ETV Bharat / state

ರಾಜ್ಯ ಹಣಕಾಸು ಸಂಸ್ಥೆಗೆ ಪ್ರಸ್ತುತ ವರ್ಷದಲ್ಲಿ ಆದ ಲಾಭವೆಷ್ಟು ? - state financial institution

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ 61ನೇ ವಾರ್ಷಿಕ ಮಹಾಸಭೆಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಡಾ. ಏಕರೂಪ್ ಕೌರ್ ಅವರು ಸಂಸ್ಥೆಯ ಲೆಕ್ಕಪತ್ರಗಳ ಬಗ್ಗೆ ಪ್ರಮುಖ ಅಂಶಗಳನ್ನು ಹಂಚಿಕೊಂಡಿದ್ದರು. ಇದರ ಪ್ರಕಾರ ಪ್ರಸ್ತುತ 2019-20ನೇ ಸಾಲಿನಲ್ಲಿ ಒಟ್ಟು 720.85 ಕೋಟಿ ರೂ.ಗಳನ್ನು ವಸೂಲಾತಿ ಮಾಡಲಾಗಿದೆ. ಪ್ರಸ್ತುತ ವರ್ಷದಲ್ಲಿ ಸಂಸ್ಥೆಯು 44.92 ಕೋಟಿ ರೂ.ಗಳಷ್ಟು ಲಾಭಗಳಿಸಿದೆ.

ರಾಜ್ಯ ಹಣಕಾಸು
ರಾಜ್ಯ ಹಣಕಾಸು
author img

By

Published : Aug 21, 2020, 9:34 PM IST

ಬೆಂಗಳೂರು: ಆರ್ಥಿಕ ವರ್ಷದಲ್ಲಿ ವಿವಿಧ ಸಾಲ ಯೋಜನೆಗಳ ಮೂಲಕ 667.81 ಕೋಟಿ ರೂ.ಗಳ ಸಾಲ ಮಂಜೂರು ಮಾಡಲಾಗಿದೆ. 727.90 ಕೋಟಿ ರೂ.ಗಳನ್ನು ವಿತರಣೆ ಮಾಡಲಾಗಿದ್ದು, ಪ್ರಸ್ತುತ 2019-20ನೇ ಸಾಲಿನಲ್ಲಿ ಒಟ್ಟು 720.85 ಕೋಟಿ ರೂ.ಗಳನ್ನು ವಸೂಲಾತಿ ಮಾಡಲಾಗಿದೆ. ಪ್ರಸ್ತುತ ವರ್ಷದಲ್ಲಿ ಸಂಸ್ಥೆಯು 44.92 ಕೋಟಿ ರೂ.ಗಳಷ್ಟು ಲಾಭ ಗಳಿಸಿದೆ.

ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ 61ನೇ ವಾರ್ಷಿಕ ಮಹಾಸಭೆಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಡಾ. ಏಕರೂಪ್ ಕೌರ್ ಅವರು ಸಂಸ್ಥೆಯ ಲೆಕ್ಕಪತ್ರಗಳ ಬಗ್ಗೆ ಪ್ರಮುಖ ಅಂಶಗಳನ್ನು ಹಂಚಿಕೊಂಡಿದ್ದರು. ಶೇಕಡಾವಾರು ಅನುತ್ಪಾದಕ ನಿವ್ವಳ ಆಸ್ತಿಯು ಕಳೆದ ವರ್ಷದ ಶೇ. 6.09 ರಿಂದ ಪ್ರಸ್ತುತ ವರ್ಷದಲ್ಲಿ ಶೇ. 5.12ಕ್ಕೆ ಇಳಿದಿರುತ್ತದೆ. ಸಂಸ್ಥೆಯು ಮಾರ್ಚ್ 31, 2020 ರವರೆಗಿನ ಸಂಚಿತ ಮಂಜೂರಾತಿಯು 1,74,217 ಕೈಗಾರಿಕಾ ಘಟಕಗಳಿಗೆ 17,884.72 ಕೋಟಿ ರೂ.ಗಳಷ್ಟಾಗಿದೆ.

