ETV Bharat / state

ಭಾರತದ ಐತಿಹಾಸಿಕ ಪಾದಯಾತ್ರೆ ಹಾಗೂ ಕರ್ನಾಟಕದ ರಾಜಕೀಯ ಪಾದಯಾತ್ರೆಗಳಿಂದಾದ ಅನುಕೂಲಗಳೇನು?

ದೇಶ ಮತ್ತು ರಾಜ್ಯದಲ್ಲಿ ಈ ಹಿಂದೆ ಹಾಗೂ ಇಂದಿಗೂ ಅನೇಕ ಪಾದಯಾತ್ರೆಗಳನ್ನು ಮಾಡಲಾಗುತ್ತಿದೆ. ಕೆಲವು ಪಾದಯಾತ್ರೆಗಳನ್ನು ಸ್ವಾತಂತ್ರ್ಯ, ಅಭಿವೃದ್ಧಿಗಾಗಿ ಮಾಡಿದರೆ, ಇದೀಗ ರಾಜಕೀಯಕ್ಕಾಗಿ ಪಾದಯಾತ್ರೆ ಮಾಡಲಾಗುತ್ತಿದೆ. ಹೀಗೆ ಮಾಡುವ ರಾಜಕೀಯ ಪಾದಯಾತ್ರೆಗಳಿಂದಾದ ಅನುಕೂಲಗಳೇನು ಎಂಬ ಬಗ್ಗೆ ಒಂದು ವರದಿ ಇಲ್ಲಿದೆ.

ರಾಜಕೀಯ ಪಾದಯಾತ್ರೆ
ರಾಜಕೀಯ ಪಾದಯಾತ್ರೆ
author img

By

Published : Sep 30, 2022, 2:53 PM IST

ಬೆಂಗಳೂರು: ಭಾರತದಲ್ಲಿ ಜನರ ಅಭಿವೃದ್ಧಿಗಾಗಿ ಹಲವು ಐತಿಹಾಸಿಕ ಪಾದಯಾತ್ರೆಗಳನ್ನು ಮಾಡಲಾಗಿದ್ದು, ಅವು ಇಂದಿಗೂ ಸ್ಥಿರ ಸ್ಥಾಯಿಯಾಗಿ ಉಳಿದಿವೆ.

ಪಾದಯಾತ್ರೆ ಫೋಟೋ
ಪಾದಯಾತ್ರೆ ಫೋಟೋ

ಭೂದಾನ ಚಳವಳಿ: ಭಾರತದಲ್ಲಿ ಐತಿಹಾಸಿಕ ಎಂದು ಗುರುತಿಸಬಹುದಾದ ಪಾದಯಾತ್ರೆ ಮಾಡಿದವರು ಆಚಾರ್ಯ ವಿನೋಭಾ ಭಾವೆ. ಪ್ರಸ್ತುತ ತೆಲಂಗಾಣಕ್ಕೆ ಸೇರಿರುವ ಕೊಲ್ಲಂಪಲ್ಲಿ ಎಂಬ ಗ್ರಾಮಕ್ಕೆ 1951 ರ ಏಪ್ರಿಲ್ ನಲ್ಲಿ ಅವರು ಭೇಟಿ ನೀಡಿದರು. ವಿನೋಭಾ ಭಾವೆ ಅವರಿಗೆ ಅಲ್ಲಿನ ಹಲವು ಪರಿಶಿಷ್ಟ ಕುಟುಂಬಗಳು ಮನವಿ ನೀಡಿ, ತಮಗೆ ವ್ಯವಸಾಯ ಮಾಡಲು ಭೂಮಿ ಇಲ್ಲ. ಕನಿಷ್ಠ ಎರಡೆರಡು ಎಕರೆ ಭೂಮಿ ಕೊಡಿಸಿದರೆ ಅನುಕೂಲವಾಗುತ್ತದೆ ಎಂದು ವಿನಂತಿಸಿಕೊಳ್ಳುತ್ತಾರೆ.

