿದ್ದು, ಬಹು ನಿಷ್ಟ ಆಯ್ಕೆ ಮಾದರಿಯಲ್ಲಿ ಈ ಪತ್ರಿಕೆ ಇರಲಿದೆ. ಮೊದಲ ಪತ್ರಿಕೆ ಸಾಮಾನ್ಯ ಜ್ಞಾನವಾಗಿದ್ದು, ಎರಡನೇ ಪತ್ರಿಕೆ ಸಾಮಾನ್ಯ ಕನ್ನಡ, ಇಂಗ್ಲಿಷ್​ ಮತ್ತು ಕಂಪ್ಯೂಟರ್​ ಜ್ಞಾನ ಹೊಂದಿರಲಿದೆ.

ವೇತನ: ಈ ಹುದ್ದೆಗಳಿಗೆ 21400 ರೂ ನಿಂದ 42000ರೂ.ವರೆಗೆ ವೇತನ ನಿಗದಿ ಪಡಿಸಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರ, ಹುದ್ದೆ ಸಲ್ಲಿಕೆ ಪ್ರಮಾಣಪತ್ರ ಸೇರಿದಂತೆ ಇನ್ನಿತರ ಅಗತ್ಯ ಮಾಹಿತಿಯನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ವಿಶೇಷ ಸೂಚನೆ: ಈ ಹುದ್ದೆಗೆ ಈಗಾಗಲೇ ಭೂ, ವಾಯು ಅಥವಾ ನೌಕ ಸೇನೆಯಲ್ಲಿ ಕೆಲಸ ನಿರ್ವಹಿಸಿ, ಹುದ್ದೆಯಿಂದ ಬಿಡುಗಡೆಗೊಂಡಿರುವ ಮಾಜಿ ನೌಕರರು ಹುದ್ದೆ ಸಲ್ಲಿಸಲು ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಕೆ ವಿಳಾಸ: ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಒಲಾಖೆ, ನಂ 58, ಫೀಲ್ಡ್​ ಮಾರ್ಷಲ್​ ಕೆ ಎಂ ಕಾರ್ಯಪ್ಪ ಭವನ, ಫೀಲ್ಡ್​ ಮಾರ್ಷಲ್​ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು 560025.

ಜುಲೈ 13ರಂದು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​​ 2 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು sainikwelfare.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: KPSC Recruitment: ಜ್ಯೂನಿಯರ್​ ಪ್ರೋಗ್ರಾಮರ್​ ಸೇರಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.