ETV Bharat / state

ಶಿಕ್ಷಣ ನೀತಿಯಲ್ಲಿ ಆಮೂಲಾಗ್ರ ಬದಲಾವಣೆ: ರಾಜ್ಯದ ಪಾತ್ರವೇನು?.. ಕೈಗೊಂಡ ಕ್ರಮಗಳೇನು? - education sector

ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಹಾಗೂ ಶಿಕ್ಷಕರ ಬದುಕಿಗೂ ಒತ್ತು ನೀಡಲು ದೇಶಾದ್ಯಂತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. 2021ರಲ್ಲಿ ಅಂದರೆ ಪ್ರಸ್ತುತ ಸಾಲಿನಲ್ಲಿ ಹಂತ ಹಂತವಾಗಿ ಈ ಯೋಜನೆ ಆರಂಭಿಸಲು ಸರ್ಕಾರ ಈಗಾಗಲೇ ತಯಾರಿ ನಡೆಸಿದ್ದು, ರಾಜ್ಯದಲ್ಲಿ ಈ ಕುರಿತು ತಯಾರಿ ಹೇಗಿದೆ ಎಂಬುದನ್ನು ಒಮ್ಮೆ ನೋಡೋಣ.

what are all the preparations to implement the national education policy
ಶಿಕ್ಷಣ ನೀತಿಯಲ್ಲಿ ಅಮೂಲಾಗ್ರ ಬದಲಾವಣೆ: ರಾಜ್ಯದ ಪಾತ್ರವೇನು?
author img

By

Published : Feb 20, 2021, 7:43 PM IST

Updated : Feb 20, 2021, 7:51 PM IST

ಮಾನವನ ವ್ತಕ್ತಿತ್ವ ಪರಿಪೂರ್ಣಗೊಳಿಸುವಲ್ಲಿ ಶಿಕ್ಷಣ ಪ್ರಮುಖ ಮಾತ್ರ ವಹಿಸಿದೆ. ಹಾಗಾಗಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. 2022 ರಲ್ಲಿ ಹೊಸ ಶಿಕ್ಷಣ ನೀತಿ ಜಾರಿಯಾಗಲಿದ್ದು, ಇದಕ್ಕೆ ಬೇಕಾದ ಪ್ರಕ್ರಿಯೆಗಳು ಚುರುಕಿನಿಂದ ನಡೆಯಬೇಕಾಗಿದೆ. ಈಗಾಗಲೇ ಒಂದಿಷ್ಟು ಸಿದ್ಧತೆ ಕೂಡ ನಡೆದಿದೆ.

ದೇಶದಲ್ಲಿ ರಾಜ್ಯದಿಂದ ರಾಜ್ಯಕ್ಕೆ, ಪ್ರದೇಶದಿಂದ ಪ್ರದೇಶಕ್ಕೆ ಭಿನ್ನವಾದ ಶಿಕ್ಷಣ ನೀತಿಯಿದೆ. ಹಾಗಾಗಿ ಪ್ರಸ್ತುತ ಶಿಕ್ಷಣ ನೀತಿಯಲ್ಲಿ ಒಂದಿಷ್ಟು ಬದಲಾವಣೆ, ವಿಷಯವಾರು ಆಯ್ಕೆಗೆ ಮುಕ್ತ ಅವಕಾಶ, ಪುಸ್ತಕದ ಹೊರೆ ಕಡಿಮೆ ಮಾಡಿ ಪ್ರಾಯೋಗಿಕ ಶಿಕ್ಷಣಕ್ಕೆ ಒತ್ತು ನೀಡಿ ಎಲ್ಲೆಡೆ ಒಂದೇ ತರನಾದ ನೀತಿ ರೂಪಿಸುವುದೇ ಈ ಹೊಸ ಶಿಕ್ಷಣ ನೀತಿಯ ಉದ್ದೇಶವಾಗಿದೆ.

ಶಿಕ್ಷಣದ ಗುಣಮಟ್ಟ ಸುಧಾರಣೆಗಾಗಿ ಕ್ರಮ ವಹಿಸಿರುವ ರಾಜ್ಯ ಸರ್ಕಾರ, ಈ ನೂತನ ಶಿಕ್ಷಣ ನೀತಿಯನ್ನು ಕಾರ್ಯರೂಪಕ್ಕೆ ತರಲು ಸಮಿತಿಯೊಂದನ್ನು ರಚಿಸಿದೆ. ಈಗಾಗಲೇ ರಾಜ್ಯದ ಎಲ್ಲ ವಿಶ್ವವಿದ್ಯಾಲಯ, ಕಾಲೇಜುಗಳ ನ್ಯಾಕ್​​ ಮಾನ್ಯತೆ, ಎನ್​ಐಆರ್​ಎಫ್ ಶ್ರೇಯಾಂಕ​​ ಪಡೆಯುವ ಸಂಬಂಧ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಸೂಚನೆ ನೀಡಲಾಗಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಬಳ್ಳಾರಿಯಲ್ಲಿ ಈಗಾಗಲೇ ಜಾಗೃತಿ ಅಭಿಯಾನ ಕೈಗೊಳ್ಳಲಾಗಿದೆ. ಪ್ರತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಈ ಕುರಿತು ತರಬೇತಿ ನೀಡುವ ಜೊತೆಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಿದೆ.

ಇನ್ನೂ ಹೊಸ ಶಿಕ್ಷಣ ನೀತಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯಗಳಿಂದ ಬರುವ ಸೂಚನೆಗಳನ್ನು ಪಾಲಿಸಿ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಶಿಕ್ಷಣ ನೀತಿಯಲ್ಲಿ ಆಮೂಲಾಗ್ರ ಬದಲಾವಣೆ: ರಾಜ್ಯದ ಪಾತ್ರವೇನು?

ವಿದ್ಯಾರ್ಥಿಗಳು ತಮ್ಮ ಹವ್ಯಾಸಕ್ಕೆ ತಕ್ಕಂತೆ ವಿಷಯಗಳನ್ನು ಆಯ್ದು ಪ್ರಾಯೋಗಿಕ ತರಬೇತಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಈ ಹೊಸ ನೀತಿ ಸಹಕಾರಿಯಾಗಲಿದೆ ಎಂಬುದು ವಿಜಯಪುರ ಶಿಕ್ಷಣ ತಜ್ಞರ ಅಭಿಪ್ರಾಯ.

ಈ ಸುದ್ದಿಯನ್ನೂ ಓದಿ: ಬಳ್ಳಾರಿ ಜಿಲ್ಲಾದ್ಯಂತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾಗೃತಿ ಅಭಿಯಾನ

2020-21ರಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮ ವಹಿಸಿ, ಹಂತ ಹಂತವಾಗಿ ಕಾರ್ಯರೂಪಕ್ಕೆ ತರುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಒಟ್ಟಾರೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಿದ್ಧತೆಗಳು ನಡೆಯುತ್ತಿದ್ದು, ಪ್ರತಿ ಹಳ್ಳಿ-ಹಳ್ಳಿಗೂ ಸೂಕ್ತ ಮಾಹಿತಿ ತಲುಪಬೇಕಿದೆ. ಆಗಬೇಕಾದ ಕಾರ್ಯಗಳು ಚುರುಕುಗೊಳ್ಳಬೇಕಿದೆ.

Last Updated : Feb 20, 2021, 7:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.