ಬೆಂಗಳೂರು: ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ಸನ್ಮಾನ್ಯ ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದ್ದರೂ ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
-
ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ @narendramodi ಅವರು ತಳುಕುಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?
— Siddaramaiah (@siddaramaiah) October 25, 2023 " class="align-text-top noRightClick twitterSection" data="
ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ.…
">ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ @narendramodi ಅವರು ತಳುಕುಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?
— Siddaramaiah (@siddaramaiah) October 25, 2023
ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ.…ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ @narendramodi ಅವರು ತಳುಕುಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?
— Siddaramaiah (@siddaramaiah) October 25, 2023
ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ.…
ಈ ಕುರಿತು ಟ್ವೀಟ್ ಮಾಡಿರುವ ಅವರು, ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ ಅವರು ತಳುಕುಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಪ್ರಶ್ನಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಹಾಗೂ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನಮಂತ್ರಿ ಅವರಿಂದಲೇ ಬಂದಿರುವುದರಿಂದ ಅವರೇ ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ - ಹಗಲು ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದು ನಮ್ಮ ನಡುವೆ ಇರುವುದನ್ನು ಒಪ್ಪಿಕೊಳ್ಳಬೇಕಲ್ಲವೇ? ಜಾತಿ ಕುರುಡಿನಿಂದ ಜಾತೀಯತೆಯ ನಿರ್ಮೂಲನೆ ಅಸಾಧ್ಯ ಎನ್ನುವುದನ್ನು ಮಾನ್ಯ ನರೇಂದ್ರ ಮೋದಿ ಅವರು ಅರಿತಿದ್ದಾರೆ ಎಂದು ಭಾವಿಸುವೆ ಎಂದಿದ್ದಾರೆ.
ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು. ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದುಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ರಾಮನಗರ ಬೆಂಗಳೂರಿಗೆ ಸೇರಿಸುವ ವಿಚಾರ ನನಗೆ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