ಸಂಸ್ಥೆಯು ಈಗಾಗಲೇ 21,700 ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉದ್ಯಮಿಗಳಿಗೆ 2000 ಕೋಟಿ ರೂ.ಗಳಿಗೂ ಅಧಿಕ ಸಾಲ ಮಂಜೂರಾತಿ ನೆರವನ್ನು ನೀಡಿದೆ. ಸಂಸ್ಥೆಯು ಇಲ್ಲಿಯವರೆಗೆ 30,000ಕ್ಕೂ ಹೆಚ್ಚಿನ ಮಹಿಳಾ ಉದ್ಯಮಿದಾರರಿಗೆ 4243.67 ಕೋಟಿ ರೂ.ಗಳ ಅವಧಿ ಸಾಲ ಮಂಜೂರಾತಿ ಮಾಡಿದೆ. 41,000 ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಉದ್ಯಮಿಗಳಿಗೂ ಇದುವರೆಗೂ 1748.40 ಕೋಟಿ ರೂ.ಗಳ ಸಾಲ ಮಂಜೂರಾತಿ ನೆರವನ್ನು ಒದಗಿಸಿದೆ. ಮೊದಲ ಪೀಳಿಗೆ ಉದ್ಯಮಿದಾರರಿಗೆ 164.70 ಕೋಟಿ ರೂ.ಗಳ ಸಾಲ ಮಂಜೂರು ಒದಗಿಸಲಾಗಿದೆ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೆರವು :

ಸಂಸ್ಥೆಯು ಕೈಗೊಂಡಿರುವ ಹಲವಾರು ಉಪಕ್ರಮಗಳು ಹಾಗೂ ಪ್ರಮುಖ ಯೋಜನೆಗಳಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ, ಮಹಿಳಾ ಉದ್ಯಮಿಗಳಿಗೆ ಹಾಗೂ ಎಲ್ಲಾ ವರ್ಗದ ಉದ್ಯಮಿಗಳಿಗೆ ಲಭ್ಯವಿರುವ ಶೇ. 4ರ ನಿವ್ವಳ ಬಡ್ಡಿದರದಲ್ಲಿ ಆರ್ಥಿಕ ಸಹಾಯ ಯೋಜನೆಗಳ ಯಶಸ್ವಿ ಅನುಷ್ಠಾನದ ಪ್ರತಿಫಲವಾಗಿ ಸಂಸ್ಥೆಯು ಸಾಧನೆಯನ್ನು ಗಳಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರದ ವತಿಯಿಂದ ಉಳಿದ ಬಡ್ಡಿದರ ಸಹಾಯಧನದ ರೂಪದಲ್ಲಿ ಪಾವತಿಯಾಗುತ್ತದೆ.

ಪ್ರಸ್ತುತ ಹಣಕಾಸು ವರ್ಷದಲ್ಲಿ ರಾಜ್ಯ ಸರ್ಕಾರ ಸಂಸ್ಥೆಗೆ 100 ಕೋಟಿ ರೂ.ಗಳ ಈಕ್ವಿಟಿ ಬಂಡವಾಳವನ್ನು ಹಾಗೂ 71.50 ಕೋಟಿ ರೂ.ಗಳ ಬಡ್ಡಿ ಸಹಾಯಧನದ ನೆರವನ್ನು ಮೇಲಿನ ಯೋಜನೆಗಳಡಿಯಲ್ಲಿ ಒದಗಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯಮಿಗಳು ಸ್ಥಾಪಿಸುವ ಜವಳಿ ಮತ್ತು ಕೈಮಗ್ಗ ಘಟಕಗಳಿಗೆ ವಿಶೇಷ ಹಣಕಾಸಿನ ಯೋಜನೆಯಡಿ ರಾಜ್ಯ ಸರ್ಕಾರ 20.12 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯಮಿದಾರರಿಗೆ ಬಂಡವಾಳವಾಗಿ 27.02 ಕೋಟಿ ರೂಗಳ ಸರಳಬೀಜ ಧನವನ್ನು ಸರ್ಕಾರ ನೀಡಿದೆ.