13 ವರ್ಷಗಳ ಕಾಲ ಪಾದಯಾತ್ರೆ: ಇಂತವರಿಗಾಗಿ ಭೂದಾನ ಮಾಡುವವರು ಯಾರು? ಎಂದು ವಿನೋಭಾಭಾವೆ ಚಿಂತಿತರಾದಾಗ ಅಲ್ಲೇ ಇದ್ದ ರಾಮಚಂದ್ರರೆಡ್ಡಿ ಎಂಬುವವರು ತಾವೇ ನೂರು ಎಕರೆ ಭೂಮಿ ಕೊಡುವುದಾಗಿ ಭರವಸೆ ಕೊಡುತ್ತಾರೆ. ಇದರಿಂದ ಸ್ಪೂರ್ತಿಗೊಂಡ ವಿನೋಭಾಭಾವೆ ಅಂದಿನಿಂದಲೇ ವಿದ್ಯುಕ್ತವಾಗಿ ದೇಶಾದ್ಯಂತ ತಿರುಗಿ 'ಭೂದಾನ ಚಳವಳಿ' ಮಾಡಲು ನಿರ್ಧರಿಸುತ್ತಾರೆ. ಇದೇ ಕಾರಣಕ್ಕಾಗಿ ಸತತ 13 ವರ್ಷಗಳ ಕಾಲ, ಸುಮಾರು 70 ಸಾವಿರ ಕಿಲೋಮೀಟರುಗಳಷ್ಟು ದೂರ ಪಾದಯಾತ್ರೆ ಮಾಡುವ ಅವರು ನಲವತ್ತು ಲಕ್ಷದ ಐವತ್ತು ಸಾವಿರ ಎಕರೆಯಷ್ಟು ಭೂಮಿಯನ್ನು ಉಳ್ಳವರಿಂದ ಪಡೆದು ಬಡವರಿಗೆ ಹಂಚುತ್ತಾರೆ.

ಈ ಕಾರ್ಯಕ್ಕಾಗಿ ತಾವು ಯಾರಿಂದಲೂ ನೆರವು ಪಡೆಯುವುದಿಲ್ಲ ಎಂದು ತೀರ್ಮಾನಿಸಿದ್ದ ವಿನೋಭಾ ಭಾವೆ ಇದೇ ಕಾರಣಕ್ಕಾಗಿ ರೈಲನ್ನೂ ಹತ್ತದೇ ಬರಿಗಾಲಲ್ಲಿ ದೇಶ ಸುತ್ತುತ್ತಾರೆ. ಇದು ಭಾರತ ಮಾತ್ರವಲ್ಲ, ಜಗತ್ತಿನ ಇತಿಹಾಸ ಕಂಡ ಅತ್ಯಂತ ದೊಡ್ಡ ಪಾದಯಾತ್ರೆ ಎಂಬ ಮಾತಿದೆ.

ಪಾದಯಾತ್ರೆ ಮಾಡಿದ್ದ ಮಹಾತ್ಮ ಗಾಂಧೀಜಿ: ಇನ್ನು ಯಂಗ್ ಟರ್ಕ್ ಖ್ಯಾತಿಯ ಚಂದ್ರಶೇಖರ್ ಅವರು 1983 ರ ಜನವರಿ 6 ರಿಂದ ಜೂನ್ 25 ರವರೆಗೆ ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಪಾದಯಾತ್ರೆ ಮಾಡಿದ್ದರು. ಇದಕ್ಕಾಗಿ 2900 ಕಿಲೋಮೀಟರುಗಳಷ್ಟು ದೂರವನ್ನು ಕ್ರಮಿಸಿದ್ದರು. ಬ್ರಿಟಿಷರ ವಿರುದ್ಧ ಹೋರಾಟಕ್ಕಿಳಿದ ಮಹಾತ್ಮ ಗಾಂಧೀಜಿ ಅವರು ದೇಶವಾಸಿಗಳನ್ನು ಸಂಘಟಿಸಲು ದೇಶಾದ್ಯಂತ ತಿರುಗಿದ್ದರಲ್ಲದೇ, ಹಲವಾರು ಬಾರಿ ಪಾದಯಾತ್ರೆಗಳನ್ನು ಮಾಡಿದ್ದು ಇತಿಹಾಸ.

ಇದೇ ರೀತಿ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಉದ್ದೇಶಗಳಿಗಾಗಿ ಹಲವಾರು ಯಾತ್ರೆ, ಪಾದಯಾತ್ರೆಗಳು ನಡೆದಿವೆ. ಕರ್ನಾಟಕದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಪಟ್ಟಕ್ಕೇರಿದ್ದ ಎಸ್.ಎಂ.ಕೃಷ್ಣ, ಸಿದ್ಧರಾಮಯ್ಯ, ಬಿ.ಎಸ್. ಯಡಿಯೂರಪ್ಪ ಅವರೆಲ್ಲ ವಿವಿಧ ಪಾದಯಾತ್ರೆಗಳನ್ನು ನಡೆಸಿ ಇತಿಹಾಸದಲ್ಲಿ ದಾಖಲಾಗಿದ್ದಾರೆ.

