ETV Bharat / state

ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿ ಭೇಟಿ: ರಾಜ್ಯಕ್ಕೆ ಕೇಂದ್ರದಿಂದ ಸಿಕ್ಕಿದ್ದೇನು? - ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಚಾರ

ರಾಜ್ಯದ ಯೋಜನೆಗಳ ವಿಚಾರದಲ್ಲಿ ಅಲ್ಪಸ್ವಲ್ಪ ಕೆಲಸ ಮಾಡಿಸಿಕೊಳ್ಳುವಲ್ಲಿ ಬೊಮ್ಮಾಯಿ ಸಕಾರಾತ್ಮಕವಾಗಿ ಮುಂದುವರೆದಿದ್ದರೂ ರಾಜಕೀಯ ವಿಚಾರದಲ್ಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತುಕೊಳ್ಳುವ ಸ್ಥಿತಿ ಮುಂದುವರೆದಿದೆ.

what-is-the-results-of-cm-basavaraj-bommai-delhi-visit
ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿ ಭೇಟಿ
author img

By

Published : Apr 7, 2022, 5:19 PM IST

ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಪಡೆದುಕೊಳ್ಳುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಫಲರಾಗಿದ್ದರೂ, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮತ್ತೊಮ್ಮೆ ಬರಿಗೈಲಿ ಬಂದಿದ್ದಾರೆ. ಹೋದ ಪುಟ್ಟ ಬಂದ ಪಟ್ಟ ಎನ್ನುವಂತೆ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ಈ ಹಿಂದೆ ಸಂಪುಟ ವಿಸ್ತರಣೆಗೆ ಯಡಿಯೂರಪ್ಪ ಅವರಿಗೆ ಎದುರಾದ ಸ್ಥಿತಿಯೇ ಈಗ ಬೊಮ್ಮಾಯಿಗೂ ಬಂದಿದೆ.

ರಾಜ್ಯದ ಯೋಜನೆಗಳ ವಿಚಾರದಲ್ಲಿ ಅಲ್ಪ ಸ್ವಲ್ಪ ಕೆಲಸ ಮಾಡಿಸಿಕೊಳ್ಳುವಲ್ಲಿ ಬೊಮ್ಮಾಯಿ ಸಕಾರಾತ್ಮಕವಾಗಿ ಮುಂದುವರೆದಿದ್ದರೂ ರಾಜಕೀಯ ವಿಚಾರದಲ್ಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತುಕೊಳ್ಳಬೇಕಾಗಿದೆ. ನಾಳೆ ಬಾ ಎನ್ನುವ ಮಾತಿನಂತೆ ದೆಹಲಿಗೆ ಹೋಗಿ ವರಿಷ್ಠರ ಭೇಟಿ ಮಾಡಿ ಯಾವುದೇ ತೀರ್ಮಾನ ಆಗದೆ ಬರಿಗೈಯಲ್ಲಿ ವಾಪಸ್ಸಾಗುತ್ತಿದ್ದಾರೆ.

what is the results of CM basavaraj bommai delhi visit?
ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಜೊತೆ ಸಿಎಂ ಬೊಮ್ಮಾಯಿ

ಬೊಮ್ಮಾಯಿ ಪ್ರವಾಸದಿಂದ ರಾಜ್ಯಕ್ಕೆ ಸಿಕ್ಕಿದ್ದು: ಈ ಬಾರಿಯ ದೆಹಲಿ ಪ್ರವಾಸದ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದೆ. ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆದ ಕೂಡಲೇ ಸಚಿವ ಸಂಪುಟದಲ್ಲಿ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಂದ ಭರವಸೆ ಪಡೆದುಕೊಳ್ಳಲಾಗಿದೆ.

ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಹಾಗೂ ಭದ್ರಾ ಮೇಲ್ದಂಡೆ ಕುರಿತು ಕೇಂದ್ರ ಸಚಿವರ ಜೊತೆ ಚರ್ಚೆಯಾಗಿದೆ. ಈ ಯೋಜನೆಗಳ ಕುರಿತು ರಾಜ್ಯದ ನಿಲುವು ಹಾಗೂ ವಿಧಾನಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಮೇಕೆದಾಟು ಯೋಜನೆಯ ಡಿಪಿಆರ್ ಅನುಮೋದಿಸುವುದು ಹಾಗೂ ಮಹದಾಯಿ ಯೋಜನೆಯ ಸಾಧ್ಯತಾ ವರದಿಗೆ ಒಪ್ಪಿಗೆ ನೀಡುವುದನ್ನು ಆದಷ್ಟು ಬೇಗನೆ ಮಾಡಲಾಗುವುದು ಎನ್ನುವ ಭರವಸೆ ಪಡೆದುಕೊಂಡಿದ್ದಾರೆ.

ಯು.ಕೆ.ಪಿ 3ನೇ ಹಂತದ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣವಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಬೇಕಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಜಲಶಕ್ತಿ ಸಚಿವ ಶೇಖಾವತ್ ಗೆ ಮನವಿ ಮಾಡಲಾಗಿದ್ದು, ನ್ಯಾಯಮೂರ್ತಿಗಳ ನೇಮಕಾತಿಯನ್ನೂ ಆದಷ್ಟು ಶೀಘ್ರವಾಗಿ ಮಾಡುವ ಕುರಿತು ಮಾತುಕತೆ ನಡೆಸಿಕೊಂಡು ಭರವಸೆಯೊಂದಿಗೆ ಸಿಎಂ ವಾಪಸ್ಸಾಗಲಿದ್ದಾರೆ.

ಜಿಎಸ್​ಟಿ ವಿಚಾರ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದು, ಜಿಎಸ್​ಟಿ ಪರಿಹಾರ ಕುರಿತು ಮಾತುಕತೆ ನಡೆಸಲಾಗಿದೆ. ಜೂನ್​ನಿಂದ ಜಿಎಸ್​ಟಿ ಪರಿಹಾರ ಹಂಚಿಕೆ ಸ್ಥಗಿತಗೊಳ್ಳುವ ಕಾರಣ ಇನ್ನಷ್ಟು ಸಮಯ ಜಿಎಸ್​ಟಿ ಪರಿಹಾರ ಮುಂದುವರಿಕೆ ಕುರಿತು ಮಾತುಕತೆ ನಡೆದಿದ್ದು, ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ ಎನ್ನಲಾಗಿದೆ.

ಸಂಗೊಳ್ಳಿ ರಾಯಣ್ಣ ಶಾಲೆಯನ್ನು ಸೈನಿಕ ಶಾಲೆಯನ್ನಾಗಿ ಮಾಡಲು ಒಪ್ಪಿಗೆ ಸಿಕ್ಕಿದ್ದು, ಅದರ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಸಣ್ಣಪುಟ್ಟ ಸಮಸ್ಯೆ ಪರಿಹರಿಸಿಕೊಳ್ಳಲಾಗಿದೆ. ಹಾಗಾಗಿ ಆದಷ್ಟು ಬೇಗ ಸೈನಿಕ ಶಾಲೆ ಆರಂಭವಾಗಲಿದೆ.

ಕೇಂದ್ರ ಇಂಧನ ಸಚಿವ ಆರ್.ಕೆ.ಸಿಂಗ್ ಅವರನ್ನು ಭೇಟಿಯಾಗಿರುವ ಸಿಎಂ ಬೊಮ್ಮಾಯಿ ಕೇಂದ್ರ ಗ್ರಿಡ್​​ನಿಂದ ರಾಜ್ಯಕ್ಕೆ ಅಗತ್ಯ ಪ್ರಮಾಣದ ವಿದ್ಯುತ್ ಸರಬರಾಜು ಕುರಿತು ಮಾತುಕತೆ ನಡೆಸಿದ್ದಾರೆ. ರಾಜ್ಯದ ಪಾಲಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಭರವಸೆ ಪಡೆದುಕೊಂಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ, ಇತರರು

