ETV Bharat / state

ಚುನಾವಣೆಗಳಲ್ಲಿ ಲಾಭ ಗಳಿಸದ ಜೆಡಿಎಸ್​ನ ಮುಂದಿನ ತಂತ್ರಗಾರಿಕೆ ಏನು?

ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಜೆಡಿಎಸ್ ಸೋಲನುಭವಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ತಳಮಟ್ಟದಿಂದ ಪಕ್ಷ ಸಂಘಟನೆಗೆ ನಿರ್ಧರಿಸಿರುವ ಜೆಡಿಎಸ್ ವರಿಷ್ಠರು, ದೀಪಾವಳಿ ಹಬ್ಬ ಮುಗಿದ ನಂತರ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲು ಮುಂದಾಗಿದ್ದಾರೆ.

author img

By

Published : Nov 16, 2020, 4:49 PM IST

banglore
ಜೆಡಿಎಸ್

ಬೆಂಗಳೂರು: ಎರಡು ಉಪ ಚುನಾವಣೆ ಹಾಗೂ ವಿಧಾನ ಪರಿಷತ್​ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗುತ್ತಿದ್ದರೆ, ಇನ್ನೊಂದೆಡೆ ಭಾರೀ ವಿಶ್ವಾಸದಲ್ಲಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್​ಗೆ ಹಿನ್ನಡೆಯಾಗಿ ಮೌನಕ್ಕೆ ಜಾರಿವೆ.

ಬಿಜೆಪಿ ಮತ್ತು ಕಾಂಗ್ರೆಸ್​ನ ಹಣಾಹಣಿ ಮಧ್ಯೆ ಜೆಡಿಎಸ್ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡಿತ್ತಾದರೂ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಇದು ಪಕ್ಷದ ವರಿಷ್ಠರನ್ನು ಚಿಂತೆಗೀಡು ಮಾಡಿರುವ ಜೊತೆಗೆ ಜೆಡಿಎಸ್ ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದೆ. ಸೋಲಿನಿಂದ ತಲೆಕೆಡಿಸಿಕೊಂಡಿರುವ ಜೆಡಿಎಸ್ ವರಿಷ್ಠರು ಸೋಲಿನ ಪರಾಮರ್ಶೆ ನಡೆಸಲು ಮುಂದಾಗಿದ್ದಾರೆ.

ಇನ್ನು ಹಳೇ ಮೈಸೂರು ಭಾಗದಲ್ಲೂ ಜೆಡಿಎಸ್ ದಿನೇ ದಿನೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ವರಿಷ್ಠರು ಹಾಗೂ ಶಾಸಕರ ನಿದ್ದೆಗೆಡಿಸಿದೆ. ಹಾಗಾಗಿ ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ತಳಮಟ್ಟದಿಂದ ಪಕ್ಷ ಸಂಘಟನೆಗೆ ನಿರ್ಧರಿಸಿರುವ ಜೆಡಿಎಸ್ ವರಿಷ್ಠರು, ದೀಪಾವಳಿ ಹಬ್ಬ ಮುಗಿದ ನಂತರ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲು ಮುಂದಾಗಿದ್ದಾರೆ.

ಉಪ ಚುನಾವಣೆಗಳಿಂದ ಪಕ್ಷಕ್ಕೆ ಯಾವುದೇ ಲಾಭವಿಲ್ಲ ಎಂಬ ಸಂದೇಶ ಶಿರಾ ಹಾಗೂ ಆರ್.ಆರ್.ನಗರ ಉಪ ಚುನಾವಣೆಗಳಿಂದ ರವಾನೆಯಾಗಿದೆ. ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಚಿಂತನೆ ನಡೆಸುವಂತೆ ಮಾಡಿದ್ದು, ಕಾರ್ಯಕರ್ತರಲ್ಲೂ ಆತಂಕ ಎದುರಾಗಿದೆ. ಕೆಲ ಶಾಸಕರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇತರ ಪಕ್ಷಗಳ ಕಡೆ ಮುಖ ಮಾಡಿದ್ದಾರೆ. ಹಾಗಾಗಿ ಪಕ್ಷ ದಿನದಿಂದ ದಿನಕ್ಕೆ ಕುಸಿಯುತ್ತಿರುವುದಕ್ಕೆ ಕಾರಣ ಹುಡುಕಲು ಹೊರಟಿರುವ ಜೆಡಿಎಸ್ ವರಿಷ್ಠರು, ಪಕ್ಷವನ್ನು ಭದ್ರಪಡಿಸಲು ತಂತ್ರಗಾರಿಗೆ ರೂಪಿಸುತ್ತಿದ್ದಾರೆ.

ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸಲು ನಿರ್ಧರಿಸಿರುವ ವರಿಷ್ಠರು, ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸೋಲಿನ ಪರಾಮರ್ಶೆ: ಪಕ್ಷದ ಸೋಲಿಗೆ ಕಾರಣ ಕುರಿತು ಪಕ್ಷದ ವರಿಷ್ಠರು ಕಾರ್ಯಕರ್ತರಿಂದ ಮಾಹಿತಿ ಪಡೆಯಲಿದ್ದಾರೆ. ಇದರ ಜೊತೆಗೆ ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸಲು ಕೈಗೊಳ್ಳಬೇಕಾಗಿರುವ ಕಾರ್ಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಯುವಕರನ್ನು ಸೆಳೆಯುವ ತಂತ್ರ:

ಯುವಕರನ್ನು ಪಕ್ಷದ ಕಡೆ ಸೆಳೆಯಲು ಚಿಂತನೆ ನಡೆಸಿರುವ ವರಿಷ್ಠರು, ನಿಖಿಲ್ ಕುಮಾರಸ್ವಾಮಿ ಅಥವಾ ಪ್ರಜ್ವಲ್ ರೇವಣ್ಣಗೆ ಈ ಜವಾಬ್ದಾರಿ ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಇನ್ನೂ ಅಂತಿಮಗೊಂಡಿಲ್ಲ.

ಸದಸ್ಯತ್ವ ನೋಂದಣಿ ಅಭಿಯಾನ:

ಬೇರುಮಟ್ಟದಲ್ಲಿ ಪಕ್ಷ ಸಂಘಟಿಸಲು ಕೈಗೊಳ್ಳಬೇಕಾಗಿರುವ ಕಾರ್ಯಕ್ರಮಗಳು, ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟದ ರೂಪುರೇಷೆ, ಸದಸ್ಯತ್ವ ನೋಂದಣಿ ಅಭಿಯಾನ, ಬೂತ್ ಮಟ್ಟದಲ್ಲಿ ಸದಸ್ಯರ ನೋಂದಣಿ ಮಾಡಲು ಸಿದ್ಧತೆ ನಡೆಯುತ್ತಿದೆ. ಪಕ್ಷದ ವೃದ್ಧಿಗೆ ಸಮಾಜಿಕ ಜಾಲತಾಣ ಬಳಸಲು ಮುಂದಾಗಿರುವ ಜೆಡಿಎಸ್, ಈಗಾಗಲೇ ಆನ್‌ಲೈನ್​ನಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಆರಂಭ ಮಾಡಿದೆ. ಆದರೆ ಇದನ್ನು ಮತ್ತಷ್ಟು ಚುರುಕುಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜ್ಯಸಭೆ ಉಪಚುನಾವಣೆಗೆ ತಟಸ್ಥ ನಿಲುವು:

ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿ. 1ರಂದು ನಡೆಯಲಿರುವ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆ ಇದ್ದು, ಈಗಾಗಲೇ ರಾಜ್ಯಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ನ. 18ರವರೆಗೂ ಸಮಯವಿದೆ. ಸದಸ್ಯರ ಸಂಖ್ಯಾ ಬಲದ ಕೊರತೆಯ ಕಾರಣದಿಂದ ಈ ಚುನಾವಣೆಯಲ್ಲಿ ತಟಸ್ಥ ನಿಲುವಿಗೆ ಜೆಡಿಎಸ್ ಮುಂದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.