ರಾಜ್ಯ ರಾಜಕೀಯ ಇತಿಹಾಸದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈ ಮುಂಚೆಯೂ ಕೆಲವು ಪ್ರಮುಖ ಪಾದಯಾತ್ರೆಗಳಿಗೆ ರಾಜ್ಯ ಸಾಕ್ಷಿಯಾಗಿದೆ. ಆ ಮೂಲಕ ಪಾದಯಾತ್ರೆ ನಡೆಸಿದ ಪಕ್ಷಗಳಿಗೆ ಚುನಾವಣೆಗಳಲ್ಲಿ ರಾಜಕೀಯ ಲಾಭವನ್ನೂ ಒದಗಿಸಿಕೊಟ್ಟಿದೆ. ರಾಜ್ಯದಲ್ಲಿ ನಡೆದ ನಿರ್ಣಾಯಕ ಪಾದಯಾತ್ರೆ ಮತ್ತು ಅದರ ಲಾಭ ನಷ್ಟ ಲೆಕ್ಕಾಚಾರ ಇಲ್ಲಿದೆ.

ಹೆಚ್ ಡಿ ದೇವೇಗೌಡರ ಪಾದಯಾತ್ರೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು 2001ರಲ್ಲಿ ಅಂದಿನ ಎಸ್.ಎಂ.ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೊಡೆತಟ್ಟಿ ಪಾದಯಾತ್ರೆ ಹೋರಾಟಕ್ಕೆ ಇಳಿದಿದ್ದರು. ನೀರಾ ತೆಗೆಯುವ ವಿವಾದಲ್ಲಿ ಇಬ್ಬರು ರೈತರು ಪೊಲೀಸರು ಹಾರಿಸಿದ್ದ ಗುಂಡಿಗೆ ಬಲಿಯಾಗಿದ್ದರು. ಆ ವೇಳೆ, ತೆಂಗಿಗೆ ನುಸಿರೋಗ ಹೆಚ್ಚಿದ್ದರಿಂದ ನೀರಾ ತೆಗೆಯುವ ವಿಚಾರ ಮುನ್ನೆಲೆಗೆ ಬಂದಿತ್ತು.

ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿಯಿಂದ ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ವರೆಗೆ ದೇವೇಗೌಡರು 2001ರ ಅ.28ರಿಂದ ನ.1ರ ವರೆಗೆ ಪಾದಯಾತ್ರೆ ಕೈಗೊಂಡಿದ್ದರು. ಒಟ್ಟು 5 ದಿನಗಳ ಕಾಲ ಸುಮಾರು 80 ಕಿ.ಮೀ ಕ್ರಮಿಸಿ ಪಾದಯಾತ್ರೆ ನಡೆಸಿ, ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು.

ಜೆಡಿಎಸ್​​ಗೆ ಲಾಭ: ದೇವೇಗೌಡರು ಕಾಂಗ್ರೆಸ್ ಸರ್ಕಾರದ ಗೋಲಿಬಾರ್ ವಿರುದ್ಧ ನಡೆಸಿದ ಪಾದಯಾತ್ರೆ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್​​ಗೆ ಭರ್ಜರಿ ರಾಜಕೀಯ ಲಾಭ ಕೊಟ್ಟಿತು. 2004ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದ ಕ್ಷೇತ್ರಗಳಲ್ಲಿ ಪಾರುಪತ್ಯ ಸಾಧಿಸಿತು. ಎಸ್.ಎಂ.ಕೃಷ್ಣ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ‌ ಅಲೆಯ ಜೊತೆಗೆ ಗೌಡರು ನಡೆಸಿದ ಪಾದಯಾತ್ರೆ ಹೋರಾಟವೂ ಜೆಡಿಎಸ್​​ಗೆ ಭಾರಿ ಲಾಭ ತಂದು ಕೊಟ್ಟಿತು.

2004ರ ಚುನಾವಣೆಯಲ್ಲಿ ಜೆಡಿಎಸ್ 58 ಸ್ಥಾನ ಗೆದ್ದು ಬೀಗಿತು. ಅದರಲ್ಲೂ ಹಳೆ ಮೈಸೂರು ಭಾಗದಲ್ಲಿ 37 ಸ್ಥಾನಗಳನ್ನು ಗೆದ್ದು ಪಾದಯಾತ್ರೆ ಪೊಲಿಟಿಕ್ಸ್ ಶಕ್ತಿಯನ್ನು ತೋರಿಸಿಕೊಟ್ಟಿತು. 1999ರಲ್ಲಿ ಹಳೆ ಮೈಸೂರು ಭಾಗದಲ್ಲಿ 3 ಸ್ಥಾನ ಗೆದ್ದಿದ್ದ ಜೆಡಿಎಸ್ 2004ರಲ್ಲಿ 37 ಸ್ಥಾನ ಗೆಲುವು ಸಾಧಿಸಿತು.