ಮುಗಿಯದ ಕ್ಯಾಬಿನೆಟ್ ಗೊಂದಲ: ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿ ಕುರಿತು ಕಳೆದ ಆರು ತಿಂಗಳಿನಿಂದ ಆರು ಬಾರಿ ಸಿಎಂ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಪ್ರತಿ ಬಾರಿಯೂ ಬರಿಗೈಲೇ ವಾಪಸ್ಸಾಗಿದ್ದು, ಈ ಬಾರಿಯೂ ಅದೇ ಕಥೆ ಮುಂದುವರೆದಿದೆ. ಉಪ ಚುನಾವಣೆ, ದೀಪಾವಳಿ, ಹೊಸ ವರ್ಷ, ಸಂಕ್ರಾಂತಿ, ಪಂಚ ರಾಜ್ಯ ಚುನಾವಣೆ, ಯುಗಾದಿ ಹೀಗ ಪ್ರತಿ ಬಾರಿಯೂ ಒಂದೊಂದು ಕಾರಣದೊಂದಿಗೆ ವಾಪಸ್ಸಾಗುತ್ತಿದ್ದ ಬೊಮ್ಮಾಯಿಗೆ ಈ ಬಾರಿ ರಾಜ್ಯ ಕಾರ್ಯಕಾರಿಣಿ ಮುಗಿಯಲಿ ಎನ್ನುವ ಕಾರಣ ನೀಡಿ ವಾಪಸ್ ಕಳುಹಿಸಲಾಗಿದೆ.

ಏಪ್ರಿಲ್ 16-17ರಂದು ಹೊಸಪೇಟೆಯಲ್ಲಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಆಗಮಿಸಲಿದ್ದಾರೆ. ಕಾರ್ಯಕಾರಿಣಿ ನಂತರ ಸಂಪುಟ ವಿಸ್ತರಣೆ ಕುರಿತು ಪ್ರತ್ಯೇಕ ಮಾತುಕತೆ ನಡೆಸಿ ನಿರ್ಧರಿಸೋಣ ಎನ್ನುವ ಭರವಸೆ ನೀಡಿ ಕಳುಹಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದಾಗ ಸಿಂಗಲ್ ಮ್ಯಾನ್ ಕ್ಯಾಬಿನೆಟ್ ಇತ್ತು. ರಾಜ್ಯದಲ್ಲಿ ನೆರೆ ಹಾವಳಿ ಬಂದರೂ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಲು ಹೈಕಮಾಂಡ್ ಆಟವಾಡಿಸಿತ್ತು. ತಿಂಗಳುಗಟ್ಟಲೆ ಕಾಯಿಸಿತ್ತು. ನಂತರ ಸಂಪುಟ ವಿಸ್ತರಣೆ ವಿಚಾರದಲ್ಲಿಯೂ ಯಡಿಯೂರಪ್ಪ ದೆಹಲಿ ರೌಂಡ್ ಹೊಡೆದು ಹೊಡೆದು ಸುಸ್ತಾಗಿದ್ದರು. ಈಗ ಬೊಮ್ಮಾಯಿ ಕೂಡ ಬೆಂಗಳೂರು ದೆಹಲಿ ಪ್ರವಾಸ ಮಾಡುತ್ತಲೇ ಬರುತ್ತಿದ್ದಾರೆ. ಆದರೆ ಸಂಪುಟ ವಿಸ್ತರಣೆಗೆ ಅವಕಾಶ ಮಾತ್ರ ಸಿಗುತ್ತಿಲ್ಲ.

ಇದನ್ನೂ ಓದಿ: ಅಲ್ಪಸಂಖ್ಯಾತರ ಓಲೈಕೆಗಾಗಿ ಎಷ್ಟು ದಿನ ಸುಳ್ಳು ಸುದ್ದಿ ಹಬ್ಬಿಸುತ್ತೀರಿ?: ರೇಣುಕಾಚಾರ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.