ಮುಂದಿನ ವರ್ಷದ ಗುರಿಗಳೇನು? :

2020-21 ರ ಹಣಕಾಸು ವರ್ಷವನ್ನು “ಕೋವಿಡ್-19 ರ ಸವಾಲುಗಳ ವರ್ಷ”ವೆಂದು ಪರಿಗಣಿಸಲಾಗಿದೆ. ರಾಜ್ಯದ ಆರ್ಥಿಕತೆಯಲ್ಲಾದ ಚಂಚಲತೆಯಿಂದಾಗಿ ಪ್ರಸ್ತುತ ವರ್ಷದಲ್ಲಿ ಸಂಸ್ಥೆಯೂ ಸಹಾ ಮಿಶ್ರ ಬೆಳವಣಿಗೆಯನ್ನೇ ನಿರೀಕ್ಷಿಸಲಿದೆ. ಕೊರೊನಾ ಏಟಿನಿಂದ ಮಧ್ಯಮ, ಸಣ್ಣ ಹಾಗೂ ಸೂಕ್ಷ್ಮ ಘಟಕಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಪರಿಹಾರ ಹಾಗೂ ರಿಯಾಯಿತಿಗಳನ್ನು ನೀಡುವ ದಿಕ್ಕಿನಲ್ಲಿ ಕಾರ್ಯಗತವಾಗಿವೆ. 2020-21 ರ ಆರ್ಥಿಕ ವರ್ಷದಲ್ಲಿ ಸಂಸ್ಥೆಯು ತಲಾ 600 ಕೋಟಿ ರೂ.ಗಳ ಮಂಜೂರಾತಿ ಗುರಿಯನ್ನು ಹೊಂದಿದ್ದು, ರಾಜ್ಯ ಸರ್ಕಾರದ ಬಡ್ಡಿ ಸಹಾಯಧನ ಯೋಜನೆಗಳ ಯಶಸ್ವಿ ಅನುಷ್ಠಾನದೊಂದಿಗೆ ಸಮಾಜದ ವಿವಿಧ ವರ್ಗಗಳಿಂದ ಸ್ಥಾಪಿಸಲ್ಪಡುವ ಎಂ.ಎಸ್.ಎಂ.ಇ ಗಳಿಗೆ ನೆರವು ನೀಡುವ ಕಡೆಗೆ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಲಿದೆ. ಎಂ.ಎಸ್.ಎಂ.ಇ ಗಳ ಪರಿಷ್ಕೃತ ನಿರೂಪಣೆಯು ಜುಲೈ 1 ರಿಂದಲೇ ಜಾರಿಗೊಂಡಿದ್ದು, ಉತ್ಪಾದಕ ಹಾಗೂ ಸೇವಾ ವಲಯಗಳಿಂದ ಸ್ಥಾಪಿಸಲ್ಪಡುವ ಘಟಕಗಳಿಗೆ ರಾಜ್ಯ ಸರ್ಕಾರದ ಸಬ್‍ವೆನ್ಷನ್ ಯೋಜನೆಯನ್ನು 2020-21 ರಿಂದ ಸಂಸ್ಥೆಯಲ್ಲಿ ಪುನರ್ ಪರಿಚಯಿಸುತ್ತಿರುವುದು ಉದ್ಯಮಿಗಳಿಗೆ ವರದಾನವಾಗಲಿದೆ. ಅಲ್ಲದೆ ಅನುತ್ಪಾದಕ ಆಸ್ತಿಗಳನ್ನು ಮತ್ತಷ್ಟು ಕಡಿಮೆಗೊಳಿಸಲು ಸಂಸ್ಥೆಯು ಹೆಚ್ಚಿನ ಒತ್ತು ನೀಡಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.