ಎಸ್ ಎಂ ಕೃಷ್ಣರಿಂದ ಪಾದಯಾತ್ರೆ: 1999ರಲ್ಲಿ ಸಿಎಂ ಆಗಿದ್ದ ಎಸ್ ಎಂ ಕೃಷ್ಣ ಪಾಂಚಜನ್ಯ ಯಾತ್ರೆ ಮಾಡಿದ್ದರು. ಆದರೆ, 2002 ರಾಜ್ಯದಲ್ಲಿ ಭಾರಿ ಬರಗಾಲ ಆವರಿಸಿದ್ದರಿಂದ ನಿಗದಿತ ನೀರು ಬಿಡಲು ಸಾಧ್ಯವಾಗಿರಲಿಲ್ಲ. ಆಗ ತಮಿಳುನಾಡು ಕೋರ್ಟ್​ ಮೇಟ್ಟಿಲೇರಿತ್ತು. ನ್ಯಾಯಾಲಯದ ಆದೇಶ ಪಾಲನೆ ಮಾಡದಿರುವುದನ್ನ ಸುಪ್ರೀಂಕೋರ್ಟ್​ ಗಂಭೀರವಾಗಿ ತೆಗೆದುಕೊಂಡಿತ್ತು.

ಆಗ ಸಿಎಂ ಆಗಿದ್ದ ಎಸ್​ ಎಂ ಕೃಷ್ಣಾ ಪಾದಯಾತ್ರೆ ಕೈಗೊಂಡು ಕಾವೇರಿ ಪ್ರಾಂತ್ಯದ ಜನರ ಮನಗೆಲ್ಲುವ ಯತ್ನ ಮಾಡಿದ್ದರು. ಈ ಸಂದರ್ಭದಲ್ಲಿ ನೀರು ಹಂಚಿಕೆ ವಿಚಾರ ಸುಪ್ರೀಂಕೋರ್ಟ್‌ ಮುಂದೆ ಇದ್ದದ್ದರಿಂದ ಈ ಪಾದಯಾತ್ರೆಗೆ ಭಾರಿ ಆಕ್ಷೇಪ ವ್ಯಕ್ತಪಡಿಸಿತ್ತು. ಎಸ್.ಎಂ.ಕೃಷ್ಣ ಅವರು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ 2002 ಅಕ್ಟೋಬರ್ 7 ರಿಂದ ಅಕ್ಟೋಬರ್ 11ರ ವರೆಗೆ 6 ದಿನಗಳ ಪಾದಯಾತ್ರೆ ಕೈಗೊಂಡಿದ್ದರು.

ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಮಂಡ್ಯದವರೆಗೆ 100 ಕಿ.ಮೀ. ದೂರ ಪಾದಯಾತ್ರೆ ನಡೆಸಿದ್ದರು. ಆ ಮೂಲಕ ರಾಜಕೀಯ ಲಾಭದ ಲೆಕ್ಕಾಚಾರ ಹಾಕಿದ್ದರು. ಆದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಇದರಿಂದ ಹೆಚ್ಚಿನ ರಾಜಕೀಯ ಲಾಭ ಲಭಿಸಲಿಲ್ಲ. ಬಲವಾದ ಆಡಳಿತ ವಿರೋಧಿ ಅಲೆಗೆ ಕಾಂಗ್ರೆಸ್ ಆ ಚುನಾವಣೆಯಲ್ಲಿ ಕೊಚ್ಚಿ ಹೋಗಿತ್ತು.

ಸಿದ್ದರಾಮಯ್ಯ ಅವರ ಬಳ್ಳಾರಿ ಪಾದಯಾತ್ರೆ: ಬಿಜೆಪಿಯ ಗಣಿದಣಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಪ್ರಾಬಲ್ಯದ ವಿರುದ್ದ ತೊಡೆತಟ್ಟಿದ ಸಿದ್ದರಾಮಯ್ಯ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು. ಈ ಐತಿಹಾಸಿಕ ಪಾದಯಾತ್ರೆ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿದ್ದಲ್ಲದೇ, 2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಮಾಡಿತು. ಅದು 2010, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು.

