ETV Bharat / state

ಬೆಸ್ಕಾಂ ಗ್ರಾಹಕರಿಗೆ ವಾಟ್ಸ್​​ಆ್ಯಪ್ ಸಹಾಯವಾಣಿ ಸೌಲಭ್ಯ - WhatsApp helpline

ವಿದ್ಯುತ್ ಸಂಬಂಧಿತ ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಒಟ್ಟು 11 ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಇಂದು ಬಿಡುಗಡೆ ಮಾಡಲಾಯಿತು..

WhatsApp helpline for Bescom customers
ಬೆಸ್ಕಾಂ ಗ್ರಾಹಕರಿಗೆ ವಾಟ್ಸ್​​ಆ್ಯಪ್ ಸಹಾಯವಾಣಿ ಸೌಲಭ್ಯ
author img

By

Published : May 24, 2022, 1:47 PM IST

ಬೆಂಗಳೂರು : ವಿದ್ಯುತ್ ವ್ಯತ್ಯಯ ಹಾಗೂ ವಿದ್ಯುತ್ ಸಂಬಂಧಿತ ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಒಟ್ಟು 11 ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಇಂಧನ ಸಚಿವ ಸುನಿಲ್ ಕುಮಾರ್ ಇಂದು ಬಿಡುಗಡೆ ಮಾಡಿದರು.

ಮಳೆಗಾಲ ಹಾಗೂ ತುರ್ತು ಸಂದರ್ಭಗಳಲ್ಲಿ ಬೆಸ್ಕಾಂನ ಹಾಲಿ ಸಹಾಯವಾಣಿ ಸಂಖ್ಯೆ 1912ಕ್ಕೆ ಸಾವಿರಾರು ಕರೆಗಳು ಬರುತ್ತಿವೆ. ನಿರಂತರ ಕಾರ್ಯ ನಿರ್ವಹಣೆಯಲ್ಲಿರುತ್ತದೆ. ಈ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸಹಾಯವಾಣಿ ಕರೆ ಲಭ್ಯವಾಗದೇ ಇರುವ ಹಿನ್ನೆಲೆಯಲ್ಲಿ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಪ್ರತಿ ಜಿಲ್ಲೆಗೆ ಒಂದರಂತೆ ನೀಡಲು ಸೂಚಿಸಿದ್ದೆ. ಈ ಹಿನ್ನೆಲೆಯಲ್ಲಿ ಇಂದು ಅದಕ್ಕೆ ಚಾಲನೆ ನೀಡಿದ್ದಾಗಿ ಸಚಿವರು ಮಾಧ್ಯಮಗಳಿಗೆ ತಿಳಿಸಿದರು.

ಬೆಸ್ಕಾಂ ಗ್ರಾಹಕರು 1912 ಸಹಾಯವಾಣಿ ಜೊತೆಗೆ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗಳ ಪ್ರಯೋಜನವನ್ನು ಇನ್ಮುಂದೆ ಪಡೆಯಬಹುದು. ಒಟ್ಟು 11 ವಾಟ್ಸ್ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಬೆಸ್ಕಾಂ ಒದಗಿಸಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗೂ ಪಶ್ಚಿಮ ವೃತ್ತಗಳಿಗೆ 4 ವಾಟ್ಸ್‌ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ವಾಟ್ಸ್‌ಆ್ಯಪ್ ಸಂಖ್ಯೆಯನ್ನು ಒದಗಿಸಲಾಗಿದೆ ಎಂದು ವಿವರಿಸಿದರು.

ವಾಟ್ಸ್‌ಆ್ಯಪ್ ಸಹಾಯವಾಣಿ ವಿವರ:

  • ಬೆಂಗಳೂರು ನಗರ ದಕ್ಷಿಣ ವೃತ್ತ: 8277884011.
  • ಬೆಂಗಳೂರು ನಗರ ಪಶ್ಚಿಮ ವೃತ್ತ: 8277884012.
  • ಬೆಂಗಳೂರು ನಗರ ಪೂರ್ವ ವೃತ್ತ: 8277884013.
  • ಬೆಂಗಳೂರು ನಗರ ಉತ್ತರ ವೃತ್ತ: 8277884014.
  • ಕೋಲಾರ ಜಿಲ್ಲೆ: 8277884015.
  • ಚಿಕ್ಕಬಳ್ಳಾಪುರ ಜಿಲ್ಲೆ: 8277884016.
  • ಬೆಂಗಳೂರು ಗ್ರಾಮಾಂತರ ಜಿಲ್ಲೆ: 8277884017.
  • ರಾಮನಗರ ಜಿಲ್ಲೆ: 8277884018.
  • ತುಮಕೂರು ಜಿಲ್ಲೆ: 8277884019.
  • ಚಿತ್ರದುರ್ಗ ಜಿಲ್ಲೆ: 8277884020.
  • ದಾವಣಗರೆ ಜಿಲ್ಲೆ: 8277884021

ವಿದ್ಯುತ್ ವ್ಯತ್ಯಯದ ಕುರಿತು ಗ್ರಾಹಕರು ವಾಟ್ಸ್‌ಆ್ಯಪ್ ಸಂದೇಶಗಳನ್ನು ಕಳುಹಿಸಿದ ಕೂಡಲೇ ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮಕೈಗೊಳ್ಳಲಿದ್ದಾರೆ.

ಇತ್ತೀಚೆಗೆ ಸುರಿದ ಭಾರೀ ಗಾಳಿ, ಮಳೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಬೆಸ್ಕಾಂ 1912 ಸಹಾಯವಾಣಿ ಕೇಂದ್ರವನ್ನು ಇನ್ನಷ್ಟು ಬಲಪಡಿಸಲು ನಿರ್ಧರಿಸಲಾಗಿದೆ. ಸಹಾಯವಾಣಿ ಕೇಂದ್ರದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಆರೋಪಿ ಕಾಲಿಗೆ ಗುಂಡೇಟು : ಫೋಟೋ ನೋಡಿ ಆತ್ಮಸ್ಥೈರ್ಯ ಹೆಚ್ಚಿಸಿಕೊಂಡ ಆ್ಯಸಿಡ್ ಸಂತ್ರಸ್ತೆ

ಸಹಾಯಕ ಕಾರ್ಯನಿರ್ವಾಹಕ ಇಂಜಿನಿರ್​ಗಳನ್ನು ಮೂರು ಪಾಳಿಗಳಲ್ಲಿ ಸಹಾಯವಾಣಿ ಕೇಂದ್ರದಲ್ಲಿ ನಿಯೋಜಿಸಲಾಗಿದೆ. ಇದರಿಂದ ಸಹಾಯವಾಣಿ ಮತ್ತು ಬೆಸ್ಕಾಂ ವಿಭಾಗ ಹಾಗೂ ಉಪ ವಿಭಾಗಳ ನಡುವೆ ಸಮನ್ವಯ ಸಾಧಿಸಲು ಅನುಕೂಲವಾಗುತ್ತದೆ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.