ETV Bharat / state

ಗೃಹಲಕ್ಷ್ಮಿ ಯೋಜನೆ.. ಅರ್ಜಿ ಸಲ್ಲಿಸಿದರೂ ಕೆಲವರಿಗೆ ಹಣ ಯಾಕ್​ ಬಂದಿಲ್ಲ ಅನ್ನೋದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಕಾರಣ

ಕಾಂಗ್ರೆಸ್​ ಪಕ್ಷದ ಪ್ರಮುಖ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರ ಪೈಕಿ ಎಷ್ಟು ಜನರಿಗೆ ಹಣ ಹೋಗಿಲ್ಲ? ಕಾರಣವೇನು? ಎಂಬುದರ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
author img

By ETV Bharat Karnataka Team

Published : Oct 9, 2023, 5:33 PM IST

ಬೆಂಗಳೂರು : ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಸೂಕ್ತ ಕಾರಣಗಳನ್ನು ನೀಡಿದ್ದಾರೆ.

3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. 5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್ ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸಚಿವರು ತಿಳಿಸಿದ್ದಾರೆ.

1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್ ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಇಂದೀಕರಿಸಿದ ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾ ಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ. 1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂ. ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಿತ್ತು.

ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ. ಅಕ್ಟೋಬರ್ 4ರ ವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ಕೈಗೊಂಡಿರುವುದಾಗಿ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ : ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ : ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ ಕೆ ಸವಿತಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.