ಮುಖ್ಯಮಂತ್ರಿಯಾಗಿದ್ದವರು ಬಿಎಸ್ ಯಡಿಯೂರಪ್ಪ. ಬಳ್ಳಾರಿಯ ಗಣಿಧಣಿಗಳಾದ ಜನಾರ್ದನ್ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು.
ಬಳ್ಳಾರಿಯನ್ನು ತಮ್ಮ ಸ್ವಂತ ರಾಜ್ಯ ಎಂಬಂತೆ ಆಳುತ್ತಿದ್ದ ಇವರು ಅದೊಂದು ದಿನ ರಾಜ್ಯ ವಿಧಾನಸಭೆಯಲ್ಲಿ 'ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ' ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಗೆ ಸವಾಲು ಹಾಕಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ ಪೋಸ್ಟರ್ ಹರಿದರೆ ಬಿಜೆಪಿಗರು ತಿರುಗಾಡದಂತೆ ಮಾಡುತ್ತೇವೆ: ಸಿದ್ದು ವಾರ್ನಿಂಗ್

ವಿಧಾನಸಭೆಯಲ್ಲೇ ಬಳ್ಳಾರಿ ಗಣಿಧಣಿಗಳ ಸವಾಲು ಸ್ವೀಕರಿಸಿದ ಸಿದ್ದರಾಮಯ್ಯ ಭುಜತಟ್ಟಿ, 'ನಾವು ಬಳ್ಳಾರಿಗೆ ಬಂದೇ ಬರುತ್ತೇವೆ. ನಡೆದುಕೊಂಡೇ ಬರುತ್ತೇವೆ. ತಾಕತ್ತಿದ್ದರೆ ತಡೆಯಿರಿ,' ಎಂದು ಮರು ಸವಾಲು ಹಾಕಿದರು. ಹೀಗೆ 2010ರ ಜುಲೈ 25ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ 'ಬಳ್ಳಾರಿ ಚಲೋ' ಪಾದಯಾತ್ರೆ ಆರಂಭವಾಯಿತು. ಬೆಂಗಳೂರಿನಿಂದ ನಡೆದೇ ಕಾಂಗ್ರೆಸ್ ನಾಯಕರೆಲ್ಲರೂ ಬಳ್ಳಾರಿ ತಲುಪಿದರು. ಪಾದಯಾತ್ರೆಯ 20ನೇ ದಿನ ಬಳ್ಳಾರಿಯಲ್ಲಿ ಆ.8 ರಂದು 2 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದ ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ನಾಯಕರು ಗಣಿಧಣಿಗಳು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಅಬ್ಬರಿಸಿದ್ದರು.

ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ: 2013ರಲ್ಲಿ 'ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ' ಎಂಬ ಪಾದಯಾತ್ರೆ ನಡೆಸಿದ್ದರು. ಕೃಷ್ಣಾದ ಎ ಮತ್ತು ಬಿ ಸ್ಕೀಮ್‌ನಡಿ ಪೂರ್ಣ ಪ್ರಮಾಣದ ನೀರು ಬಳಸಿಕೊಳ್ಳಲು ಸರಕಾರ ವೈಫಲ್ಯ ಹಾಗೂ ನೀರಾವರಿ ಯೋಜನೆಗೆ ಅನುಷ್ಠಾನದಲ್ಲಿನ ವೈಫಲ್ಯ ವಿರೋಧಿಸಿ ಚುನಾವಣಾ ಪೂರ್ವ ಜ.7ರಿಂದ 14 ರವರೆಗೆ ಕಾಂಗ್ರೆಸ್ ನಡಿಗೆ - ಕೃಷ್ಣೆಯ ಕಡೆಗೆ ಎಂಬ ಯಾತ್ರೆ ಕೈಗೊಂಡಿತ್ತು.

