ETV Bharat / state

ಸಂಪುಟ ಉಪ ಸಮಿತಿ ಸಭೆಯ ನಿರ್ಣಯಗಳೇನು? - ಸಂಪುಟ ಉಪ ಸಮಿತಿ

ಡಿಸಿಎಂ, ಸಂಪುಟ ಉಪಸಮಿತಿ ಅಧ್ಯಕ್ಷ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಸಂಪುಟ ಉಪ ಸಮಿತಿ ಸಭೆ ನಡೆಯಿತು.

Vidhana Soudha
ವಿಧಾನಸೌಧ
author img

By

Published : Oct 22, 2020, 10:39 PM IST

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಆಹಾರಧಾನ್ಯಗಳನ್ನು ಸಂಗ್ರಹಿಸುವ ಕುರಿತು ಇಂದು ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಿತು.

ಡಿಸಿಎಂ, ಸಂಪುಟ ಉಪಸಮಿತಿ ಅಧ್ಯಕ್ಷ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಉಪ ಸಮಿತಿಯ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಗೋಪಾಲಯ್ಯ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಭಾಗವಹಿಸಿದ್ದರು.

2020-21 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿವರವಾಗಿ ಚರ್ಚಿಸಿ ಈ ಕೆಳಗಿನಂತೆ ನಿರ್ಣಯವನ್ನು ಕೈಗೊಳ್ಳಲಾಯಿತು.

ಸಭೆಯ ನಿರ್ಣಯಗಳೇನು?

2020-21ನೇ ಸಾಲಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ರೈತರಿಂದ ಪ್ರತಿ ಎಕರೆಗೆ 16 ಕ್ವಿಂಟಾಲ್‌ ನಂತೆ ಗರಿಷ್ಟ 40 ಕ್ವಿಂಟಾಲ್‌ ಭತ್ತವನ್ನು ಖರೀದಿಸುವುದು.

ಹೆಚ್ಚುವರಿಯಾಗಿ 1ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು. ಮುಂದಿನ ತಿಂಗಳಿನಿಂದ ಈ ಬಗ್ಗೆ ರೈತರ ನೊಂದಣಿ ಕಾರ್ಯ ಪ್ರಾರಂಭಿಸಿ ತದನಂತರ ಖರೀದಿಸಲು ನಿರ್ಧಾರ.

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಆಹಾರಧಾನ್ಯಗಳ ಖರೀದಿಯಲ್ಲಿ ಅಗತ್ಯವಿರುವ ಅನುದಾನವನ್ನು ರಾಜ್ಯದ ಆವರ್ತ ನಿಧಿಯಿಂದ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದು ಹಾಗೂ ಬೇಡಿಕೆಗೆ ಅನುಗುಣವಾಗಿ ಸಂಗ್ರಹಣಾ ಏಜೆನ್ಸಿಗಳಿಗೆ ಅನುದಾನ ಬಿಡುಗಡೆ ಮಾಡುವುದು.

ಕೇಂದ್ರ ಸರ್ಕಾರವು ನಿಗದಿಪಡಿಸಿರುವಂತೆ ವಿವಿಧ ವೆಚ್ಚಗಳನ್ನು ಅಕ್ಕಿ ಗಿರಣಿಗಳ ಮಾಲೀಕರುಗಳಿಗೆ ನೀಡುವುದು ಮತ್ತು ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಕ್ರಮ ವಹಿಸುವುದು.

ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಕೋರಿಕೆಯಂತೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಿಸುವ ಪ್ರಕ್ರಿಯೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಕೈಬಿಡುವುದು ಹಾಗೂ ಸದರಿ ಏಜೆನ್ಸಿಗೆ ನಿಯೋಜಿಸಿದ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಗೆ ವಹಿಸುಸುವುದು.‌

ಖರೀದಿ ಕಾರ್ಯಕ್ಕೆ ಸಂಗ್ರಹಣಾ ಏಜೆನ್ಸಿಗಳನ್ನಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಗಳಿಗೆ ಜಿಲ್ಲೆಗಳನ್ನು ನಿಯೋಜಿಸುವುದು.

2019-20ನೇ ಸಾಲಿನಲ್ಲಿ ಸಂಗ್ರಹಣಾ ಏಜೆನ್ಸಿಗಳಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ 27 ಕೋಟಿ ರೂ. ಕರ್ನಾಟಕ ರಾಜ್ಯ ಉಗ್ರಾಣ ನಿಗಮಕ್ಕೆ ರೂ.21 ಕೋಟಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಕ್ಕೆ 8 ಕೋಟಿ ರೂ. ಒಟ್ಟು 56 ಕೋಟಿ ರೂ.ಗಳನ್ನು ಬಾಕಿ ಇರುವ ಹಣವನ್ನು ಆವರ್ತ ನಿಧಿಯಿಂದ ಭರಿಸಲು ಕ್ರಮವಹಿಸುವುದು.

ಶೇಂಗಾ ಖರೀದಿ ಪ್ರಕ್ರಿಯೆಗೆ ಕೇಂದ್ರ ಸರ್ಕಾರವು ಈಗಾಗಲೇ ಅನುಮತಿ ನೀಡಿರುವುದರಿಂದ ಶೀಘ್ರವೇ ಈ ಶೇಂಗಾ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿರ್ಧಾರ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಗೆ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು. 79,175 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರದಿಂದ ಅನುಮತಿ ದೊರೆತಿದ್ದು, ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗಿದ್ದು, ಹೆಸರು, ಉದ್ದು ಮತ್ತು ಉಂಡೆ ಕೊಬ್ಬರಿ ಖರೀದಿ ಈಗಾಗಲೇ ಚಾಲನೆಯಲ್ಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.