ಕೃಷ್ಣ ಯೋಜನೆಯಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳದೇ ಇರುವುದರಿಂದ 259 ಟಿಎಂಸಿ ನೀರು ಆಂಧ್ರಕ್ಕೆ ಹೋಗುತ್ತಿದೆ. ಅಲ್ಲಿನ ನೀರಾವರಿ ಯೋಜನೆಗೆ 17 ಸಾವಿರ ಕೋಟಿ ರೂ. ಖರ್ಚು ಮಾಡುವ ಭರವಸೆ ನೀಡಿದ್ದ ಬಿಜೆಪಿ, ಕೇವಲ 500 ಕೋಟಿ ರೂ. ನೀಡಿದೆ ಎಂಬ ಪ್ರಮುಖ ಅಜೆಂಡಾದೊಂದಿಗೆ ಪಾದಯಾತ್ರೆ ನಡೆಸಲಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಬಜೆಟ್‌ನಲ್ಲಿ ಇದಕ್ಕೆ 10 ಸಾವಿರ ಕೋಟಿ ರೂ. ಮೀಸಲಿಡಲಾಗುವುದು ಎಂಬ ಭರವಸೆಯೊಂದಿಗೆ ಪಾದಯಾತ್ರೆ ನಡೆಸಿತ್ತು. ಹೊಸಪೇಟೆಯಿಂದ ಆರಂಭಗೊಂಡು ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳದ ಮಾರ್ಗವಾಗಿ ಕೂಡಲಸಂಗಮದಲ್ಲಿ ಸಮಾರೋಪಗೊಂಡು ಸುಮಾರು 140 ಕಿ.ಮೀ ಪಾದಯಾತ್ರೆ ನಡೆಸಲಾಯಿತು.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ: ರಾಜ್ಯದಲ್ಲಿ ಇದೀಗ ಕಾಂಗ್ರೆಸ್ ಉದ್ದೇಶಿಸಿರುವ ಮೇಕೆದಾಟು ಪಾದಯಾತ್ರೆ ರಾಜಕೀಯವಾಗಿ ಆರೋಪ - ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಹೊರಟಿದ್ದ ಪಾದಯಾತ್ರೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ನಡೆಯಿತು. ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ 2022 ಜನವರಿ 9 ರಿಂದ 19 ರವರೆಗೆ 11 ದಿನಗಳ 165 ಕಿ. ಮೀ. ಪಾದಯಾತ್ರೆ ಆರಂಭಿಸುವ ಮೂಲಕ ಹೋರಾಟಕ್ಕೆ ಮುನ್ನುಡಿ ಬರೆಯಿತು.

ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಆರ್.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್, ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರಾದೂ, ಅಷ್ಟಾಗಿ ನಾಯಕರಲ್ಲಿ ಆಸಕ್ತಿ ಕಾಣಿಸಲಿಲ್ಲ. ಕನಕಪುರದ ಮೇಕೆದಾಟುವಿನಿಂದ ಆರಂಭವಾದ ಪಾದಯಾತ್ರೆ ರಾಮನಗರದವರೆಗೆ ನಡೆಸಿದ ಕಾಂಗ್ರೆಸ್ ನಾಯಕರಿಗೆ ಕೋವಿಡ್ ಕಾರಣ ನೀಡಿ ತಡೆವೊಡ್ಡಲಾಗಿತ್ತು. ನಂತರ ರಾಮನಗರದಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ನಡೆಸಿದ ಕೈ ನಾಯಕರು, ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದರು.

ಭಾರತ್ ಜೋಡೋ ಯಾತ್ರೆ: ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ 'ಭಾರತ್ ಜೋಡೋ ಯಾತ್ರೆ' ದೇಶದ ರಾಜಕೀಯ ಇತಿಹಾಸದಲ್ಲಿ ತಿರುವು ನೀಡಲಿದೆ ಎಂದು ಹೇಳಲಾಗುತ್ತಿದೆ. ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಈ ಯಾತ್ರೆ ಆರಂಭವಾಗಿದ್ದು, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಎಲ್ಲ ವರ್ಗದಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭ್ಯವಾಗಿದೆ. ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಿತ್ಯ 25 ಕಿ.ಮೀ ಸರಾಸರಿಯಲ್ಲಿ 150 ದಿನ ಪಾದಯಾತ್ರೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯಲಿದೆ. ಈ 3500 ಕಿಮೀ ಪ್ರಯಾಣವು 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ಈ ಐದು ತಿಂಗಳ ಪಾದಯಾತ್ರೆಯಾಗಿದೆ.ಭಾರತ್ ಜೋಡೋ ಯಾತ್ರೆ ಕುಸಿದಿರುವ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬ ನಿರೀಕ್ಷೆ ಇರಿಸಿಕೊಳ್ಳಲಾಗಿದ್ದು, ದೇಶದ ಇತಿಹಾಸ ಕಂಡ ದೊಡ್ಡ ಯಾತ್ರೆಗಳಲ್ಲಿ ಇದು ಕೂಡ ದಾಖಲಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.